Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರು ನಿಲ್ಲಿಸಿದರೆ ಶಾಂತಿ; ಇಲ್ಲದಿದ್ದರೆ ಕ್ರಾಂತಿ

ಸುದ್ದಿಮೂಲ ವಾರ್ತೆ

ಮೈಸೂರು, ಆ.26: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿ ರೈತರಿಗೆ ಕಾಂಗ್ರೆಸ್‌ ಸರ್ಕಾರ ದ್ರೋಹ ಬಗೆದಿದೆ ಎಂದು ಮೈಸೂರು ಮತ್ತು ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿದಿವೆ.

ಬೆಂಗಳೂರಿನಿಂದ ಕೆಆರ್‌ಎಸ್‌ ಮುತ್ತಿಗೆಗೆ ತೆರಳುತ್ತಿದ್ದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ರಕ್ತ ಚೆಲ್ಲುತ್ತೇವೆ ಕಾವೇರಿ ಉಳಿಸುತ್ತೇವೆ, ನೀರು ನಿಲ್ಲಿಸಿದರೆ ಶಾಂತಿ ನೀರು ಬಿಟ್ಟರೆ ಕ್ರಾಂತಿ ಎಂಬ ಘೋಷಣೆ ಮೊಳಗಿಸಿದರು.

ಕಾವೇರಿ ನೀರು ಪ್ರಾಧಿಕಾರ ನೀರು ಬಿಡುವಂತೆ ಯಾವುದೇ ಆದೇಶ ಮಾಡಿರದಿದ್ದರೂ ರಾಜಕೀಯ ಉದ್ದೇಶದಿಂದ ತಮಿಳುನಾಡು ಒಲೈಸಿಕೊಳ್ಳಲು ನೀರು ಬಿಟ್ಟಿರುವ ಸರ್ಕಾರಕ್ಕೆ ಕನ್ನಡ ನಾಡಿನ ರೈತರ ಬಗ್ಗೆ ಅಭಿಮಾನ ಇಲ್ಲವಾಗಿದೆ ಎಂದು ಖಂಡಿಸಿದರು.

ರೈತರು ಬೇಕಾದರೆ ನ್ಯಾಯಾಲಕ್ಕೆ ಹೋಗಲಿ ಎಂದು ಉಡಾಫೆಯಾಗೆ ವರ್ತಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಆಡಳಿತದ ಜ್ಞಾನ ಇದೆಯಾ, ಕಾವೇರಿ ವಿಚಾರದಲ್ಲಿ ರೈತರು ಸಾಕಷ್ಟು ಹೋರಾಟ ಮಾಡಿದ್ದಾರೆ, ರೈತರೇ ಎಲ್ಲವನ್ನು ಮಾಡುವುದಾದರೆ ಸರ್ಕಾರ ಏಕೆ ಇರಬೇಕು, ಸರ್ಕಾರದ ಕೆಲಸ ಏನು ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಕೂಡಲೇ ರೈತರ ಕ್ಷಮೆಯಾಚಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡಿಗರ ಬಗ್ಗೆ ಅಭಿಮಾನ ಇಲ್ಲ, ಮತ ಹಾಕಿದ ಮತದಾರರ ಬಗ್ಗೆಯೂ ಅಸಡ್ಡೆತನ ತೋರಿದೆ. ಮೇಕೆದಾಟು ವಿಚಾರವಾಗಿ ಪಾದಯಾತ್ರೆ ಮಾಡಿದವರು ಇದೀಗ ರೈತರಿಗೆ ದ್ರೋಹ ಮಾಡುವ ಕೆಲಸ ಮಾಡಿದ್ದಾರೆ. ಇದೇ ರೀತಿ ಕನ್ನಡಿಗರ ವಿರೋಧಿ ನೀತಿ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಸರ್ಕಾರವನ್ನು ಕಿತ್ತೊಗಿಯುವ ಜನಜಾಗೃತಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕನ್ನಡಪರ ಸಂಘಟನೆಗಳ ರಾಜ್ಯ ಮುಖಂಡರಾದ ನೀಲೇಶ್ ಗೌಡ, ಲೋಕೇಶ್ ಗೌಡ, ಪ್ರಕಾಶ್ ಗೌಡ, ರಮೇಶ್, ಕೃಷ್ಣೇಗೌಡ, ಎಂ ಬಿ ನಾಗಣ್ಣಗೌಡ ನೇತೃತ್ವ ವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ