Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಬರ: ಸಮರ್ಪಕವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ

ಸುದ್ದಿಮೂಲ ವಾರ್ತೆ

ತುಮಕೂರು, ನ.10: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರ ನಿರ್ವಹಿಸಲು ಅನುದಾನ ಹಂಚಿಕೆ ಮಾಡಿದೆ. ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಾಜ್ಯದ 226 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳಲ್ಲಿ ತೀವ್ರ ಬರ ತಲೆದೋರಿದ್ದು, ಕಂದಾಯ ಇಲಾಖೆಯು 37ಸಾವಿರ ಕೋಟಿ ನಷ್ಟವನ್ನು ಅಂದಾಜು ಮಾಡಿದೆ. ಈ ಪೈಕಿ 17 ಸಾವಿರ ಕೋಟಿ ರೂ.ಗಳ ಅನುದಾನವನ್ನು ಬರ ನಿರ್ವಹಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈವರೆಗೂ ಅನುದಾನ ಬಂದಿಲ್ಲ. ಆದರೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದ್ದು, ಇದನ್ನು ಬರ ಕಾಮಗಾರಿಗಳಿಗೆ ಉಪಯೋಗಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವರು, ನೀರಿನ ಸದ್ಭಳಕೆಗಾಗಿ ಸರ್ಕಾರದ ಸಹಾಯಧನದಡಿ ಜಿಲ್ಲೆಯ 18 ಸಾವಿರ ರೈತರಿಗೆ ಒಟ್ಟು 46 ಕೋಟಿ ರೂ.ಗಳ ತುಂತುರು ನೀರಾವರಿ ಘಟಕಗಳನ್ನು ಈ ತಿಂಗಳೊಳಗಾಗಿ ವಿತರಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಕೊರತೆ ಇರುವಂತಹ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಶಾಸಕರ ನೇತೃತ್ವದ ಟಾಸ್ಕಪೋರ್ಸ್ ಸಮಿತಿಯು ಸಭೆ ಕರೆದು ಚರ್ಚಿಸಿ ಕೊಳವೆ ಬಾವಿ ಕೊರೆಸುವುದಕ್ಕೆ ಪ್ರಸ್ತಾವನೆ ಕಳುಹಿಸಿದಲ್ಲಿ ಜಿಲ್ಲಾಡಳಿತ ವತಿಯಿಂದ ತ್ವರಿತಗತಿಯಲ್ಲಿ ಅನುಮತಿ ನೀಡಲಾಗುವುದು ಎಂದು ಳಿಸಿದರು.

ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಂಬಂಧಿಸಿದಂತೆ ತ್ರಿಸದಸ್ಯರುಳ್ಳ ಟಾಸ್ಕಪೋರ್ಸ್ ಸಮಿತಿಯನ್ನು ರಚಿಸಬೇಕು ಮತ್ತು ಪ್ರತಿ 2 ದಿನಗಳಿಗೊಮ್ಮೆ ಇಓ ಮತ್ತು ಪಿಡಿಓಗಳು ಕುಡಿಯುವ ನೀರಿನ ವಸ್ತುಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಓ ಅವರಿಗೆ ವರದಿ ನೀಡಬೇಕು. ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಾರದು ಎಂದು ಸಚಿವರು ಸೂಚಿಸಿದರು.

“ಸಮಗ್ರ ತುಮಕೂರು ಆರೋಗ್ಯ ಅಭಿಯಾನ”ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮದಡಿ ಗ್ರಾಮಗಳ ಪ್ರತಿ ಮನೆಗೆ ವೈದ್ಯರುಗಳು ತೆರಳಿ 12 ಮಾನದಂಡಗಳನ್ನು ಅನುಸರಿಸಿ ಕುಟುಂಬದ ಪ್ರತಿ ಸದಸ್ಯರ ಆರೋಗ್ಯ ಮಾಹಿತಿಯನ್ನು ಕಲೆ ಹಾಕಿ ದಾಖಲೀಕರಣ ಮಾಡಲಿದ್ದಾರೆ. ಈ ದಾಖಲೆಗಳಿಗನುಗುಣವಾಗಿ ರೋಗಿಗೆ ಚಿಕಿತ್ಸೆಗೆ ಅನುಕೂಲ ಮಾಡಲಾಗುವುದು. ಮುಂದಿನ 60 ದಿನಗಳಲ್ಲಿ 18ಲಕ್ಷ ಜನರ ತಪಾಸಣೆಯ ಗುರಿಯೊಂದಿಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸದರಾದ ಜಿ.ಎಸ್. ಬಸವರಾಜು, ಶಾಸಕರುಗಳಾದ ಸುರೇಶ್ ಬಾಬು, ರಾಜೇಂದ್ರ, ತಿಪ್ಪೇಸ್ವಾಮಿ, ಎಂ.ಟಿ.ಕೃಷ್ಣಪ್ಪ, ಚಿದಾನಂದಗೌಡ, ಷಡಾಕ್ಷರಿ, ರಂಗನಾಥ್, ಸುರೇಶ್ ಗೌಡ, ಜ್ಯೋತಿಗಣೇಶ್, ಮೇಯರ್ ಪ್ರಭಾವತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿ.ಪಂ. ಸಿಇಓ ಜಿ.ಪ್ರಭು, ಪಾಲಿಕೆ ಆಯುಕ್ತೆ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ