Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ರಕ್ಷಾ ಹಾಗೂ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಜು 14 : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಅಸೌಖ್ಯದಿಂದ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ 18 ಮಂದಿ ಸದಸ್ಯರಿಗೆ ಆರೋಗ್ಯ ರಕ್ಷಾ ಹಾಗೂ ಸಂಪೂರ್ಣ ರಕ್ಷಾ ಮೊತ್ತವನ್ನು ವಿತರಿಸಲಾಯಿತು.

ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರಶಾಂತ್‌ ಸಿ.ಎಸ್‌ ಮಾತನಾಡಿ, ತಾಲ್ಲೂಕಿನಲ್ಲಿ 127 ಸದಸ್ಯರಿಗೆ ಒಟ್ಟು 11,11,396 ರೂಪಾಯಿ ಮೊತ್ತ ವಿತರಣೆ ಮಾಡಿದ್ದು, ಸ್ವಸಾಯ ಸಂಘದ ಸದಸ್ಯರ ಮತ್ತು ವಿನಿಯೋಗದಾರರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ರಕ್ಷಾ ಕಾರ್ಡ್ ವಾರ್ಷಿಕ ರೂ100 ಸದಸ್ಯತ್ವವನ್ನು ಹೊಂದಿ ನೋಂದಾವಣೆ ಮಾಡಿಕೊಂಡು ಸದಸ್ಯರಿಗೆ ಈ ಸವಲತ್ತುಗಳನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಸಂಘದ ಸದಸ್ಯರಿಗೆ ಸ್ವ-ಉದ್ಯೋಗ, ಆರ್ಥಿಕ ವ್ಯವಹಾರದ ಬಗ್ಗೆ ಶಿಸ್ತು ಮೂಡಿಸುವಂತ ಕೆಲಸವನ್ನು ಯೋಜನೆ ಮಾಡುತ್ತಿದ್ದು, ಜೊತೆಗೆ ಸಮುದಾಯದ ಪೂರಕವಾಗಿ ಹಲವಾರು ಕಾರ್ಯಚಟುವಟಿಕೆಗಳು ನಡೆಸಿಕೊಂಡು ಬಂದಿದೆ ಎಂದರು.

ನಗರಸಭೆಯ ಪೌರಯುಕ್ತ ಶ್ರೀಕಾಂತ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ.ವೀರೇಂದ್ರ ಹೆಗ್ಡೆಯವರು ಹಳ್ಳಿ ಹಳ್ಳಿಗಳಲ್ಲಿ ಕೂಡ ಬಡತನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಮಾಡಿದ್ದಾರೆ ಎಂದರು.

ಕರ್ನಾಟಕ ಗ್ರಾಮೀಣ ಬ್ಯಾಂಕ್‌- ಮಳ್ಳೂರು ಶಾಖೆಯ ಪ್ರಬಂಧಕ ಎಂ.ಸತ್ಯನಾರಾಯಣ್‌ ಮಾತನಾಡಿ , ಪ್ರಗತಿ ಸ್ವ ಸಹಾಯ ಸಂಘಗಳಿಗೆ ಆರ್ಥಿಕ ಅಭಿವೃದ್ಧಿಯೊಂದಿಗೆ ಸಂಸ್ಥೆ ಬ್ಯಾಂಕ್‌ ಮೂಲಕ ಒಪ್ಪಂದ ಮಾಡಿಕೊಂಡು ಸದಸ್ಯರಿಗೆ ಪ್ರಗತಿನಿಧಿ ಸಾಲ ವಿತರಣೆ ಮಾಡಿ ಸಾವಿರಾರು ಕುಟುಂಬಗಳು ಇವತ್ತು ಉತ್ತಮವಾದ ಜೀವನ ನಡೆಸಿಕೊಂಡು ಹೋಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ಸುರೇಶ್‌ಗೌಡ.ಎಸ್, ಕಚೇರಿ ಹಣಕಾಸು ಪ್ರಭಂದಕ ರಾಘವೇಂದ್ರ, ಕಚೇರಿ ಆಡಳಿತ ಪ್ರಬಂಧಕರಾದ ನವೀನ್‌ ಹಾಗೂ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ