Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾರದ ಮಳೆ, ಜಿಲ್ಲೆಯಲ್ಲಿ ಬರದ ಛಾಯೆ

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 07:ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ಸಕಾಲಕ್ಕೆ ಮಳೆಯಾಗಿಲ್ಲ. ಇದರಿಂದಾಗಿ ಜಿಲ್ಲೆಯಲ್ಲಿ ಬರಛಾಯೆ ಆವರಿಸಿದೆ. ಜೂನ ಒಂದು ತಿಂಗಳಾದರೂ ಮಳೆಯಾಗಿಲ್ಲ. ಒಣಪ್ರದೇಶದ ರೈತರು ಬಿತ್ತನೆಗೆ ಭೂಮಿ ಹದ ಮಾಡಿಕೊಂಡು ಈಗ ಮುಗಿಲು ನೋಡುತ್ತಾ ಕುಳಿತಕೊಳ್ಳುವಂತಾಗಿದೆ. ಇನ್ನೂ ಒಂದು ವಾರದಲ್ಲಿ ಮಳೆಯಾಗದಿದ್ದರೆ ಮುಂಗಾರು ಹಂಗಾಮು ಸಂಪೂರ್ಣವಾಗಿ ವಿಫಲವಾಗುವ ಸಾಧ್ಯತೆ ಇದೆ.

ಶೇ 70 ರಷ್ಟು ಪ್ರದೇಶ ಮಳೆಯಾಶ್ರಿತದಲ್ಲಿ ಬೆಳೆಯುವ ಭೂಮಿ ಹೊಂದಿರುವ ಕೊಪ್ಪಳ ಜಿಲ್ಲೆಯಲ್ಲಿ ಶೇ 80 ರಷ್ಟು ಪ್ರದೇಶವು ಕೆಂಪು ಮಣ್ಣಿನಿಂದ ಕೂಡಿದೆ. ಕೆಂಪು ಮಣ್ಣು ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಮಾತ್ರ ಬಿತ್ತನೆ ಮಾಡುತ್ತಾರೆ. ಈ ಬಾರಿ ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಕೈಕೊಡುವ ಸಾಧ್ಯತೆ ಇದೆ. ಈಗಾಗಲೇ ರೋಹಿಣಿ ಮಳೆ ಹೋಗಿ ಮೃಗಶಿರ ಮಳೆ ಬರುತ್ತಿದೆ. ಭರಣಿ ಹಾಗು ರೋಹಿಣಿ ಮಳೆಗೆ ಬಿತ್ತನೆ ಮಾಡಿದರೆ ಮುಂಗಾರು ಬೆಳೆಯು ಬರುತ್ತಿದೆ. ಆದರೆ ಜೂನ ತಿಂಗಳ ಒಂದು ವಾರದವಾದರೂ ಮಳೆಯಾಗದೆ ಇರುವದರಿಂದ ರೈತರು ಈ ವರ್ಷ ಬರ ಬರುತ್ತದೆಯೇ ಎಂಬ ಆತಂಕದಲ್ಲಿದ್ದಾರೆ.

ಈಗಾಗಲೇ ಬಿತ್ತನೆಗೆ ಭೂಮಿ ಹದ ಮಾಡಿಕೊಂಡಿದ್ದಾರೆ. ಸಕಾಲಕ್ಕೆ ಮಳೆಯಾಗಿದ್ದರೆ ಜೋಳ. ಹೆಸರು ಬಿತ್ತನೆ ಮಾಡುತ್ತಿದ್ದರು, ಆದರೆ ಮಳೆಯಾಗಿಲ್ಲ. ಮುಂದಿನ ದಿನಗಳಲ್ಲಿ ಮೆಕ್ಕೆಜೋಳ ಹಾಗು ಸಜ್ಜೆ ಮಾತ್ರ ಬೆಳೆಯಬಹುದು ಎನ್ನುತ್ತಾರೆ. ಮುಂಗಾರು ಪೂರ್ವ ಜಿಲ್ಲೆಯಲ್ಲಿ 12040 ಹೆಕ್ಟರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಿದ್ದರು. ಈ ಬಾರಿ ಅಧಿಕ ಬಿಸಿಲು ಇರುವುದರಿಂದ ಹತ್ತಿಯ ಇಳುವರಿ ಸಹ ಕಡಿಮೆಯಾಗಿ ಹತ್ತಿಗಾಗಿ ಮಾಡಿರುವ ಖರ್ಚು ಸಹ ಬರುವುದಿಲ್ಲ ಎನ್ನುತ್ತಾರೆ.

ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯು ವಾಡಿಕೆಯಂತೆ 63.4 ಮಳೆಯಾಗಬೇಕಿತ್ತು. ಆದರೆ ಆಗಿದ್ದು 52 ಎಂ ಎಂ ಮಳೆಯೆ ಮಳೆ ಕೊರತೆ ಯಾಗಿದ್ದರಿಂದ ಈಗ ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 3.08 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿನಲ್ಲಿ ಕೊಪ್ಪಳ ಜಿಲ್ಲೆಯ 25 ಕಡೆ ಬೀಜ ಹಾಗು ಗೊಬ್ಬರ ವಿತರಣೆಯ ಕೇಂದ್ರಗಳಿವೆ. ಜಿಲ್ಲೆಯಲ್ಲಿ 9329 ಕ್ವಿಂಟಾಲ್ ಬೀಜ. 92666 ಕ್ವಿಂಟಾಲ್ ಗೊಬ್ಬರ ಬೇಡಿಕೆ ಇದೆ. ಜಿಲ್ಲೆಯಲ್ಲಿ ಬೀಜ ಹಾಗು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹವಾಗಿದೆ ಎನ್ನುತ್ತಾರೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು.

ಕಳೆದ ಮೂರು ನಾಲ್ಕು ವರ್ಷ ಅಧಿಕ ಮಳೆಯಾಗಿದ್ದ ಕೊಪ್ಪಳ ಜಿಲ್ಲೆಯಲ್ಲಿ ಈಗ ಮುಂಗಾರು ಕೊರತೆ ಇರುವದು ರೈತರಲ್ಲಿ ಬರಛಾಯೆಯಿಂದ ಆತಂಕಕ್ಕೊಳಗಾಗಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ