Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ: ಹೆಚ್.ಡಿ.ಕುಮಾರಸ್ವಾಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ30: ಭರವಸೆ ನೀಡಿದ್ದೀರಿ, ಗೆದ್ದು ಅಧಿಕಾರ ಹಿಡಿದಿದ್ದೀರಿ. ಐದು ಗ್ಯಾರಂಟಿ ಜಾರಿ ಮಾಡುವುದು ನಿಮ್ಮ ಜವಾಬ್ದಾರಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಟಿ ಬೀಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ನೆಪ ಹೇಳದೆ ಗ್ಯಾರಂಟಿಗಳನ್ನು ಜಾರಿ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ರಾಜ್ಯ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ. ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಅವರು ಹೇಳಿದ್ದಾರೆ.

ಅದು ಬಿಟ್ಟು 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದಿದ್ದಾರೆ ಅಲ್ಲದೆ, 'ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ' ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ