Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿಗಳ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ: ಎಚ್‌ಡಿಕೆ

 

ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.2: ಷರತ್ತುಸಹಿತವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ 'ಷರತ್ತು ಸಹಿತ' ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು.

ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ 'ಪ್ರಸಕ್ತ ಸಾಲಿಗೆ ಮಾತ್ರ' ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರಕಾರ'ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಟ್ವೀಟ್‌ಗಳನ್ನು ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ