Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಕಚೇರಿಯ ಮಾಹಿತಿ ತಿಳಿಯುವ ವ್ಯವಸ್ಥೆ ನನ್ನಲ್ಲಿದೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.25: ಪ್ರತಿ ಕಚೇರಿಯಲ್ಲಿ ಏನು ಕೆಲಸ ನಡೆಯುತ್ತದೆ ಎನ್ನುವ ವರದಿ ಪಡೆದುಕೊಳ್ಳುವ ವ್ಯವಸ್ಥೆ ನನ್ನ ಬಳಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಕಚೇರಿಗಳಲ್ಲಿ ನಡೆಯುತ್ತಿರುವುದನ್ನು ಬಿಚ್ಚಿ ನಿಮ್ಮ ಮರ್ಯಾದೆ ತೆಗೆದರೆ, ಮಾಧ್ಯಮದವರು ನಿಮ್ಮ ಜನ್ಮ ಜಾಲಾಡಿ ಬಿಡುತ್ತಾರೆ. ಆದರೆ ಆ ಕೆಲಸವನ್ನು ನಾನು ಮಾಡುವುದಿಲ್ಲ ಎಂದರು.

ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಇದೇ ವೇಳೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದರ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೀರಿಗಾಗಿ ನಾವು ಬಡಿದಾಡುತ್ತಾ ಇದ್ದೇವೆ. ಆದರೆ ನಿಮ್ಮ ಬಳಿ ಮಾಹಿತಿಯೇ ಇಲ್ಲ ಎಂದರು.

ಎಷ್ಟು ಶುದ್ಧ ನೀರು ಪೂರೈಕೆ ಘಟಕಗಳು ಇವೆ. ನಿತ್ಯ ಎಷ್ಟು ನೀರು ಪೂರೈಕೆ ಆಗುತ್ತಿದೆ. ಎಷ್ಟು ಜನ ಬಳಸುತ್ತಿದ್ದಾರೆ ಎಂಬ ವಿವರವೇ ನಿಮ್ಮ ಬಳಿ ಇಲ್ಲ. ಸಭೆಗೆ ಬರುವ ಮುನ್ನ ಸಿದ್ಧತೆಯನ್ನೇ ಮಾಡಿಕೊಂಡು ಬಂದಿಲ್ಲ. ಸಭೆಯ ಗಂಭೀರತೆಯೇ ನಿಮಗೆ ಅರ್ಥವಾಗಿಲ್ಲ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳ ಸಾವು-ನೋವು, ಡೆಂಗ್ಯೂ ಜ್ವರ, ಮಳೆ ಕೊರತೆ, ಬರ, ಕುಡಿಯುವ ನೀರು ಮತ್ತಿತರ ವಿಚಾರಗಳ ಬಗ್ಗೆ ಒಬ್ಬರೂ ವರದಿ ಕೊಟ್ಟಿಲ್ಲ. ಅಧಿಕಾರಿಗಳೇ ನಿಮಗೆ ಹೇಳೋರು, ಕೇಳೋರು ಯಾರೂ ಇಲ್ಲ ಅಂತಾ ತಿಳಿದುಕೊಂಡಿದ್ದೀರಾ? ನಿಮಗೆ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ ಮಾಡಿ. ನಿಮ್ಮದೇ ಲೋಕದಲ್ಲಿ ವಿಹರಿಸುತಿದ್ದೀರಿ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಮುಖ ಆಗುಹೋಗುಗಳ ಬಗ್ಗೆ ವರದಿ ಕೊಡಬೇಕೆಂಬ ಕನಿಷ್ಟ ಸೌಜನ್ಯ ನಿಮಗೆ ಇಲ್ಲವೇ? ಎಂದು ತರಾಟೆಗೆ ತೆಗೆದುಕೊಂಡರು.

ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರ ಕೆಲಸಗಳನ್ನು ಸಮಾನವಾಗಿ ಮಾಡಿ. ಜನರು ಸರ್ಕಾರಿ ಕಚೇರಿಗಳಿಗೆ ತಮ್ಮ ಕಷ್ಟಗಳನ್ನು ಬಗೆಹರಿಸಿಕೊಳ್ಳಲು ಬರುತ್ತಾರೆ. ಅವರ ಕೆಲಸಗಳನ್ನು ವಿಳಂಬವಿಲ್ಲದೆ ಸೂಕ್ತ ಕಾಲದಲ್ಲಿ ಮಾಡಿಕೊಡಬೇಕು.

ಕಂದಾಯ ವಿಭಾಗದಲ್ಲಿನ ಮನೆ, ಜಮೀನು ಖಾತೆ ಮಾಡಿಕೊಡಲು ಕಿರುಕುಳ ಸೇರಿದಂತೆ ಕಂದಾಯ ನಿವೇಶನಗಳ ಹೆಚ್ಚಳಕ್ಕೆ ಅಧಿಕಾರಗಳ ಕುಮ್ಮಕ್ಕು ಕಾರಣ. ಹೊಸ ಸರ್ಕಾರ ಹೊಸ ಆಶಯಗಳೊಟ್ಟಿಗೆ ಕೆಲಸ ಮಾಡುತ್ತಿದೆ. ನೀವುಗಳು ಅದರಂತೆ ಕೆಲಸ ಮಾಡಬೇಕು ಎಂದರು.

ಬಿಡಿಎ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸಲು ಕಷ್ಟಪಡುತ್ತಿದ್ದರೆ, ಜಿಲ್ಲಾ ಪಂಚಾಯಿತಿ ಹಾಗೂ ಇತರೇ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅವ್ಯವಸ್ಥಿತ ನಗರವನ್ನಾಗಿ ಬೆಳೆಯಲು ಕಾರಣಕರ್ತರಾಗುದ್ದೀರಿ. ಹೊಸದಾಗಿ 110 ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ. ಅವುಗಳು ಇನ್ನೂ ಅಭಿವೃದ್ಧಿಯಾಗದೆ ಅತಂತ್ರ ಸ್ಥಿತಿಯಲ್ಲಿವೆ.

ಬೆಂಗಳೂರು ನಗರದಲ್ಲಿ ಸ್ಥಳೀಯರು ಶೇ 30 ರಷ್ಟಿದ್ದರೆ ವಲಸಿಗರು ಶೇ 70 ರಷ್ಟಿದ್ದಾರೆ. ಇವರ ಮೇಲೆ ಪ್ರತಿ ಸಂದರ್ಭದಲ್ಲಿ ಶೋಷಣೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಜನರ ಮೇಲೆ ಎಲ್ಲಾ ರೀತಿಯ ಕಿರುಕುಳ ನಿಲ್ಲಬೇಕು ಎಂದರು.

ಕಸ ವಿಲೇವಾರಿ ಸಮಸ್ಯೆ, ರಸ್ತೆಬದಿಯಲ್ಲೇ ಕಸ ಸುರಿಯುತ್ತಿರುವುದು, ಎಲ್ಲೆಂದರಲ್ಲಿ ವೈದ್ಯಕೀಯ ತ್ಯಾಜ್ಯ ಸುರಿಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಮಾನತು ಆದೇಶ: ಸಭೆಗೆ ಓಡಿಬಂದ ಅಧಿಕಾರಿ

ಬೆಂಗಳೂರು ನಗರ ಜಿಲ್ಲೆ ಪಂಚಾಯಿತಿಯ ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆದೇಶ ನೀಡಿದರು.

ಸಭೆಯ ಆರಂಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎಲ್ಲಿ ಎಂದು ಕೇಳಿದರು. ಅವರು ಹೊಸಕೋಟೆ ಜನತಾ ದರ್ಶನ ಸಭೆಗೆ ಹೋಗಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದರು. ಹಾಗಾದರೆ ಈ ಮೀಟಿಂಗ್ ಯಾಕಾಗಿ ಮಾಡುತ್ತಿದ್ದೇವೆ. ತಕ್ಷಣವೇ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಸಿಇಓ ಕಾಂತರಾಜ್ ಅವರಿಗೆ ಸೂಚನೆ ನೀಡಿದರು.

ಡಿಸಿಎಂ ಅವರ ಆದೇಶ ವಿಷಯ ತಿಳಿಯುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಇಇ ಸಭೆಗೆ ಓಡೋಡಿ ಬಂದರು. ಹೊಸಕೋಟೆ ಜನತಾ ದರ್ಶನ ಸಭೆಗೆ ಹೋಗಿದ್ದೆ ಎಂದರು. ಆದ್ಯತೆ ಕೆಲಸ ಯಾವುದೆಂದು ನಿಮಗೆ ಗೊತ್ತಿರಬೇಕು. ಡಿಸಿಎಂ ಕೆಡಿಪಿ ಸಭೆ ಕರೆದಿದ್ದಾರೆ ಎಂದು ಶಾಸಕರಿಗೆ ಹೇಳಿ ಬರಬಹುದಿತ್ತಲ್ಲ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ