Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವ ಎಚ್ಚರಿಕೆ ಪೊಲೀಸರು ಸಮಾಜಘಾತುಕ ಶಕ್ತಿಗಳೊಂದಿಗೆ ಸೇರುವುದನ್ನು ಸಹಿಸುವುದಿಲ್ಲ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.18:
ಪೊಲೀಸರು ಸಮಾಜಘಾತುಕ ಶಕ್ತಿಿಗಳೊಂದಿಗೆ ಸೇರುವುದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತೊೊಮ್ಮೆೆ ಪೊಲೀಸರಿಗೆ ಎಚ್ಚರಿಕೆ ನೀಡಿದರು.
ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ 2ನೇ ದಿನದ ಸಮಾವೇಶ’ದಲ್ಲಿ ಮಾತನಾಡಿದರು.
ಪೊಲೀಸರು ಸಮಜಾಘಾತುಕರೊಂದಿಗೆ ಕೈಜೋಡಿಸಬಾರದು ಎಂದು ಪ್ರತಿ ಸಭೆಯಲ್ಲಿಯೂ ಎಚ್ಚರಿಸಲಾಗುತ್ತದೆ. ಹೀಗಿದ್ದರೂ ಪೊಲೀಸರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿಿರುವ ಬಗ್ಗೆೆ ವರದಿಗಳು ಬರುತ್ತಿಿವೆ. ಠಾಣೆಯಲ್ಲಿ ಕುಳಿತು ಅಕ್ರಮ ವ್ಯವಹಾರ ನಡೆಸುವುದನ್ನು ಸರ್ಕಾರ ಸಹಿಸು ವುದಿಲ್ಲ. ಅಂತವರ ಅನಿವಾರ್ಯತೆ ಪೊಲೀಸ್ ಇಲಾಖೆಗೆ ಇಲ್ಲ. ರೌಡಿಗಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪೊಲೀಸ್ ಅಧಿಕಾರಿಗಳು ಪಾಲ್ಗೊೊಳ್ಳುತ್ತಿಿದ್ದಾರೆ. ಇದೆಲ್ಲವನ್ನು ನೋಡಿಕೊಂಡು ಸುಮ್ಮನಿರಬೇಕೆ. ಈ ಬಗ್ಗೆೆ ಎಲ್ಲಾಾ ಅಧಿಕಾರಿಗಳು ಎಚ್ಚೆೆತ್ತುಕೊಳ್ಳದಿದ್ದರೆ ಮತ್ತಷ್ಟು ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ. ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಮೂಡಿಸುವಂತ ವಿಚಾರಗಳನ್ನು ಪೋಸ್ಟ್ ಮಾಡಲಾಗುತ್ತಿಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ ಗಲಭೆಗಳಾಗುತ್ತವೆ. ತಪ್ಪಿಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಿ, ಆರಂಭಿಕ ಹಂತದಲ್ಲೇ ಮಟ್ಟ ಹಾಕಬೇಕು ಎಂದರು.
ಡಿಸಿಆರ್‌ಇ ಪೊಲೀಸ್ ಠಾಣೆ ಸ್ಥಾಾಪನೆ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಾಪಿಸಲಾಗಿದೆ. ಈ ನಿಟ್ಟಿಿನಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಅಂತರ್‌ಜಾತಿ ವಿವಾಹವಾದ ಯುವತಿಯನ್ನು ಆಕೆಯ ತಂದೆಯೇ ಕೊಲೆ ಮಾಡುತ್ತಾಾನೆ ಎಂದರೆ ಹೇಗೆ ಸಹಿಸುವುದು. ಎಸ್ಸಿಿ, ಎಸ್ಟಿಿ ಸಮುದಾಯದ ಜನರ ಮೇಲಾಗುತ್ತಿಿರುವ ಶೋಷಣೆಯನ್ನು ತಡೆಗಟ್ಟಲು ಅನುಕೂಲವಾಗಲಿದೆ ಎಂಬ ನಿಟ್ಟಿಿನಲ್ಲಿ ಪ್ರತ್ಯೇಕವಾಗಿ ಡಿಸಿಆರ್‌ಇ ಠಾಣೆಗಳನ್ನು ಮಾಡಲಾಗಿದೆ. ಶೋಷಿತರೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸಬೇಕಲ್ಲವೇ. ಈ ಬಗ್ಗೆೆ ಎಚ್ಚೆೆತ್ತುಕೊಳ್ಳಬೇಕಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆೆ ಉತ್ತಮವಾಗಿದ್ದರೆ, ಆರ್ಥಿಕತೆ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲವೂ ಅಭಿವೃದ್ಧಿಿಯಾಗುತ್ತದೆ ಎಂದ ಅವರು, ಕೆಲವು ರಾಜ್ಯಗಳಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿಿದ್ದಾರೆ. ಆರ್ಥಿಕವಾಗಿ ಹಿಂದೆ ಉಳಿದಿವೆ. ಅಲ್ಲಿನ ಕಾನೂನು ಸುವ್ಯವಸ್ಥೆೆ ಉತ್ತಮವಾಗದಿರುವುದೇ ಇದಕ್ಕೆೆ ಕಾರಣ.
ದೇಶದಲ್ಲಿ ಕಳೆದ 25 ವರ್ಷಗಳಿಂದ ಕರ್ನಾಟಕವನ್ನು ಬೇರೆ ದೃಷ್ಟಿಿಯಿಂದ ನೋಡ ಲಾಗುತ್ತಿಿದೆ. ರಾಜ್ಯದಲ್ಲಿ ಕಳೆದ ವರ್ಷ 10 ಲಕ್ಷ ಕೋಟಿ ರೂ. ಹೂಡಿಕೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆೆ ಉತ್ತಮವಾಗಿರುವುದು ಇದಕ್ಕೆೆ ಕಾರಣ ಎಂದರು.
ಅಕ್ರಮ ವಲಸಿಗರ ಬಗ್ಗೆೆ ನಿಗಾ ಅಗತ್ಯ: ರಾಜ್ಯದಲ್ಲಿ ಲಕ್ಷಾಂತರ ಅಕ್ರಮ ಬಾಂಗ್ಲಾಾ ವಲಸಿಗರು ನೆಲೆಸಿದ್ದಾರೆ ಎಂದು ವರದಿಯಾಗುತ್ತಿಿದೆ. ಸ್ಥಳೀಯ ಪೊಲೀಸರು ಏನು ಮಾಡುತ್ತಿಿದ್ದಾರೆ. ಪ್ರತಿ ಏರಿಯಾದ ಮಾಹಿತಿ ಪೊಲೀಸರಿಗೆ ಗೊತ್ತಿಿರಬೇಕು ಎಂಬ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವನ್ನು ತರಲಾಗಿದೆ. ಯಾರು, ಎಲ್ಲಿಂದ ಬಂದಿದ್ದಾರೆ ಎಂದು ಪೊಲೀಸ್ ಠಾಣೆ ಹಂತದಲ್ಲಿ ತಿಳಿದುಕೊಳ್ಳಲು ಅಗುವುದಿಲ್ಲವೆ ಎಂದು ತರಾಟೆಗೆ ತೆಗೆದುಕೊಂಡರು.
ಡ್ರಗ್ಸ್ ದಂಧೆ, ಸೈಬರ್ ಅಪರಾಧಗಳನ್ನು ಮಟ್ಟಹಾಕುವುದು ಸವಾಲಾಗುತ್ತಿಿದೆ. ಇಲಾಖೆಯು ತಾಂತ್ರಿಿಕವಾಗಿ ಬಲಗೊಳ್ಳಬೇಕು. ಹೊಸ ತಂತ್ರಜ್ಞಾನ, ಆವಿಷ್ಕಾಾರಗಳನ್ನು ಅಳವಡಿಸಿಕೊಂಡು ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಬೇಕು ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ಶಾಲಾ-ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊೊಂಡು, ಉಪನ್ಯಾಾಸ ನಡೆಸಬೇಕು. ಯುವ ಸಮೂಹದಲ್ಲಿ ಬದಲಾವಣೆ ಮೂಡುತ್ತದೆ. ಎಲ್ಲಾಾ ಅಧಿಕಾರಿಗಳು ಸಭೆಯಿಂದ ಹೋಗುವ ಮೊದಲು, ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುತ್ತೇವೆ’ ಎಂದು ಆತ್ಮಸಾಕ್ಷಿಯಿಂದ ಪ್ರಮಾಣ ಮಾಡಬೇಕು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ ಎಂ.ಎ.ಸಲೀಂ, ರಾಜ್ಯ ಅಗ್ನಿಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್, ಡಿಜಿಪಿ ಪ್ರಣವ್ ಮೊಹಾಂತಿ, ಕಾನೂನು ಸುವ್ಯವಸ್ಥೆೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಗುಪ್ತವಾರ್ತೆ ಎಡಿಜಿಪಿ ರವಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ