Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ಉನ್ನತ ಶಿಕ್ಷಣ ಸಚಿವರ ಭೇಟಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.22: ಮುಂದಿನ ವರ್ಷಗಳಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಆರ್ಥಿಕ ತಜ್ಞರನ್ನು ರೂಪಿಸುವ ಜವಾಬ್ದಾರಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಮೇಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಇಂದು ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಭೇಟಿ ನೀಡಿದ ಸಚಿವರು ಭಾರತದಲ್ಲಿ ಅತ್ಯಂತ ಸದೃಢ ಎಕನಾಮಿಕ್ಸ್ ವಿಶ್ವವಿದ್ಯಾಲಯವಾಗಬೇಕು ಎಂದು ಅಭಿಪ್ರಾಯಪಟ್ಟರು.

ಈಗಾಗಲೇ ಕಳೆದ ಮೂರು ನಾಲ್ಕು ವರ್ಷಗಳಿಂದ ಎಕನಾಮಿಕ್ಸ್ ಪದವಿ ಹಾಗೂ ಸ್ನಾತಕೋತ್ತರದಲ್ಲಿ ದೇಶದ ಗಮನ ಸೆಳೆದಿರುವ ಈ ವಿಶ್ವವಿದ್ಯಾಲಯವು ಮುಂದಿನ ದಿನಗಳಲ್ಲಿ ಅತ್ಯಂತ ಭರವಸೆ ಮೂಡಿಸುವ ನಿಟ್ಟಿನಲ್ಲಿ ಸಾಗಿದೆ, ಇದೇ ರೀತಿ ಇನ್ನೂ ಹೆಚ್ಚು ಪಠ್ಯಕ್ರಮಗಳೊಂದಿಗೆ ಹೆಚ್ಚಿನ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಡಾಕ್ಟರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ಕುಲಪತಿ , ಕುಲ ಸಚಿವರು ಹಾಗೂ ಬೋಧಕ ಸಿಬ್ಬಂದಿಯೊಂದಿಗೆ ಅಭಿವೃದ್ಧಿ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು.

ಇಲ್ಲಿಯ ಶಿಕ್ಷಣ, ಬೋಧಕ ಸಿಬ್ಬಂದಿ ಮತ್ತು ರಾಜ್ಯದ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಅವಕಾಶ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣಗೊಂಡಿರುವ ಡಾಕ್ಟರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಿ ಎಲ್ಲಾ ರೀತಿಯ ಬೆಂಬಲವನ್ನು ನೀಡಲಾಗುವುದು ಎಂದು ಕುಲಪತಿ ಹಾಗೂ ಕುಲ ಸಚಿವರಿಗೆ ಭರವಸೆ ನೀಡಿದರು.

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ಕುಲಪತಿ ಎನ್ಆರ್ ಭಾನುಮೂರ್ತಿ, ಕುಲ ಸಚಿವರಾದ ಶೋಭಾ ಬಿ ಮತ್ತು ಆಡಳಿತ ಸಿಬ್ಬಂದಿ ಬೋಧಕ ಸಿಬ್ಬಂದಿ ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ