Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಚ್‌ಡಿಕೆ - ಮೋದಿ ಭೇಟಿ : ಸಚಿವ ಸುಧಾಕರ್‌ ವ್ಯಂಗ್ಯ

ಸುದ್ದಿಮೂಲ ವಾರ್ತೆ

ಮೈಸೂರು, ಆ.18 : ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೀಗ ಪದೇ ಪದೇ ಮೋದಿ ಅವರನ್ನೇ ಭೇಟಿ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್‌ ಟೀಕಿಸಿದ್ದಾರೆ.

ಸರ್ಕಾರದ ವಿರುದ್ಧ ವೈಎಸ್ಟಿ, ಎಸ್ಎಸ್ಟಿ ಟ್ಯಾಕ್ಸ್ ಎಂದು ಮಾಡಿದ್ದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ವೈಯಕ್ತಿಕವಾಗಿ ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವ ಇದೆ. ನಾವು ಹೆಚ್ ಡಿಕೆ ಟ್ಯಾಕ್ಸ್ ಅಂತ ಹೆಸರು ಕೊಡಬಹುದು. ಹಳೇ ಮೈಸೂರು ಭಾಗದಲ್ಲಿ ಅವರ ಅವಕಾಶವಾದಿ ರಾಜಕಾರಣ ಎಲ್ಲರಿಗೂ ಗೊತ್ತಿದೆ. ರಾಜ್ಯಾಧ್ಯಕ್ಷರನ್ನು ಬಿಟ್ಟು ಕುಟುಂಬ ರಾಜಕಾರಣ ಮಾಡ್ತಾರೆ. ಇಂತವರು ಕಾಂಗ್ರೆಸ್ ಬಗ್ಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದರು.

ಮೋದಿ ನೋಡಿ ಮತ ಹಾಕಿಲ್ಲ

ಬಿಜೆಪಿಯವರು ಹತಾಶರಾಗಿದ್ದು, ಅವರಿಗೆ ಗಾಯದ ಮೇಲೆ ಉಪ್ಪು ಸುರಿದ ಹಾಗೆ ಆಗಿದೆ. ರಾಜ್ಯದಲ್ಲಿ ಮೋದಿ ಪರವಾದ ಅಲೆ ಇಲ್ಲ. ಮೋದಿಯವರ ಮುಖ ನೋಡಿ ಯಾರೂ ಮತ ಹಾಕುತ್ತಿಲ್ಲ ಎಂದು ಟೀಕಿಸಿದರು.

ನಾಲ್ಕು ಗ್ಯಾರಂಟಿಗಳು ಜನರನ್ನ ತಲುಪುತ್ತಿವೆ. ಇದು ಬಿಜೆಪಿಯವರ ನಿದ್ದೆ ಕೆಡಿಸಿದೆ. ಹಾಗಾಗಿ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಬಿಜೆಪಿ ಕಳೆದ ಹಲವು ವರ್ಷಗಳಿಂದ ಪ್ರಬಲವಾಗಿರುವವರ ಮೇಲೆ ದಾಳಿ‌ ಮಾಡುತ್ತಿದೆ. ಐಟಿ, ಇಡಿ ಮೂಲಕ ಪ್ರತಿ ಪಕ್ಷಗಳ ಹತ್ತಿಕ್ಕುವ ಕೆಲಸ ಆಗುತ್ತಿದೆ. ಜಾರಿ ನಿರ್ದೇಶನಾಲಯದ ಸಂಸ್ಥೆಗಳನ್ನು ತಮ್ಮ ಅಣತಿಯಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ