Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇವಪುರ: ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟನೆ

ಸುದ್ದಿಮೂಲ ವಾರ್ತೆ

ಕೆ.ಆರ್. ಪುರ, ಏ.12: ಮಹದೇವಪುರ ಕ್ಷೇತ್ರದ ಬೆಳತ್ತೂರಿನಲ್ಲಿ ನೂತನ ಕಾಂಗ್ರೆಸ್ ಕಚೇರಿಯನ್ನು ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ನಾಗೇಶ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕ ಎಚ್.ನಾಗೇಶ್, ಸಾರ್ವಜನಿಕರ  ಅಹವಾಲು, ಸಮಸ್ಯೆಗಳನ್ನು ಪರಿಹರಿಸಲು ಪಕ್ಷದ ಕಚೇರಿ ಸೇತುವೆಯ ರೀತಿಯಲ್ಲಿ ಇರಲಿದೆ. ಐಟಿಬಿಟಿ ಕೇಂದ್ರವಾದ ಮಹದೇವಪುರ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದು, ನಿವಾಸಿಗಳ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸುವ ಕಾರ್ಯ ಮಾಡಲಾಗುವುದೆಂದು ಹೇಳಿದರು.

ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಕಚೇರಿಗಳು ಹೆಚ್ಚು ಅವಶ್ಯಕವಾಗಿದ್ದು, ಸಾರ್ವಜನಿಕರ ಸರ್ವತೋಮುಖ ಅಭಿವೃದ್ಧಿಗೆ ಕಚೇರಿ ಉತ್ತಮ ವೇದಿಕೆಯಾಗಲಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಾರ್ವಜನಿಕ ಸಮಸ್ಯೆಗಳಿಗೆ ಮುಕ್ತಿ ದೊರೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳತೂರು ರಮೇಶ್, ಮಾಜಿ ಪಾಲಿಕೆ ಸದಸ್ಯ ಉದಯ್ ಕುಮಾರ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ, ಬ್ಲಾಕ್ ಅಧ್ಯಕ್ಷರಾದ ಬಾಬುಗೌಡ, ವಿಟಿಬಿ ಬಾಬು, ನಾಗಪ್ಪ, ಅನೀಲ್,ಮಾಜಿ ಅಧ್ಯಕ್ಷ ಎಂಸಿಬಿ ರಾಜಣ್ಣ,ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ