Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಸುದ್ದಿಮೂಲ ವಾರ್ತೆ

ನ,6:2022 ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ.

ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ.

ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ.

ರಾಜ್ಯದಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು.

ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ