Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆನಘಟ್ಟ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಉದ್ಘಾಟನೆ

ಬೆನಘಟ್ಟ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಉದ್ಘಾಟನೆ

 

ಸುದ್ದಿಮೂಲ ವಾರ್ತೆ

ಮಾಲೂರು, ಜೂನ್‌ 2 : ಗುಣಮಟ್ಟ ಹಾಲು ಪೂರೈಕೆ ಮಾಡುವ ಮೂಲಕ ಬೆನಘಟ್ಟ ಹಾಲು ಉತ್ಪಾದಕರ ಸಂಘ ಜಿಲ್ಲೆಯಲ್ಲೇ ಮಾದರಿ ಸಂಘ ಎಂದು ಶಾಸಕ ಕೆ.ವೈ. ನoಜೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

 

ತಾಲ್ಲೂಕಿನ ಡಿ.ಎನ್. ದೊಡ್ಡಿ ಗ್ರಾಮ ಪಂಚಾಯತಿಯ ಬೆನಘಟ್ಟ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಎರಡನೇ ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

 

ಮೊದಲ ಬಾರಿಗೆ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕನಾದ ಸಂದರ್ಭದಲ್ಲಿ ತಾಲೂಕಿನಲ್ಲಿ ಸಣ್ಣ ಮನೆಯೊಂದರಲ್ಲಿ ಶಿಬಿರ ಕಚೇರಿ ನಡೆಯುತ್ತಿತ್ತು. ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಹಕಾರದಿಂದ ಇದೀಗ ರಾಜ್ಯದಲ್ಲೇ ಮಾದರಿ ಶಿಬಿರ ಕಚೇರಿಯನ್ನು ಮಾಲೂರು ಪಟ್ಟಣದಲ್ಲಿ ನಿರ್ಮಾಣ ಮಾಡಲಾಗಿದೆ ಎಂದರು.

 

ಸ್ವಂತ ಕಟ್ಟಡ ಇಲ್ಲದ ಸಂಘಗಳಿಗೆ ಒಕ್ಕೂಟ ದಿಂದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಸಹಾಯ, ಹಾಲು ಉತ್ಪಾದನೆ ರೈತರ ಮಕ್ಕಳ ವ್ಯಾಸಂಗಕ್ಕೆ ಪ್ರೋತ್ಸಾಹ ಧನ, ವಿದ್ಯಾರ್ಥಿನಿಲಯ, ಹಸುಗಳಿಗೆ ವಿಮೆ ಸೇರಿದಂತೆ ಹಲವು ಯೋಜನೆಗಳನ್ನು ಒಕ್ಕೂಟ ನೀಡುತ್ತಿದೆ. ಗುಣಮಟ್ಟದ ಹಾಲು ಪೂರೈಕೆಯಲ್ಲಿ ಬೆನಘಟ್ಟ ಎರಡನೇ ಸ್ಥಾನದಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು. .

 

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಒಕ್ಕೂಟದ ವ್ಯವಸ್ಥಾಪಕರಾದ ಡಾ.ಶ್ರೀನಿವಾಸ ಗೌಡ, ತಾಲ್ಲೂಕು ಶಿಬಿರ ಕಚೇರಿಯ ವ್ಯವಸ್ಥಾಪಕ ಡಾ.ಚೇತನ್, ವಿಸ್ತರಣಾಧಿಕಾರಿಗಳಾದ ನಾರಾಯಣಸ್ವಾಮಿ, ಹುಲ್ಲೂರಪ್ಪ , ಶಿವಕುಮಾರ್, ಮನೋಹರ್ ರೆಡ್ಡಿ, ವೆಂಕಟೇಶ್,ಕರಿಯಪ್ಪ, ಗ್ರಾಪಂ ಸದಸ್ಯರಾದ ಪಾಲೇಶ್ ರೆಡ್ಡಿ,ಮಮತಾ ಮಂಜುನಾಥ್.‌ ಸಂಘದ ಅಧ್ಯಕ್ಷ ಮುನಿರಾಜು, ಕಾರ್ಯದರ್ಶಿ ಸರ್ವೇಶ್, ನಿರ್ದೇಶಕರಾದ ಪ್ರವೀಣ್ ಕುಮಾರ್, ಲಕ್ಷ್ಮಮ್ಮ ,ರಾಜಾರೆಡ್ಡಿ, ಆಂಜಿನಪ್ಪ,ಸರ್ವೆಶ್ , ಕೃಷ್ಣಪ್ಪ,ಜಯಪ್ಪ, ಗುರಪ್ಪ, ನಾಗರತ್ನಮ್ಮ, ನಾಗರಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ