Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಾಣ ಕರ್ನಾಟಕದಲ್ಲಿ ನೆರೆ: ತುರ್ತು ಪರಿಹಾರಕ್ಕೆೆ ಎಚ್‌ಡಿಕೆ ಆಗ್ರಹ

ಸುದ್ದಿಮೂಲ ವಾರ್ತೆ ನವದೆಹಲಿ, ಸೆ.28:
ಕಲ್ಯಾಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆೆ ತುತ್ತಾಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಾಯ ಮಾಡಿದ್ದಾರೆ.
ಈ ಬಗ್ಗೆೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಲ್ಯಾಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಾಗಿ ನಾನು ಹೃದಯಪೂರ್ವಕವಾಗಿ ಪ್ರಾಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ ಎಂದು ಅವರು ಒತ್ತಿಿ ಹೇಳಿದ್ದಾರೆ.
ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಾಯಿಸುತ್ತೇನೆ. ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. ಎನ್‌ಡಿಆರ್‌ಎ್ ಮತ್ತು ಎಸ್ಡಿಿಆರ್‌ಎ್ ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ.
ವಿದ್ಯಾಾರ್ಥಿಗಳ ಬಗ್ಗೆೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆೆಲ್ ಮತ್ತು ಶಿಕ್ಷಣ ಸಂಸ್ಥೆೆಗಳನ್ನು ತಕ್ಷಣವೇ ತಾತ್ಕಾಾಲಿಕ ಪರಿಹಾರ ಆರೋಗ್ಯ ಕೇಂದ್ರಗಳನ್ನಾಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆೆ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಜನರ ಪ್ರಾಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿಿತಿ ಹೃದಯವಿದ್ರಾಾವಕವಾಗಿದ್ದು, ಅವರಿಗೆ ಸೂಕ್ತ, ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು ಹಾಗೂ ಪ್ರಾಾಣಿಗಳು ಅತೀವ ಸಂಕಷ್ಟಕ್ಕೆೆ ತುತ್ತಾಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿಿತಿಯಲ್ಲಿಡಬೇಕು ಎಂದು ಸಚಿವರು ಒತ್ತಾಾಯ ಮಾಡಿದ್ದಾರೆ.
ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆೆ ತುತ್ತಾಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಸಚಿವ ಕುಮಾರಸ್ವಾಾಮಿ ಅವರು ಭರವಸೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ