Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲರಿಗೂ, ಎಲ್ಲೆಡೆ ಉನ್ನತ ಶಿಕ್ಷಣ ದೊರೆಯಬೇಕು

ಸುದ್ದಿಮೂಲ ವಾರ್ತೆ

ಮೈಸೂರು,ಜು.2: ಉನ್ನತ ಶಿಕ್ಷಣವು ಎಲ್ಲರಿಗೂ ಹಾಗೂ ಎಲ್ಲಾ ಕಡೆಯೂ ಸಿಗಬೇಕೆಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯಗಳನ್ನು ಆರಂಭಿಸಲಾಗಿದೆ. ಅದಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸಬೇಕು ಎಂದು ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ಭಾನುವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಕರಾಮುವಿ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಮುಕ್ತ ವಿವಿಗಳು ದೂರ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕಳೆದ ಎರಡೂವರೆ ದಶಕಗಳಲ್ಲಿ ದೂರ ಶಿಕ್ಷಣದ ಮೂಲಕ ದೇಶದಾದ್ಯಂತ ಉನ್ನತ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ನ್ಯಾಕ್ ಸಂಸ್ಥೆಯಿಂದ ಎ ಪ್ಲಸ್ ಮಾನ್ಯತೆ ಪಡೆದಿದೆ ಎಂದರು.

ಗುಣಮಟ್ಟದ ಶಿಕ್ಷಣ, ಮಾರ್ಗದರ್ಶನ, ಕೌಶಲ್ಯ, ಗುಣಾತ್ಮಕ ಚಿಂತನೆ ಮತ್ತು ಭವಿಷ್ಯ ನಿರ್ಮಾಣ ಇವೆಲ್ಲವೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತವೆ. ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರ ಕೊಡುಗೆ ಅಗತ್ಯ. ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಾರ್ವಭೌಮ ರಾಷ್ಟ್ರ. ವಿಶ್ವಕಲ್ಯಾಣ ಮತ್ತು ವಿಶ್ವಶಾಂತಿಯನ್ನು ಭಾರತ ದೇಶ ಸಾರುತ್ತಿದೆ.

ಆದರೆ, ಇಂದು ಇಡೀ ವಿಶ್ವವೇ ಪರಿಸರದ ಸಮಸ್ಯೆಗಳನ್ನು ಎದುರಿಸುತ್ತಿದೆ. ಪರಿಸರವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಪ್ಲಾಸ್ಟಿಕ್ ಮುಕ್ತ ವಲಯಗಳನ್ನಾಗಿ ಮಾಡುವುದು, ಮಳೆ ನೀರು ಕೊಯ್ಲುಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಂರಕ್ಷಣೆಯ ಆದ್ಯ ಕರ್ತವ್ಯ ನಿಮ್ಮ ಮೇಲಿದೆ ಎಂದು ಕಿವಿಮಾತು ಹೇಳಿದರು.

ರಾಜ್ಯ ಹೈಕೋರ್ಟ್ ನ್ಯಾಯಾಧೀಶ ಅಶೋಕ್ ಎಸ್ ಕಿಣಗಿ ಮಾತನಾಡಿ, ವಿವಿಧ ಶೈಕ್ಷಣಿಕ ಅಧ್ಯಯನ ವ್ಯಾಸಂಗ ಕ್ರಮಗಳಲ್ಲಿ ಯಶಸ್ವಿಯಾಗಿ ಪ್ರಶಸ್ತಿಗಳನ್ನು ಮತ್ತು ಪದವಿಗಳನ್ನು ಸ್ವೀಕರಿಸುವ ಎಲ್ಲಾ ಪದವೀಧರರಿಗೆ ಹೃತ್ಪೂರ್ವಕ ಅಭಿನಂದನೆ. ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡಿ ಉನ್ನತ ಸ್ಥಾನವನ್ನು ಅಂಗೀಕರಿಸಿ ಜಾಗತಿಕ ವ್ಯಕ್ತಿಗಳಾಗಿ ಪ್ರಸಿದ್ಧಿ ಪಡೆಯಿರಿ ಎಂದು ಕರೆ ನೀಡಿದರು.

ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು, ಧನ್ವಂತ್ರಿ ಎಜುಕೇಶನಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಗಳ ಸಮೂಹದ ಮುಖ್ಯಸ್ಥರೂ ಆದ ಎನ್ ರಾಮಚಂದ್ರಯ್ಯ ಹಾಗೂ ಚಿಲ್ಡ್ರನ್ಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರು ಹಾಗೂ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್ ಎನ್ ವೆಂಕಟಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಿ. ಲೀಟ್ ಪದವಿಗಳನ್ನು ನೀಡಿರುವುದು ಅತ್ಯಂತ ಶ್ಲಾಘನೀಯ ಎಂದರು.

ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ ಅವರು ಮಾತನಾಡಿ, ಈ ಸಮಾರಂಭದಲ್ಲಿ ಕಲಾನಿಕಾಯದ ಒಬ್ಬ ಸಂಶೋಧನಾ ವಿದ್ಯಾರ್ಥಿಗೆ ಪಿ.ಹೆಚ್ ಡಿ ಪದವಿಯನ್ನು 44 ವಿವಿಧ ಪದವಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು 48 ವಿವಿಧ ಪದವಿ ವಿದ್ಯಾರ್ಥಿಗಳಿಗೆ ರಾಂಕ್ ಗಳನ್ನು ಮತ್ತು 27 ವಿವಿಧ ಪದವಿಗಳ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ 5240 ಮಹಿಳಾ ವಿದ್ಯಾರ್ಥಿಗಳೊಳಗೊಂಡಂತೆ ಒಟ್ಟು 8721 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತ್ತಕ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪ್ರಧಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

44 ಚಿನ್ನ ಪದಕ

ಘಟಿಕೋತ್ಸವದಲ್ಲಿ 52 ವಿದ್ಯಾರ್ಥಿಗಳಿಗೆ 44 ಚಿನ್ನದ ಪದಕಗಳನ್ನು ಹಾಗೂ 27 ನಗದು ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಪ್ರೊ. ಕೆ.ಎಲ್.ಎನ್ ಮೂರ್ತಿ,ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೊ. ಕೆ ಬಿ ಪ್ರವೀಣ, ಪ್ರೊ. ಲಕ್ಷ್ಮಿ ಸೇರಿದಂತೆ ಕರಾಮುವಿ ಅಧ್ಯಾಪಕ ಹಾಗೂ ಅಧ್ಯಾಪಕೇತರ ಸಿಬ್ಬಂದಿ ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ