ಸೋತ ಶೆಟ್ಟರೆ, ಗೆದ್ದ ಸವದಿ
ಬಿಜೆಪಿಯಿಂದ ಟಿಕೆಟ್ ಸಿಗದೆ ಸಿಡಿದೆದ್ದು ಕಾಂಗ್ರೆಸ್ ಸೇರಿದ ನಾಯಕರ ಪೈಕಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರ ವಿರುದ್ಧ ಸೋಲು ಅನುಭವಿಸಿದ್ದಾರೆ.
ಬಿಜೆಪಿ ಸಹ ಶೆಟ್ಟರ್ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿತ್ತು. ಮಾಜಿ ಸಿಎಂ ಯಡಿಯೂರಪ್ಪ ಅವರು ಶೆಟ್ಟರ್ ಅವರು ಸೋಲುತ್ತಾರೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸವಾಲು ಹಾಕಿದ್ದರು. ಮೊದಲಿನಿಂದಲೂ ಬಿಜೆಪಿಯ ಕ್ಷೇತ್ರವೇ ಆಗಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶೆಟ್ಟರ್ ಸೋಲು ಒಪ್ಪಿಕೊಂಡಿದ್ದಾರೆ.
ಮತ್ತೊಂದೆಡೆ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಲಕ್ಷ್ಮಣ ಸವದಿ ಅವರು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಭರ್ಜರಿ ಜಯಗಳಿಸಿದ್ದಾರೆ.
ಅಥಣಿ ಕ್ಷೇತ್ರ ಸವದಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧದ ಸೆಣೆಸಾಟವೇ ಎಂದು ಹೇಳಲಾಗಿತ್ತು. ಜಾರಕಿಹೊಳಿಯ ಪ್ರಭಾವ ಇಲ್ಲಿ ಕೆಲಸ ಮಾಡಿಲ್ಲ. ಲಕ್ಷ್ಮಣ ಸವದಿ ಅವರು ಕುಮಟಳ್ಳಿ ವಿರುದ್ಧ 76,122 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.