Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ವಿಧಾನಸಭಾ ಚುನಾವಣೆ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಬದಲಾವಣೆ: ಕೆ.ಅಣ್ಣಾಮಲೈ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.24: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಲು ಜನತೆ ತೀರ್ಮಾನಿಸಿದ್ದು, ಈ ಚುನಾವಣೆ ಮೂಲಕ ಐತಿಹಾಸಿಕ ಬದಲಾವಣೆ ಖಚಿತ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು ವಿಶ್ವಾಸ ವ್ಯಕ್ತಪಡಿಸಿದರು.



ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸದಾ ಪರಿವರ್ತನೆ ಪಕ್ಷ. ದೇಶದ ಹಿತಾಸಕ್ತಿ ಮತ್ತು ಅಭಿವೃದ್ಧಿಗೆ ಕಾಲದಿಂದ ಕಾಲಕ್ಕೆ ಬದಲಾವಣೆಗಳನ್ನು ತರುತ್ತಾ ಬಂದಿದೆ. 9 ವರ್ಷಗಳ ಹಿಂದೆ ಆರ್ಥಿಕ ಅಭಿವೃದ್ಧಿಯಲ್ಲಿ ವಿಶ್ವದಲ್ಲೇ 11 ಸ್ಥಾನದಲ್ಲಿದ್ದ ಭಾರತ, ಇದೀಗ 5 ನೇ ಪ್ರಬಲ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದೆ. ದೂರದೃಷ್ಟಿ ಮತ್ತು ಪರಿಶ್ರಮದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ನೋಟು ಅಮಾನ್ಯೀಕರಣ, ಜಿಎಸ್‍ಟಿ ಜಾರಿ, ಆತ್ಮನಿರ್ಭರತೆ, 25 ವರ್ಷಗಳ ದೂರದೃಷ್ಟಿ, ಅಮೃತಕಾಲ ಯೋಜನೆಗಳಿಂದ ದೇಶದ ಆರ್ಥಿಕತೆ ಸದೃಢವಾಗುತ್ತಿದೆ. ದೇಶದಲ್ಲಿ ಡಿಜಿಟಲ್ ನಗದು ಪಾವತಿ 10 ಲಕ್ಷ ಕೋಟಿ ರೂಪಾಯಿ ದಾಟಿದೆ. ಆದರೆ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಈ ವ್ಯವಸ್ಥೆಯನ್ನು ಜಾರಿಗೆ ತಂದಾಗ, ಜನರು ಇದನ್ನು ಬಳಸುವಷ್ಟು ವಿದ್ಯಾವಂತರಲ್ಲ ಎಂದು ಹೇಳಿದ್ದರು. ಸರಕು ಮತ್ತು ಸೇವಾ ತೆರಿಗೆ ಸಂಗ್ರಹ, ಸಾರ್ವಕಾಲಿಕ ಏರಿಕೆಯಾಗಿದ್ದು, ದೇಶದಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ. ಈ ಪರಿವರ್ತನೆಯನ್ನು ಕರ್ನಾಟಕದಲ್ಲೂ ಕಾಣಬಹುದು ಎಂದು ತಿಳಿಸಿದರು.

ಇಡೀ ದೇಶದಲ್ಲೇ ರಾಜ್ಯಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದು ಬರುತ್ತಿದೆ. ಜಿಎಸ್‍ಟಿ ತಲಾದಾಯ, ಬಂಡವಾಳ ಹೂಡಿಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಕ್ರಿಯಾಶೀಲ ಬಜೆಟ್ ಮಂಡಿಸಿದ್ದು, ಇದು ಪ್ರಸಕ್ತ ಆರ್ಥಿಕ ವರ್ಷ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ಕರ್ನಾಟಕದ ಅಭಿವೃದ್ಧಿ ಸೂಚ್ಯಂಕ ಕುರಿತಂತೆ ಕಾಂಗ್ರೆಸ್ ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ 75 ಮಂದಿ ಹೊಸಬರಿಗೆ ಅವಕಾಶ ನೀಡಿದೆ. ಇವರಲ್ಲಿ ಸಾಮಾನ್ಯರು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರು, ಯುವಜನರು ಇದ್ದಾರೆ. 224 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಹಿಂದೆ ವಿಶಿಷ್ಟ ಹಿನ್ನೆಲೆಯಿದೆ. ಜನರು ಇದನ್ನು ಸ್ವೀಕರಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಕಾಂಗ್ರೆಸ್, ಡಿಎಂಕೆ, ಟಿಆರ್‍ಎಸ್, ಫಾರೂಕ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಹಲವು ಪಕ್ಷಗಳು ಕುಟುಂಬ ರಾಜಕಾರಣ ನಡೆಸುತ್ತಿವೆ. ಯಾವುದೇ ವಿಷಯ ಮನೆಗಳಲ್ಲೇ ನಿರ್ಣಯವಾಗುತ್ತದೆ ಎಂದು ಅಣ್ಣಾಮಲೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಕ್ತಾರರು ಮತ್ತು ವಿಧಾನಪರಿಷತ್ ಸದಸ್ಯೆ ಡಾ. ತೇಜಸ್ವಿನಿ ಗೌಡ, ಪಕ್ಷದ ರಾಜ್ಯ ವಕ್ತಾರ ಡಾ.ಗಿರಿಧರ್ ಉಪಾಧ್ಯಾಯ ಅವರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ