Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೊಮ್ಮೆ ಸ್ಪರ್ಧಿಸುವೆ, ಅಶೀರ್ವಾದ ಮಾಡಿ : ಪಟ್ಟಣ್ಣ

ಸುದ್ದಿಮೂಲ ವಾರ್ತೆ

ಆನೇಕಲ್, ಜು 3 : ಬೆಂಗಳೂರು ನಗರ ಜಿಲ್ಲೆಯ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಬೇಕೆಂದು ವಿಧಾನ ಪರಿಷತ್ತಿನ ಮಾಜಿ ಉಪಸಭಾಪತಿ ಪುಟ್ಟಣ್ಣ ಮನವಿ ಮಾಡಿದರು.

ಆನೇಕಲ್ ತಾಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ಅನಿವಾರ್ಯವಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಿಧಾನಸಭೆಗೆ ಸ್ಪರ್ಧಿಸಿದ್ದು ನಿಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ರಾಜಕೀಯ ಬದಲಾವಣೆಯಿಂದಾಗಿ ಪಕ್ಷವನ್ನು ಬದಲಾಯಿಸಿದ್ದು ನಿಜ, ಆದರೆ ಪುಟ್ಟಣ್ಣ ತನ್ನ ವಿಶ್ವಾಸ ಹಾಗೂ ಬದ್ಧತೆಯಲ್ಲಿ ಕಿಂಚಿತ್ತು ಬದಲಾಗಿಲ್ಲ. ಮುಂದಿನ ಉಪಚುನಾವಣೆಯಲ್ಲಿ ಮತ್ತೊಮ್ಮೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳ ಕೆಲವೊಂದು ಸಮಸ್ಯೆಗಳು ಹಾಗೂ ಬೆಂಗಳೂರಿಗೆ ಸಮೀಪ ಇರುವ ಹೊಸಕೋಟೆ, ಆನೇಕಲ್ ಗೆ ಪ್ರತ್ಯೇಕ ಮನೆ ಬಾಡಿಗೆ ಇನ್ನಿತರ ಬೇಡಿಕೆಗಳನ್ನ ಶಿಕ್ಷಕರು ಸಲ್ಲಿಸಿದ್ದು, ಪ್ರಾಮಾಣಿಕವಾಗಿ ಅವುಗಳನ್ನು ಈಡೇರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಪ್ರಕಾಶ್ ಕಾರ್ಯದರ್ಶಿ ಆನಂದ ಪದಾಧಿಕಾರಿಗಳಾದ ಕೃಷ್ಣಾರೆಡ್ಡಿ, ಆರ್.ಎಲ್ ನಾರಾಯಣಸ್ವಾಮಿ ಚಂದ್ರಶೇಖರ್, ಸುರೇಶ್, ಸುನೀತಾ ರಮೇಶ್, ಹರೀಶ್, ಅಶ್ವಥ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗಳಾದ ಶ್ರೀನಿವಾಸ್ , ಮಂಜುನಾಥ್ ಗೋಪಾಲ್, ನಿವೃತ್ತ ಮುಖ್ಯ ಶಿಕ್ಷಕರಾದ ಕೃಷ್ಣಾರೆಡ್ಡಿ ಆರ್.ಎಂ. ಮನಿಯಲ್ಲಪ್ಪ ವೀರಭದ್ರಪ್ಪ, ಲಿಂಗ ಮಯ್ಯ ಅತ್ತಿಬೆಲೆಯ ಕನ್ನಡ ಸೋಮು ಸುಬ್ಬಾರೆಡ್ಡಿ ಮುಂತಾದವರು ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ