Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ನಾನೂ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೆ'

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.11: ನನ್ನ 14 ನೇ ವಯಸ್ಸಿನಲ್ಲಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ. ಆದರೆ ನಾಯಕನಾಗಿ ಬೆಳೆದೆ. ನೀವು ನನ್ನಂತೆ ನಾಯಕರಾಗಿ ಬೆಳೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ರೀಡಾಪಟುಗಳಿಗೆ ಸ್ಪೂರ್ತಿಯ ಮಾತುಗಳನ್ನಾಡಿದರು.

ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು "ಜೂನಿಯರ್ ವಿಭಾಗದ ಜಾವಲಿನ್ ಎಸೆತ ಮತ್ತು 14.5 ಕಿಲೋ ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನೀವು ಕುಳಿತ ಜಾಗದಲ್ಲೇ ನಾನು ಕುಳಿತುಕೊಂಡಿದ್ದೆ. ಗ್ರಾಮೀಣ ಭಾಗದಿಂದ ಬಂದಂತಹ ನೀವೆಲ್ಲಾ ಕ್ರೀಡಾ ಕ್ಷೇತ್ರದಲ್ಲಿ ಭಾರತಕ್ಕೆ ಆಸ್ತಿಗಳಾಗಿ ಬೆಳಗಬೇಕು ಎಂದು ಹೇಳಿದರು.

ಶ್ರಮ ಪಡದೆ ಯಾವುದೂ ದಕ್ಕುವುದಿಲ್ಲ. ಶ್ರಮ ಇದ್ದ ಕಡೆ ಫಲವಿದೆ. ಗಣಪತಿಯನ್ನು ಪೂಜಿಸಿದ ತಕ್ಷಣ ವಿದ್ಯೆ ಬರುವುದಿಲ್ಲ‌, ಹಗಲು ಹೊತ್ತು ಶ್ರಮ ಪಡಬೇಕು. ಈಗ ಸ್ಪರ್ದೆ ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿದೆ. ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 107 ಪದಕಗಳನ್ನು ಗೆದ್ದಿದ್ದು, ಕನ್ನಡಿಗರು 11 ಪದಕಗಳನ್ನು ಗೆದ್ದಿದ್ದಾರೆ. ನೀವೆಲ್ಲಾ ಗ್ಲೋಬಲ್ ಮಟ್ಟಕ್ಕೆ ಬೆಳೆಯಬೇಕು ಎಂದು ಹುರಿದುಂಬಿಸಿದರು.

ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಹದೇವಪ್ಪ ಅವರ ಮನವಿ ಮೇರೆಗೆ ಬಂದು ಸಂತೋಷದಿಂದ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದ್ದೇ‌ನೆ. ಕ್ರೀಡಾಕೂಟದ ಉದ್ಘಾಟನೆ ಮಾಡಿದ್ದು ಬಹಳ ಸಂತಸ ನೀಡಿತು ಎಂದು ಹೇಳಿದರು.

ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾದ ಗೋವಿಂದರಾಜು ಅವರು, ಕ್ರೀಡಾ ಸಚಿವರಾದ ನಾಗೇಂದ್ರ ಅವರು ಕ್ರೀಡಾಪಟುಗಳಿಗೆ ಉತ್ತಮವಾದ ಸಮವಸ್ತ್ರಗಳನ್ನ ನೀಡಿದ್ದಾರೆ. ನಾವುಗಳು ಒಂದು ಶೂ ತೆಗೆದುಕೊಳ್ಳಲು ಪರದಾಡುವಂತಹ ಸ್ಥಿತಿಯಿತ್ತು. ಇಂದು ನಿಮ್ಮ ಪೋಷಕರು ಬೆಂಬಲ ನೀಡಿದ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ, ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಆರು ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು:

ಕ್ರೀಡಾ ಸಚಿವ ಬಿ. ನಾಗೇಂದ್ರ ಮಾತನಾಡಿ, ನಮ್ಮ ಸಂಸ್ಕೃತಿ ಮತ್ತು ಪರಂಪರೆಗಳ ವೈಭವದ ಸಂಕೇತ ಈ ನಮ್ಮ ಮೈಸೂರು ದಸರಾ ದೊಡ್ಡ ಹಬ್ಬವಾಗಿದೆ, ನಾಡಹಬ್ಬ ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ದಸರಾ ಕ್ರೀಡಾಕೂಟಕ್ಕೆ ವಿಶೇಷ ಗೌರವ ದೊರೆಯುತ್ತಿದೆ ಎಂದು ತಿಳಿಸಿದರು

ಅಕ್ಟೋಬರ್ 11 ರಿಂದ 21 ರವರೆಗೆ 10 ದಿನಗಳ ಕಾಲ ಇದೇ ಮೊದಲ ಭಾರಿಗೆ ಹಮ್ಮಿಕೊಂಡಿರುವ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು ಆರು ಸಾವಿರಕ್ಕೂ ಹೆಚ್ಚು ಕ್ರೀಡಾಪಟು ಪಾಲ್ಗೊಂಡು 35 ವೈವಿಧ್ಯಮಯ ಕ್ರೀಡೆಗಳಲ್ಲಿ ಪಾಲ್ಗೊಂಡು ವಿಜೇತರಾಗಿ ನಗದು ಬಹುಮಾನ ಪಡೆಯುವುದು ದಸರಾ ಕ್ರೀಡಾಕೂಟದ ಪ್ರಮುಖ ಆಕರ್ಷಣೆ ಆಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್ ರವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ತನ್ವಿರ್ ಸೇಠ್ ರವರು, ಸ್ಥಳೀಯ ಶಾಸಕರಾದ ಹರೀಶ್ ಗೌಡ,ದರ್ಶನ್ ದೃವನಾರಾಯಣ್ ,ಶ್ರೀವತ್ಸ , ಎಂ ಎಲ್ ಸಿ ಮಂಜೇಗೌಡರವರು, ಉಪ ಮಹಾಪೌರರಾದ ಡಾ. ರೂಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಎನ್. ಮಂಜುನಾಥ್ ಪ್ರಸಾದ್ , ಆಯುಕ್ತರಾದ ಶಶಿಕುಮಾರ್, ಉಪ ನಿರ್ದೇಶಕರಾದ ಜಿತೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ