Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಟು ಟೀಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.15: ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!! 'ಬ್ರ್ಯಾಂಡ್' ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಕುಮಾರಸ್ವಾಮಿ ಅವರು ದೂರಿದ್ದಾರೆ.

ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನೂರು ಎಕರೆ ಸರಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿಯ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ