Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಣಿಯಲು ಬಿಟ್ಟು ನೆಲ ಅಗೆದರು: ಎಚ್‌ಡಿಕೆ ತಿರುಗೇಟು

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.24: ಕುಣಿಯಲಾರದವರಿಗೆ ನೆಲ ಡೊಂಕು ಎಂದು ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕುಣಿಯಲಾರದನಿಗೆ ನೆಲ ಡೊಂಕು ಎಂಬ ಮಾತೇನು ಸರಿ, ಕುಣಿಯಲು ಬಿಟ್ಟು ನೆಲ ಅಗೆಯುವ ಮೈತ್ರಿ ದ್ರೋಹಕ್ಕೆ ಏನು ಹೇಳುವುದು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದ್ದಾರೆ.

ವಿಜಯದಶಮಿ ದಿನವಾದ ಇಂದು ಬೆಳಿಗ್ಗೆಯೇ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ, ಮೀರ್ ಸಾಧಿಕನ ಆಧುನಿಕ ಅವತಾರಿಯಾಗಿರುವ ನಿಮಗೆ ಇಂಥ ಶುದ್ರ ವಿದ್ಯೆಗಳೆಲ್ಲ ಕರತಲಮಲಕ. ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಗಮ ಗುಂಡಿಗೆ ಸಾಲದೇ, ನೇರವಾಗಿ ಸತ್ಯ ಹೇಳಲು ಭಯವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದವನದಲ್ಲಿ ಹೆಣೆದ ಸಿದ್ದ ಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವಲ್ಲವೇ, ಬೆಕ್ಕು ಕಣ್ಮುಚ್ಚಿ ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ ಅಥವಾ ಕಿಡಿಗೇಡಿತನವೋ ಎಂದು ವ್ಯಂಗ್ಯವಾಡಿರುವ ಕುಮಾರಸ್ವಾಮಿ, ಇಂಥ ಸಿದ್ದ ಲೀಲೆಗಳು ನಮಗೇನೂ ಹೊಸತಲ್ಲ. ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆಯಾಗಿದ್ದ ಬಂಗಲೆ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂತಹ ಸಭ್ಯತೆ, ಅದೆಂತ ಶೋಭೆ ಎಂದು ವ್ಯಂಗ್ಯವಾಡಿದ್ದಾರೆ.

ವೆಸ್ಟೆಂರ್ಡ್‌ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ. ಆದರೆ ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದ ಲೀಲೆಯನ್ನು ಬಹಿರಂಗ ಮಾಡುವಿರಾ, ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ