Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈತ್ರಿಯಿಂದ ಯಾರೊಬ್ಬರ ರಾಜಕೀಯ ಭವಿಷ್ಯಕ್ಕೆ ಧಕ್ಕೆ ಇಲ್ಲ: ಎಚ್‌ಡಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.1:ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಈ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.



ಬಿಡದಿಯ ಕೇತಿಗಾನಹಳ್ಳಿಯ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೇ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.

ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ. ಕಾಂಗ್ರೆಸ್ ನವರ ರೀತಿಯಲ್ಲಿ ನಾನು ಸುಳ್ಳು ಹೇಳುವುದಿಲ್ಲ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಸ್ಪಷ್ಪ ಮಾತುಗಳಲ್ಲಿ ಹೇಳಿದರು.

ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಮಾಡಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇನ್ನೈದು ವರ್ಷಗಳಲ್ಲಿ ಅದೆಲ್ಲ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ನುಡಿದರು.

ನಮ್ಮ ಪಕ್ಷ ಬಲವಾಗಿದೆ, ಒಗ್ಗಟ್ಟಾಗಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿ. ಗೆದ್ದವರು, ಸೋತವರು ಸಂಕಟದಲ್ಲಿ ಇದ್ದೀರಿ, ಅದನ್ನು ಸರಿ ಮಾಡುತ್ತೇನೆ ಎಂದ ಅವರು; ಈ ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು. ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ ಎಂದು ಅವರು ಭಾವುಕರಾಗಿ ಹೇಳಿದರು.

ಮಿಸ್ಟರ್ ಡಿ.ಕೆ.ಶಿವಕುಮಾರ್.. ನಿಮ್ಮ ಕಸನು ಈಡೇರಲ್ಲ

ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಹೇಳಿದ್ದೀರಿ ಮಿಸ್ಟರ್ ಡಿ.ಕೆ.ಶಿವಕುಮಾರ್.. ನಿಮ್ಮ ಕಸನು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಡಿಕೆ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ, ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಮಾತಿನುದ್ಧಕ್ಕೂ ತಮ್ಮ ಪಕ್ಷವನ್ನು ದುರ್ಬಲಗೊಳಿಸಲು ಕುತಂತ್ರ ರೂಪಿಸಿರುವ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿಗಳು ಹರಿಹಾಯ್ದರಲ್ಲದೆ, ಆ ವ್ಯಕ್ತಿಗೆ ಉತ್ತರ ಕೊಡಬೇಕು, ಕೊಡುವ ಕೆಲಸ ಮಾಡುತ್ತೇವೆ. ಇವತ್ತು ಕುಮಾರಸ್ವಾಮಿ ಅವರು ಗಟ್ಟಿಯಾದ ಸಂದೇಶ ಕೊಟ್ಟಿದ್ದಾರೆ ಎಂದರು.

ನಮ್ಮ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಹಾಗೆ ಭಾವಿಸಿದ್ದರೆ ಅದು ಅವರ ಭ್ರಮೆ ಅಷ್ಟೇ. ಈ ಸಭೆ ಬಹಳ ಚೆನ್ನಾಗಿ ನಡೆದಿದೆ. ಕುಮಾರಸ್ವಾಮಿ ಅವರಿಗೆ ಇವತ್ತು ಒಳ್ಳೆಯ ಸಂದೇಶ ನೀಡಿದ್ದಾರೆ. ಪಕ್ಷದ ಶಕ್ತಿ ಏನು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಈ ಸಭೆಗೆ ಬಂದ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದು ಹೇಳಿದರು.

ಈ ರಾಜಕಾರಣ ಅಧಿಕಾರಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ. ಆದರೆ, ನಾನೆಂದೂ ಅದನ್ನು ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿಲ್ಲ. ಆದರೆ, ಕಾಂಗ್ರೆಸ್ ನವರು ರಾಜಕೀಯವನ್ನು ಅದೆಷ್ಟು ಕನಿಷ್ಠ ಮಟ್ಟಕ್ಕೆ ಇಳಿಸಬೇಕೋ ಅಷ್ಟು ಮಾಡಿದ್ದಾರೆ. ಸಿದ್ದಾಂತ ಎನ್ನುವುದು ಆ ಪಕ್ಷದಲ್ಲಿ ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಮುಗಿದು ಹೋಯಿತು ಎಂದು ಅವರು ಟೀಕಾಪ್ರಹಾರ ನಡೆಸಿದರು.

ಪಕ್ಷವನ್ನು ಕಟ್ಟುತ್ತೇನೆ, ಈ ಜೀವ ಇರುವವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ, ಎಲ್ಲ ಕಡೆ ಹೋರಾಟ ಮಾಡುತ್ತೇನೆ. ನನ್ನ ಆರೋಗ್ಯವನ್ನು ಲೆಕ್ಕ ಮಾಡುವುದಿಲ್ಲ ಎಂದ ಅವರು; ಉತ್ತರ ಕರ್ನಾಟಕದ ಜನತೆಗೆ ಒಳ್ಳೆಯದು ಮಾಡಿದ್ದೇನೆ. ಶಿವಶರಣರ ಕೈಲಿ ಅನ್ನ ಉಂಡಿದ್ದೇನೆ. ಆ ಋಣವನ್ನು ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಗದ್ಗದಿತರಾರು ಅವರು.

ಇಬ್ರಾಹಿಂ ಬಗ್ಗೆ ಲಘುವಾಗಿ ಮಾತನಾಡಲ್ಲ:

ಇಬ್ರಾಹಿಂ ಬಗ್ಗೆ ನಾನು ಲಘುವಾಗಿ ಮಾತನಾಡಲಿಲ್ಲ ಎನ್ನುತ್ತಲೇ, ಭದ್ರಾವತಿ ದಿನಗಳನ್ನು ನೆನಪು ಮಾಡಿಕೊಂಡರು ಗೌಡರು. ಒಂದು ಸನ್ಮಾನಕ್ಕೆ ಎಂದು ಅಲ್ಲಿಗೆ ಹೋದೆ, ಅಲ್ಲಿ ನನಗೆ ಸನ್ಮಾನದ ಜತೆ ಇಬ್ರಾಹಿಂ ಅವರು ಸಿಕ್ಕಿದರು, ಕರೆದುಕೊಂಡು ಬಂದು ಯುವ ಜನತಾದಳ ಅಧ್ಯಕ್ಷರನ್ನಾಗಿ ಮಾಡಿದೆ. ಈ ಸಭೆಗೆ ಅವರನ್ನು ಕರೆ ತರಲು ತಿಪ್ಪೇಸ್ವಾಮಿ ಅವರು ಬಹಳ ಪ್ರಯತ್ನಪಟ್ಟರು ಎಂದು ದೇವೇಗೌಡರು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ