Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.8: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಮುಖ್ಯವಾಗಿ ಗೃಹಲಕ್ಷ್ಮಿ ಕಾರ್ಯಕ್ರಮದಲ್ಲಿ ಮತ್ತೊಂದು ಗೊಂದಲ ತಂದಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಅವರು, ಅವರೊಬ್ಬ ಸಚಿವರಷ್ಟೇ ಅಲ್ಲ, ಬಹುತೇಕ ಎಲ್ಲ ಸಚಿವರಿಗೆ ಗ್ಯಾರಂಟಿಗಳ ಯಾವ ಗ್ಯಾರಂಟಿಯೂ ಇಲ್ಲ ಎಂದರು.

ಇದು ಒಂದು ಕಾರ್ಯಕ್ರಮದ ಗೊಂದಲ ಅಲ್ಲ, ಐದು ಕಾರ್ಯಕ್ರಮಗಳ ಗೊಂದಲ. ಯಾರಿಗೂ ಯಾವ ಸ್ಪಷ್ಟತೆಯೂ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಗ್ಯಾರಂಟಿಗಳು ಲೇವಡಿಯ ವಸ್ತುವಾಗಿವೆ. ಮಾಧ್ಯಮಗಳಲ್ಲಿ ಕೂಡ ಇವುಗಳ ಬಗ್ಗೆ ಸಾಕಷ್ಟು ನಕಾರಾತ್ಮಕ ವರದಿಗಳು ಬರುತ್ತಿವೆ ಎಂದು ಕುಮಾರಸ್ವಾಮಿ ಅವರು ಉಲ್ಲೇಖ ಮಾಡಿದರು.

ಗೃಹಜ್ಯೋತಿ ಯೋಜನೆಯ ಬಗ್ಗೆ ಹೇಳುವುದೇ ಬೇಡ ಎನಿಸುತ್ತದೆ. ಏಕೆಂದರೆ, ಇಂಧನ ಇಲಾಖೆಯನ್ನು ಮುನ್ನಡೆಸುತ್ತಿರುವ ಸಚಿವರಾದ ಜಾರ್ಜ್ ಅವರಿಗೆ ಈ ಕಾರ್ಯಕ್ರಮ ಅರ್ಥ ಆಗಿಲ್ಲ. ಅವರು ತಾಳಮೇಳ ಇಲ್ಲದ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಅವರಿಗೆ ಇಲ್ಲ, ಯಾಕೆ ಅಧಿಕಾರಿಗಳು ಅವರಿಗೆ ಮಾಹಿತಿ ನೀಡುತ್ತಿಲ್ಲವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅತೀವ ಕುತೂಹಲ, ನಿರೀಕ್ಷೆ ಹುಟ್ಟು ಹಾಕಲಾಗಿತ್ತು. ಕೊನೆಪಕ್ಷ ಆ ಇಲಾಖೆಗಳನ್ನು ಮುನ್ನಡೆಸುವ ಇಬ್ಬರೂ ಸಚಿವರಿಗೆ ಈ ಕಾರ್ಯಕ್ರಮಗಳ ಬಗ್ಗೆ ಖಾತರಿ, ಸ್ಪಷ್ಟತೆ ಇಲ್ಲ ಎನ್ನುವುದು ಅವರ ಹೇಳಿಕೆಗಳಿಂದ ಗೊತ್ತಾಗುತ್ತದೆ. ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು ಎನ್ನುವುದು ನನಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಈಗ ನೋಡಿದರೆ ಸರಕಾರ ಸಬೂಬುಗಳ ಪಟ್ಟಿ ಮಾಡಿಕೊಂಡು ಕಾಲಹರಣ ಮಾಡುತ್ತಿದೆ, ಜನರ ನಂಬಿಕೆಯ ಹರಣ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಇಂಧನ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವ ಮಾಹಿತಿ ನನಗೂ ಇದೆ. ಹಿಂದೆ ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿದ್ದರು. ಆಗ ಇಂಧನ ಇಲಾಖೆಯಲ್ಲಿ ನಡೆದ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡಲಾಯಿತು. ಮುಕ್ತ ಮಾರುಕಟ್ಟೆಯಲ್ಲಿ 2.30 ರೂಪಾಯಿಗೆ ಲಭ್ಯವಿದ್ದ ಸೋಲಾರ್ ವಿದ್ಯುತ್ತನ್ನು 9.50 ರೂಪಾಯಿ ಕೊಟ್ಟು ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ವಿಚಿತ್ರವೆಂದರೆ, ಆ ಸದನ ಸಮಿತಿ ಕಥೆ ಏನಾಯಿತು ಎಂದರೆ ಕುರಿ ಕಾಯಲು ತೊಳವನ್ನೆ ಬಿಟ್ಟಂತೆ ಆಯಿತು. ಈಗ ನಾನು ಕೇಳುತ್ತೇನೆ, ತಾಕತ್ತು ಇದ್ದರೆ ಈಗ ಆ ಒಪ್ಪಂದವನ್ನು ರದ್ದು ಮಾಡಿ ಎಂದು ರಾಜ್ಯ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಅವರು ಸವಾಲು ಹಾಕಿದರು.

ಈ ಒಪ್ಪಂದದ ಬಗ್ಗೆ ಸಾಕಷ್ಟು ದೂರು ಬಂದ ಬೆನ್ನಲ್ಲೇ ಅಂದು ನಾನು ವಿಧಾನಸಭೆಯಲ್ಲಿ ಚರ್ಚೆ ಮಾಡಿದೆ. 25 ವರ್ಷಕ್ಕೆ ಅಗ್ರಿಮೆಂಟ್ ಮಾಡಿದ್ದು ಸರಿಯಲ್ಲ ಎಂದು ನಾನೇ ನೇರವಾಗಿ ಹೇಳಿದೆ. ಸದನ ಸಮಿತಿಗೂ ನಾನು ಹೇಳಿದ್ದೆ. ಆದರೆ ಅಲ್ಲಿಗೆ ತೋಳವನ್ನೇ ತಂದರೆ ಹೇಗೆ.. ಕುರಿ ಕಾಯೋಕೆ ತೋಳ ತಂದ ಹಾಗಾಯ್ತು ಅಷ್ಟೆ ಎಂದು ಅವರು ಹೇಳಿದರು.

2013-18ರಲ್ಲಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಅದಿರು ಸಾಗಣೆ ಕುರಿತಂತೆ ಸದನ ಸಮಿತಿ ರಚನೆ ಮಾಡಲಾಗಿತ್ತು. ಸುದೀರ್ಘ ಪರಿಶೀಲನೆ ನಂತರ ಹೆಚ್.ಕೆ.ಪಾಟೀಲ್ ಅವರು ಒಂದು ವರದಿ ನೀಡಿದ್ದರು. ಬಿಜೆಪಿಯನ್ನು 40 ಪರ್ಸೆಂಟ್ ಪಾರ್ಟಿ ಎಂದವರು ಈ ವರದಿಯನ್ನು ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.

ಆ ವರದಿಯಲ್ಲಿ ಬೆಚ್ಚಿ ಬೀಳಿಸುವ ಅಂಶಗಳಿವೆ. 35 ಕೋಟಿ ಟನ್ ಅದಿರು ಅಕ್ರಮವಾಗಿ ರಫ್ತಾಗಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಆ ಅದಿರಿನ ಮೌಲ್ಯ 1.43 ಲಕ್ಷ ಕೋಟಿ ರೂಪಾಯಿ! ಅಂದು ಹೆಚ್.ಕೆ.ಪಾಟೀಲ್ ಅವರು ಕೊಟ್ಟ ಈ ವರದಿಯಲ್ಲಿ ಈ ವಿಚಾರ ಅಡಗಿದೆ. ಈ ವರದಿಯನ್ನು ಅಂದು ಮುಖ್ಯಮಂತ್ರಿಗಳು ತಮ್ಮ ಸೀಟ್ ಕೆಳಗೆ ಇಟ್ಟುಕೊಂಡಿರಲ್ಲ, ಅದನ್ನು ಈಗ ಬಹಿರಂಗ ಮಾಡಿ. ಅದನ್ನು ತಿಂದವರಿಂದ ಹೊರಗೆ ಕಕ್ಕಿಸಿದರೆ ಈ ಗ್ಯಾರಂಟಿಗಳಿಗೆ ಹಣ ಕೊಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಪಠ್ಯ ಗೊಂದಲ ಬೇಡ:

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಅವರು, ಮಕ್ಕಳ ವಿಚಾರದಲ್ಲಿ ರಾಜ್ಯ ಸರಕಾರ ಚೆಲ್ಲಾಟ ಆಡುತ್ತಿದೆ ಎಂದರು.

ಹಿಂದಿನ ಸರಕಾರ ಈಗಾಗಲೇ ಪಠ್ಯ ಬದಲಾವಣೆ ಮಾಡಿದೆ. ಆ ಬಗ್ಗೆ ಸಾಕಷ್ಟು ಗೊಂದಲ ಆಗಿತ್ತು. ಈಗ ಈ ಸರಕಾರವೂ ಅದೇ ದಾರಿಯಲ್ಲಿ ಇದೆ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ಕಳಿಸಲಾಗಿದೆ. ಇದು ಜನರ ದುಡ್ಡಲ್ಲವೇ? ಎಂದು ಅವರು ಹೇಳಿದರು.

ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು. ಮಕ್ಕಳಿಗೆ ಒಳ್ಳೆಯ ಜ್ಞಾನ ತುಂಬಬೇಕು. ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮೇಲೆ ಪರಿಣಾಮ ಬೀಳುವಂತೆ ಮಾಡುವುದು ಬೇಡ. ಸರಕಾರದ ಪ್ರಾರಂಭಿಕ ಹಂತದಲ್ಲಿ ಯಾವ ರೀತಿಯ ಗೊಂದಲ ಬಿತ್ತನೆ ಮಾಡಿದರೆ ಹೇಗೆ? ಇನ್ನೂ ಐದು ವರ್ಷದ ಕಥೆ ಏನು? ಎನ್ನುವುದು ನನ್ನ ಪ್ರಶ್ನೆಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ