Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕವಿತಾ ಮಿಶ್ರಾ, ಹಿರೇಹಾಳ್ ಇಬ್ರಾಹಿಂಸಾಬ್ ಮತ್ತು ಪಂಡಿತ ಎಂ. ವೆಂಕಟೇಶ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್

ಬಳ್ಳಾರಿ,ಜು.12:ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2021-22 ನೇ ಸಾಲಿನ 11ನೇ ವಾರ್ಷಿಕ ಘಟಿಕೋತ್ಸವವು ಜುಲೈ 13 ರ ಗುರುವಾರ ಬೆಳಗ್ಗೆ 10 ಕ್ಕೆ

ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಸಿದ್ದು ಪಿ. ಅಲಗೂರ್ ಅವರು ಸುದ್ದಿಗಾರರಿಗೆ ಬುಧವಾರ ಈ ಮಾಹಿತಿ ನೀಡಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಘಟಿಕೋತ್ಸವದ ಭಾಷಣವನ್ನು ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್‍ನ ಅಧ್ಯಕ್ಷ ಡಾ.ಜೆ.ಕೆ. ಬಜಾಜ್ ಅವರು ಮಾಡಲಿದ್ದಾರೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ-ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ವಾರ್ಷಿಕ ಘಟಿಕೋತ್ಸವದ ನೇತೃತ್ವವನ್ನು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಸಿದ್ದು ಅಲಗೂರ ಅವರು ವಹಿಸಲಿದ್ದಾರೆ. ಕುಲಸಚಿವರಾದ ಪೆÇ್ರ.ಎಸ್.ಸಿ.ಪಾಟೀಲ್, ಪೆÇ್ರ. ರಮೇಶ್ ಓಲೇಕಾರ ಅವರು ಕುಲಪತಿಗಳಿಗೆ ಸಾಥ್ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

3 ಗೌರವ ಡಾಕ್ಟರೇಟ್

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಯಚೂರು ನಿವಾಸಿ ಕವಿತಾ ಮಿಶ್ರಾ, ಡಿ. ಹಿರೇಹಾಳ್ ಇಬ್ರಾಹಿಂ ಅವರಿಗೆ ಮರಣೋತ್ತರ ಹಾಗೂ ಪಂಡಿತ ಎಂ.ವೆಂಕಟೇಶ್ ಕುಮಾರ್ ಅವರಿಗೆ ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದರು.

ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು, 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಒಟ್ಟು 123 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.

ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಖನಿಜ ಸಂಸ್ಕರಣ ವಿಭಾಗದ ರುಬಾನ್.ಎಲ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರ ವಿಭಾಗದ ಹಜಿರಾಜಿ. ಎ ಹಾಗೂ ಕೊಪ್ಪಳ ಶ್ರೀಗವಿಸಿದ್ದೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರದ ರುಷಬ್ ಕುಮಾರ್ ಮೆಹ್ತಾ ಇವರು ತಲಾ ಮೂರು ಬಂಗಾರದ ಪದಕಗಳನ್ನು ಪಡೆದಿದ್ದಾರೆ ಎಂದರು.

ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಕನ್ನಡ ವಿಭಾಗದ ಮೋಹನ್‍ಕುಮಾರ್ ಆರ್.ಜಿ, ವಿಜಯನಗರ ಶ್ರೀಕೃಷ್ಣzೀವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸ್ವಾತಿ. ಎ, ಭೌತಶಾಸ್ತ್ರ ವಿಭಾಗದ ಕಾರ್ತಿಕ್ ರೆಡ್ಡಿ ಎಚ್.ಕೆ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಸಮಾಜಶಾಸ್ತ್ರದ ಸುಮಾ ಕಾಯಣ್ಣನವರ ಹಾಗೂ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಬಿಎಸ್‍ಸಿ ವಿಭಾಗದ ವಿಶಾಲಾಕ್ಷಿ ಅವರು ತಲಾ 2 ಬಂಗಾರದ ಪದಕಗಳನ್ನು ಪಡೆದಿದ್ದಾರೆ.

ವಿಶ್ವವಿದ್ಯಾಲಯದ ಸ್ನಾತಕ ಪದವಿಯಲ್ಲಿ ಒಟ್ಟು 12,423 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು 1,712ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ ಎಂದರು.

ಕವಿತಾ ಮಿಶ್ರಾ (ಕೃಷಿ ಕ್ಷೇತ್ರ) ;

ಕವಿತಾ ಮಿಶ್ರಾ ಅವರು ಧಾರವಾಡದಲ್ಲಿ 1977 ರಲ್ಲಿ ಜನಿಸಿ, ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮದಲ್ಲಿ ಸಾಧನೆ ಮಾಡಿ ಬಹು ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕ ಮತ್ತು ಪರಿಸರ ಸ್ನೇಹಿ ವಿಚಾರಗಳನ್ನು ತಿಳಿದು ಕಾರ್ಯರೂಪಕ್ಕೆ ತರುವುದರ ಜೊತೆ-ಜೊತೆಗೆ ಹೈನುಗಾರಿಕೆ ಮತ್ತು ಕೃಷಿ ನರ್ಸರಿಯನ್ನು ಪ್ರಾರಂಭಿಸಿದ್ದಾರೆ.

ಸುಸ್ಥಿರ ಕೃಷಿ ಪದ್ದತಿಯ ಕುರಿತು ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿರುವ ಇವರಿಗೆ ಅತ್ಯುತ್ತಮ ರೈತ ಪ್ರಶಸ್ತಿ, ಗೋಲ್ಡ್ ಪ್ರಶಸ್ತಿ, ಅತ್ಯುತ್ತಮ ತೋಟಗಾರಿಕಾ ಪ್ರಶಸ್ತಿ, ಕೃಷಿ-ಋಷಿ ಪ್ರಶಸ್ತಿ, ರಾಣಿ ಚನ್ನಮ್ಮ ಪ್ರಶಸ್ತಿಯ ಜೊತೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿವೆ.

ದಿ.ಹಿರೇಹಾಳ್ ಇಬ್ರಾಹಿಂ (ಸಮಾಜ ಸೇವೆ);

ಕೊಡುಗೈದಾನಿಯಾಗಿದ್ದ ದಿವಂಗತ ಹಿರೇಹಾಳ್ ಇಬ್ರಾಹೀಂ ಅವರು 1931 ರಲ್ಲಿ ದಂಡಿನ ಹಿರೇಹಾಳ್ ಗ್ರಾಮದಲ್ಲಿ ಜನಿಸಿ, ಜಾತ್ಯಾತೀತರಾಗಿ ಗುರುತಿಸಿಕೊಂಡಿದ್ದರು. ಸಾಹಿತ್ಯ ಮತ್ತು ಧಾರ್ಮಿಕ ಸಾಮರಸ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಇಬ್ರಾಹಿಂಸಾಬ್ ಅವರು, ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ರ್ಯ ಹೋರಾಟಗಾರು. ಸಾಹಿತಿಗಳ ಆಪ್ತರು. ಶಿವಮೊಗ್ಗದಲ್ಲಿ ನಡೆದ 49ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಮತ್ತು ಸಾಂಸ್ಕøತಿಕ ಸಮಿತಿಯ ನೇತೃತ್ವ ವಹಿಸಿದ್ದರು. ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಶಿವಮೊಗ್ಗದಲ್ಲಿ ‘ಜೀವನ ಸಂಜೆ’ ವೃದ್ಧಾಶ್ರಮ ಸ್ಥಾಪಿಸಿರುತ್ತಾರೆ. ಮುಸ್ಲಿಂ ಪ್ರವಚನಗಳನ್ನು ಕನ್ನಡಕ್ಕೆ ಅನುವಾದಿಸಿರುವ ಇಬ್ರಾಹೀಂಸಾಬ್ ಅವರು ಕೋಮು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಇವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗುತ್ತಿದೆ.

ಪಂಡಿತ ಎಂ. ವೆಂಕಟೇಶ್ ಕುಮಾರ್ (ಸಂಗೀತ ಕ್ಷೇತ್ರ);

ಹಿಂದೂಸ್ತಾನಿ ಗಾಯಕ ಪಂಡಿತ ಎಂ.ವೆಂಕಟೇಶ್ ಕುಮಾರ್ ಅವರು ಬಳ್ಳಾರಿ ಜಿಲ್ಲೆಯ ಲಕ್ಷ್ಮೀಪುರದಲ್ಲಿ 1953 ರಲ್ಲಿ ಜನಿಸಿ, ಪಂಡಿತ ಪುಟ್ಟರಾಜ ಗವಾಯಿಗಳ ಮಾರ್ಗದರ್ಶನದಲ್ಲಿ ಸಂಗೀತ ಅಭ್ಯಾಸ ನಡೆಸಿ ಕರ್ನಾಟಕ ಕಾಲೇಜಿನ ಸಂಗೀತ ವಿಭಾಗದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ದಾಸರ ಪದಗಳು ಹಾಗೂ ವಚನಗಳ ಗಾಯನದ ಮೂಲಕ ಮನೆಮಾತಾಗಿರುವ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಗೌರವ ಡಾಕ್ಟರೇಟ್, ವಚನ ಸಾಹಿತ್ಯಶ್ರೀ ಪ್ರಶಸ್ತಿ ಮತ್ತು 2016ರಲ್ಲಿ ಭಾರತ ಸರ್ಕಾರವು `ಪದ್ಮ ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ