Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಡಬೇಕು : ಎಚ್.ಎಂ. ಮುನಿರಾಜು 

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜು 13 : ಖಾಸಗಿ ಶಾಲೆಯ ವ್ಯಾಮೋಹವನ್ನು ಬಿಟ್ಟು, ಪೋಷಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸಲು ಮುಂದಾಗಬೇಕು. ಈ ಮೂಲಕ ಕನ್ನಡ ಶಾಲೆಗಳನ್ನು ಮುಚ್ಚಲು ಅವಕಾಶ ಕೊಡಬಾರದು ಎಂದು ತಾಲೂಕು ಕಸಾಪ ಅಧ್ಯಕ್ಷ ಎಚ್‌.ಎಂ. ಮುನಿರಾಜು ತಿಳಿಸಿದರು.

ತಾಲೂಕಿನ ತಾವರೆಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಹಾಗೂ ನಂದಗುಡಿ ಹೋಬಳಿ ಕಸಾಪ ವತಿಯಿಂದ ಅಯೋಜಿಸಿದ್ದ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಭಾಷೆ ಮತ್ತಷ್ಟು ಸಮೃದ್ಧವಾಗಬೇಕಾದರೆ ಪೋಷಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ದಾಖಲಿಸುವತ್ತ ಕಾಳಜಿ ವಹಿಸಬೇಕು. ಸರಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣದ ಜೊತೆಗೆ ಸರಕಾರದ ಅನೇಕ ಸವಲತ್ತುಗಳು ಸಿಗುತ್ತಿವೆ. ಪೋಷಕರು ಸಾಲ ಮಾಡಿ ಖಾಸಗಿ ಶಾಲೆಗಳಲ್ಲಿ ಓದಿಸುವ ಬದಲು, ನಮ್ಮೂರಿನ ಶಾಲೆಗೆ ಮಕ್ಕಳನ್ನು ಸೇರಿಸಿ ಮೌಲ್ಯಧಾರಿತ ಶಿಕ್ಷಣ ದೊರಕುವಂತಹ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಟಿ.ನಾಗರಾಜ್ ಮಾತನಾಡಿ, ಸರಕಾರಿ ಕೆಲಸದಲ್ಲಿರುವ ಬಹುತೇಕ ಶಿಕ್ಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲು ಮಾಡುತ್ತಾರೆ. ವೇತನ ಪಡೆಯುವುದು ಸರಕಾರಿ ಶಾಲೆಯಲ್ಲಿ. ಆದರೆ, ತಮ್ಮ ಮಕ್ಕಳು ಮಾತ್ರ ಖಾಸಗಿ ಶಾಲೆಗೆ ಕಳುಹಿಸುವುದು ಸಮಂಜಸವಲ್ಲ. ಶಿಕ್ಷಕ ವೃಂದ ಇತರರಿಗೆ ಆದರ್ಶವಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಕೃಷ್ಣಕುಮಾರ್, ಶಿಕ್ಷಕರಾದ ರಮಾಮಣಿ, ಅಶೋಕ್, ತಾಲೂಕು ಕಸಾಪ ಕಾರ್ಯದರ್ಶಿ ಬಚ್ಚೇಗೌಡ, ನಂದಗುಡಿ ಹೋಬಳಿ ಕಸಾಪ ಅಧ್ಯಕ್ಷ ಬಿ.ಹರೀಶ್‌, ಪದಾಧಿಕಾರಿಗಳಾದ ನಾರಾಯಣಗೌಡ, ಬಿಎಂಟಿಸಿ ನಾಗರಾಜ್‌, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ