Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ವಲಸೆ ಎನ್‌ಐಎ ತನಿಖೆ ಅಗತ್ಯ: ಎಸ್.ಆರ್. ವಿಶ್ವನಾಥ್

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.12:
ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಬಂಗಾಳಿ ಪ್ರಜೆಗಳು ಅಕ್ರಮವಾಗಿ ವಾಸವಾಗಿದ್ದಾರೆ. ಹೀಗಾಗಿ ಇದನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆಗ್ರಹಿಸಿದರು.
ಕೋಗಿಲು ಬಡಾವಣೆಯಲ್ಲಿ ನಡೆದ ಅಕ್ರಮ ಮನೆಗಳ ತೆರವು ವರದಿಯನ್ನು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಲ್ಲಿಸಿ ಮಾತನಾಡಿದರು.
ಕೇರಳದ ಸಿಎಂ, ಕೆ.ಸಿ.ವೇಣುಗೋಪಾಲ್ ಅವರು ಈ ತೆರವು ಬಗ್ಗೆೆ ಸಾಕಷ್ಟು ಕೂಗಾಡಿದ್ದರು. ತೆರವಾದವರ ಈ ಪಟ್ಟಿಿಯಲ್ಲಿ ಒಬ್ಬರೇ ಒಬ್ಬರು ಕೇರಳದವರಿಲ್ಲ. ಕೇರಳದ ಮತಕ್ಕಾಾಗಿ ಇಷ್ಟೆೆಲ್ಲ ರಾದ್ಧಾಾಂತ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಕೇರಳದವರು ಇರಲಿ ಬಿಡಲಿ; ಅಲ್ಲಿನ ರಾಜಕಾರಣಕ್ಕಾಾಗಿ ನಮ್ಮ ರಾಜ್ಯವನ್ನು ಬಲಿ ಪಡೆಯುವ ಕೆಲಸ ಮಾಡಿದ್ದಾರೆ. ಒಬ್ಬರೇ ಒಬ್ಬರು ಕೇರಳದವರಿಲ್ಲ. ಒಬ್ಬರೇ ಒಬ್ಬರು ಕ್ರಿಿಶ್ಚಿಿಯನ್ ಇದ್ದಾರೆ. ನಮಗೆ ಸಿಕ್ಕಿಿದ ಪಟ್ಟಿಿಯಲ್ಲಿ ಬಹುತೇಕ ಎಲ್ಲರೂ ಮುಸ್ಲಿಿಮರೇ ಇದ್ದಾರೆ. ಬೆಂಗಳೂರಿನಲ್ಲಿ ಸರಕಾರಿ ಜಾಗದಲ್ಲಿ ಹೊಸದಾಗಿ ಗುಡಿಸಲು ಹಾಕಿಕೊಂಡವರನ್ನು ಕೂಡಲೇ ಸರಕಾರ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ನಗರದಲ್ಲಿರುವ 100 ಚಿಂದಿ ಆಯುವವರ ಪೈಕಿ ಶೇ 95 ಜನರು ರೋಹಿಂಗ್ಯಾಾಗಳೇ ಇದ್ದಾರೆ. ಅವರ ಬಳಿ ಕೆಲವು ಕಾರ್ಡ್‌ಗಳಿವೆ. ನಾವು ಹೋಗಿ ಕೇಳಿದಾಗ ಕೊಟ್ಟಿಿಲ್ಲ. ವಲಸಿಗರ ಕಾರ್ಡ್ ಅವರ ಬಳಿ ಇದೆ. ಹಣ ಕೊಟ್ಟು ಗಡಿ ದಾಟಿ ಬಂದುದಾಗಿ ಹೇಳುತ್ತಾಾರೆ. ಪಶ್ಚಿಮ ಬಂಗಾಲದ ಮೂಲಕ ಬರಲು ವ್ಯವಸ್ಥೆೆ ಕಲ್ಪಿಿಸುವ ತಂಡವೇ ಇದೆ ಎಂದು ಅವರೇ ಹೇಳಿದ್ದಾಗಿ ವಿವರಿಸಿದರು.
ಅವರ ಭಾಷೆ ಹಿಂದಿಯೂ ಅಲ್ಲ ಉರ್ದುವೂ ಅಲ್ಲ. ಅದು ನಮಗೆ ಅರ್ಥವೂ ಆಗುವುದಿಲ್ಲ ಎಂದು ಶಾಸಕ ವಿಶ್ವನಾಥ್ ತಿಳಿಸಿದರು. ಬಾಂಗ್ಲಾಾ ಮತ್ತು ರೋಹಿಂಗ್ಯಾಾ ಭಾಷೆ ಕೇಳಿದೊಡನೆ ಗೊತ್ತಾಾಗುತ್ತದೆ. ಮೊನ್ನೆೆ ಟಿ.ವಿ ಚಾನೆಲ್ ಒಂದರಲ್ಲಿ ಮಹಿಳೆಯೊಬ್ಬರು ಜೈ ಬಾಂಗ್ಲಾಾ ಹೇಳಿದ್ದನ್ನು ಕೇಳಿದ್ದೇವೆ ಎಂದು ತಿಳಿಸಿದರು. ಅವರು ರಾಜಾರೋಷವಾಗಿ ಇದ್ದಾರೆ ಎಂದರು.
ಕ್ರಮಕ್ಕೆೆ ಆಗ್ರಹ:
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಾಗಳು ಮತ್ತು ಬಾಂಗ್ಲಾಾದವರಿದ್ದಾರೆ ಎಂದು ನಮಗೆ ವರದಿಗಳು ಬಂದಿವೆ. ಅವೆಲ್ಲವನ್ನೂ ಪರಿಶೀಲಿಸಿ, ಅಂಥವರನ್ನು ಬಂಧಿಸಬೇಕು. ಅವರ ದೇಶಕ್ಕೆೆ ಕಳಿಸುವುದು ಅಥವಾ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಾಯಿಸಿದರು.
ರಾಜಕಾಲುವೆ ಮೇಲಿನ ಮನೆಗಳನ್ನೂ ಒಡೆಯಲಾಗಿದೆ. ಕಾಚರಕನಹಳ್ಳಿಿಯಲ್ಲಿ ಕೆರೆಯಲ್ಲಿ ಮನೆ ಕಟ್ಟಿದರೆಂದು ಗುಡಿಸಲಿಗೆ ಬೆಂಕಿ ಹಾಕಿದ್ದರು. ಅವರಿಗೂ ನಾವು ಪರಿಹಾರ ಕೊಟ್ಟಿಲ್ಲ ಎಂದು ತಿಳಿಸಿದರು.
15 ಸಾವಿರಕ್ಕೂ ಹೆಚ್ಚು ಜನರು ಮನೆಗಾಗಿ ಅರ್ಜಿ ಹಾಕಿ ಕಾಯುತ್ತಿಿದ್ದಾರೆ. ಈ ರೀತಿ ಅಕ್ರಮವಾಗಿ ಮನೆ ಕೊಡುವುದಾಗಲೀ, ನಿಯಮಬಾಹಿರವಾಗಿ ಸಹಾಯಧನ ನೀಡಿವುದಾಗಲೀ ಮಾಡಬಾರದು ಎಂದು ವರದಿಯಲ್ಲಿ ತಿಳಿಸಿರುವುದಾಗಿ ಹೇಳಿದರು.
ಶಾಸಕ ಎಸ್. ಮುನಿರಾಜು, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿ ಎಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ