Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಘಟನೆ, ಏಕತೆಗೆ ಒತ್ತು ನೀಡಬೇಕು: ಹುಸೇನಪ್ಪ ಮುದೇನೂರು

ಸುದ್ದಿಮೂಲ ವಾರ್ತೆ

ಕುಷ್ಟಗಿ,ಆ.28:ದಾರಿ ತಪ್ಪಿಸುವ ತಾತ್ಕಾಲಿಕ ಆಕರ್ಷಣೆಗಳಿಂದ ದೂರವಿದ್ದು, ಸಂಘಟನೆ, ಏಕತೆಗೆ ಒತ್ತು ನೀಡಬೇಕಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆ ಜಿಲ್ಲಾ ಪ್ರಮುಖ ಹುಸೇನಪ್ಪ ಮುದೇನೂರು ಅವರು ಹೇಳಿದರು.

ಪಟ್ಟಣದಲ್ಲಿ ಸೋಮವಾರ ನಡೆದ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಸಂಘಟನೆಯ ತಾಲೂಕು ಘಟಕದ ಪುನರ್ ರಚನೆ ಸಭೆಯಲ್ಲಿ ಅವರು ಮಾತನಾಡಿ, ಶತ ಶತಮಾನಗಳಿಂದ ಜಾತಿ-ಅಸ್ಪೃಶ್ಯತೆಯ ಸಂಕೋಲೆಗಳಿಂದ ದಲಿತ ಸಮುದಾಯದವರು ಹೊರ ಬರುತ್ತಾ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದನ್ನು ಸಹಿಸದ ಪಟ್ಟಭದ್ರ ಹಿತಾಸಕ್ತಿಗಳು, ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನಾತ್ಮಕವಾಗಿ ಬುನಾದಿ ಹಾಕಿಕೊಟ್ಟಿದ್ದ ಆರ್ಥಿಕ ಸಾಮಾಜಿಕ ಮತ್ತು ರಾಜಕೀಯ ಸವಲತ್ತುಗಳನ್ನು ಇಲ್ಲವಾಗಿಸುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಅನ್ಯಾಯ ಒಳಗಾದವರ ಪರ ಹೋರಾಟ ನಡೆಸಿ ನ್ಯಾಯ ಕೊಡಿಸುವುದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಸಂಘಟನೆ ಪ್ರಮುಖ ಧ್ಯೇಯ ಆಗಬೇಕು ಎಂದರು.

ಸಂಘಟನೆಯ ಇನ್ನೊರ್ವ ಪ್ರಮುಖ ಚಂದಪ್ಪ ಗುಡಗಲದಿನ್ನ ಅವರು ಮಾತನಾಡಿ, ಸಾಮ್ರಾಜ್ಯಶಾಹಿವಾದ, ಬಂಡವಾಳ ಶಾಹಿಗಳ ವಿರುದ್ಧ ದಸಂಸ ನಿರಂತರ ಸಂಘಟಿತ ಹೋರಾಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಈ ವೇಳೆ ಸಂಘಟನೆಯ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್ ಅವರ ಸೂಚನೆ ಮೇರೆಗೆ ಕುಷ್ಟಗಿ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕುಷ್ಟಗಿ ತಾಲ್ಲೂಕಿನ ಪ್ರಧಾನ ಸಂಚಾಲಕಾಗಿ ದುರಗೇಶ ದೇವರಮನಿ, ತಾಲೂಕು ಸಂಘಟನೆ ಸಂಚಾಲಕರಾಗಿ ಗೋತಗೆಪ್ಪ ಗೋತಗಿ, ಶರಣಪ್ಫ ಕೊರಡಕೇರಾ, ಶರಣಪ್ಪ ಬಿಜಕಲ್, ಹನುಮಂತ ವಿರುಪಾಪುರ ಹಾಗೂ

ತಾಲೂಕ ಖಜಾಂಚಿಯಾಗಿ ವಿನಾಯಕ ಮದ್ನಾಳ ಆಯ್ಕೆಯಾದರು.

ತಾಲೂಕು ಸಂಘಟನೆಯ ನೂತನ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ