Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ನಾರಾಯಣಗೌಡ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.1: ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಮಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ವಿಚಾರದ ಬಗ್ಗೆ ಕಿಡಿಕಾರಿದರಲ್ಲದೆ ಅಂತಹ ಅಧಿಕಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರಿಗೆ ಧಮ್ಕಿ, ಕಿರುಕುಳ ಕೊಡುವುದು ಆಗ್ತಿದೆ. ಚುನಾವಣೆ ಬಂದಾಗಿನಿಂದ ಅದು ಜಾಸ್ತಿಯಾಗಿದೆ. ಬೇರೆ ಪಕ್ಷದಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬರುವವರನ್ನು  ಕೆಲ ಕಡೆ ಪೋಲಿಸರ ಮಧ್ಯಸ್ಥಿಕೆಯಲ್ಲಿ ಹೆದರಿಸಿ ಅವರನ್ನು ಪುನಾ ಅದೇ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಎಂದು ಅವರು ಹೇಳಿದರು.

ನಾನು ಪೋಲಿಸರಿಗೆ ಎಚ್ಚರಿಕೆ ಕೊಡುತ್ತೇನೆ. ಇನ್ನೊಂದು ತಿಂಗಳು ಅಷ್ಟೇ ನಿಮ್ಮ ಸಮಯ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಜೂನ್ ತಿಂಗಳ ಬಳಿಕ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ನೀಡಿದರು.

ರಾಜ್ಯದ ಜನತೆಯ ಹಣದಿಂದ ನೀವು ಕೆಲಸ ಮಾಡ್ತಿದ್ದೀರಿ ಅನ್ನೋದನ್ನ ಅಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನಾನೂ ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. ಎಂದೂ ಇಂಥ ದ್ವೇಷದ ರಾಜಕೀಯಕ್ಕೆ ಪ್ರೋತ್ಸಾಹ ಕೊಟ್ಟಿಲ್ಲ. ಅಧಿಕಾರಿಗಳು ತಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಎಚ್ಚರಿಕೆ ನೀಡಿದರು.

ನನ್ನ ಪಕ್ಷವನ್ನು ಹಾಳು ಮಾಡಿಕೊಳ್ಳಬೇಕಾ?
ಒಬ್ಬರನ್ನು ತುಳಿಯಲು ಇನ್ನೊಬ್ಬರನ್ನು ಬೆಳೆಸುತ್ತಾರೆ ಎಂಬ ನಾರಾಯಣಗೌಡರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ನಾರಾಯಣಗೌಡರನ್ನು ಬೆಳೆಸೋಕೆ ನನ್ನ ಪಕ್ಷವನ್ನು ಹಾಳು ಮಾಡಿಕೊಳ್ಳಬೇಕಾ? ಇವರು ಮಹಾನ್ ಕೆಲಸ ಮಾಡಿದ್ದಾರೆ ಅಂತ ಹೇಳಿ ನಾನು ಅಭ್ಯರ್ಥಿ ಹಾಕದೇ‌ ಇರಲಾ? ಕೃಷ್ಣ ವಿರುದ್ದ ಅಭ್ಯರ್ಥಿ ಆಗಬೇಕು ಅಂತ ಬಂದಾಗ ಅವತ್ತು ಈ ಪರಿಜ್ಞಾನ ಇರಲಿಲ್ಲವಾ ಇವರಿಗೆ? ಕೃಷ್ಣ ವಿರುದ್ದ ಅಭ್ಯರ್ಥಿ ಆಗೋಕೆ ಯಾಕೆ ಬಂದರು ಇವರು. ಎರಡನೇ ಬಾರಿ ನಿನಗೆ ಟಿಕೆಟ್ ಕೊಡಬಾರದು ಅಂತ ಇದ್ದಿದ್ದು. ಆದರೂ ಟಿಕೆಟ್ ಕೊಟ್ಟೆವು. ನಾನು ಟಿಕೆಟ್ ಕೊಡಿಸಿದ್ದು ನಾನು. ಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ