Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಬೇಡಿಕೆ ಹೆಚ್ಚಳ: ಹೊರರಾಜ್ಯಗಳಿಂದ ಖರೀದಿಗೆ ನಿರ್ಧಾರ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.21: ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಪ್ರಮಾಣ 16 ಸಾವಿರ ಮೆಗಾವ್ಯಾಟ್ ಗಿಂತಲೂ ಹೆಚ್ಚಾಗಲಿದ್ದು ಈ ಹಿನ್ನೆಲೆಯಲ್ಲಿ ಪಂಜಾಬ್, ಉತ್ತರ ಪ್ರದೇಶರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.

ತೀವ್ರ ಬರದ ನಡುವೆಯೂ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸರ್ಕಾರ ಸಜ್ಜಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಸದ್ಯದ ಅಂಕಿ ಅಂಶಗಳ ಪ್ರಕಾರ, ರಾಜ್ಯದ ದೈನಂದಿನ ವಿದ್ಯುತ್ ಬೇಡಿಕೆ ಸುಮಾರು 14,000 ಮೆ.ವ್ಯಾ. ಮತ್ತು ನೀರಾವರಿ ಪಂಪ್‌ಸೆಟ್ ಸೆಟ್ ಗಳಿಗೆ ವಿದ್ಯುತ್ ಬೇಡಿಕೆ ಸುಮಾರು 4,500 ಮೆ.ವ್ಯಾ. ಇದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಳದ ಜತೆಗೆ ಸೆಕ್ಷನ್ 11 ಜಾರಿ, ಇತರ ರಾಜ್ಯಗಳಿಂದ ವಿದ್ಯುತ್ ಮತ್ತು ಇಂಧನ ಮಾರುಕಟ್ಟೆಯಿಂದ ಖರೀದಿಸಿದ ಬಳಿಕ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಾವರಿ ಪಂಪ್‌ಸೈಟ್ ಫೀಡರ್‌ಗಳಿಗೆ 7 ತಾಸು ವಿದ್ಯುತ್ ಪೂರೈಕೆ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಬೇಸಿಗೆಗೆ ಸಿದ್ಧತೆ:

ಈ ವರ್ಷ ಮಳೆ ಕೊರತೆ ಹೆಚ್ಚಾಗಿರುವ ಕಾರಣದಿಂದ ಇಂಧನ ಬೇಡಿಕೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಸದ್ಯ ವಿದ್ಯುತ್ ಬೇಡಿಕೆಗೆ ತಕ್ಕಂತೆ ಉತ್ಪಾದನೆ ಮಾಡಲಾಗುತ್ತಿದೆ. 2024ರ ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಸರಾಸರಿ ವಿದ್ಯುತ್ ಬೇಡಿಕೆ ಸುಮಾರು 15,500 ಮೆ.ವ್ಯಾ ನಿಂದ 16,500 ಮೆ.ವ್ಯಾ. ತಲುಪುವ ನಿರೀಕ್ಷೆಯಿದೆ. ರಾಜ್ಯದ ವಿದ್ಯುತ್ ಬೇಡಿಕೆಯನ್ನು ಪೂರೈಸಲು, ಇಂಧನ ಮಾರುಕಟ್ಟೆಯಿಂದ ವಿದ್ಯುತ್ ಸಂಗ್ರಹಣೆ ಮತ್ತು ಪಂಜಾಬ್ (300ಮೆ.ವ್ಯಾ) ಮತ್ತು ಉತ್ತರ ಪ್ರದೇಶದಿಂದ (100-600ಮೆ.ವ್ಯಾ.) ವಿದ್ಯುತ್ ಖರೀದಿಸಲು ಉದ್ದೇಶಿಸಲಾಗಿದೆ. ರಾಜ್ಯದ ಉಷ್ಣ ವಿದ್ಯುತ್ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವುದು ಮತ್ತು ಎಓಹೆಚ್ ಜನರೇಟರ್‌ಗಳ ಪುನಾರಂಭಿಸಲಾಗುವುದು. ಕೆಪಿಸಿಎಲ್‌ನ ಉಷ್ಣ ವಿದ್ಯುತ್ ಸ್ಥಾವರಗಳ ಉತ್ಪಾದನೆಯನ್ನು 3500 ಮೆ.ವ್ಯಾವರೆಗೆ ಹೆಚ್ಚಿಸುವುದು. 370 ಮೆ.ವ್ಯಾ. ಸಾಮರ್ಥ್ಯದ ಯಲಹಂಕ ಅನಿಲ ಸ್ಥಾವರದಲ್ಲಿ ಶೀಘ್ರದಲ್ಲೇ ಉತ್ಪಾದನೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಬೇಡಿಕೆ ಆಧರಿಸಿ ಅಲ್ಪಾವಧಿ ಅಧಾರದಲ್ಲಿ 1500 ಮೆ.ವ್ಯಾ. ವಿದ್ಯುತ್ ಖರೀದಿಸಲು ಕೆಇಆರ್‌ಸಿ ಅನುಮೋದನೆ ಪಡೆದು ಪ್ರಕ್ರಿಯೆ ಪ್ರಾರಂಭಿಸಲಾಗಿದೆ . 2023ರ ಅಕ್ಟೋಬರ್ 17ರಿಂದ ಸೆಕ್ಷನ್ 11 ಜಾರಿಗೊಳಿಸಲಾಗಿದ್ದು, ಉತ್ಪಾದಕರಿಂದ 1000ಮೆ.ವ್ಯಾ.ಗೂ ಹೆಚ್ಚಿನ ವಿದ್ಯುತ್ ಪಡೆದುಕೊಳ್ಳಲಾಗಿದೆ. ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ 2023ರ ಅಕ್ಟೋಬರ್‌ನಿಂದ ತಿಂಗಳಿಗೆ 2 ಲಕ್ಷ ಟನ್‌ಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಲಭ್ಯವಾಗುತ್ತಿದೆ. 2023ರ ಡಿಸೆಂಬರ್ 1ರಿಂದ ಕೂಡಿಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ 150 ಮೆ.ವ್ಯಾ ಉತ್ಪಾದನೆ ಪುನಾರಂಭಿಸಲಾಗುವುದು. ಥರ್ಮಲ್ ಜನರೇಟರ್‌ಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ದೇಶೀಯ ಕಲ್ಲಿದ್ದಲಿನೊಂದಿಗೆ ಅಮದು ಕಲ್ಲಿದ್ದಲನ್ನು ಸರಾಸರಿ ಶೇ.10ರಷ್ಟು ಮಿಶ್ರಣ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಉತ್ಪಾದನೆ ಹೆಚ್ಚಳಕ್ಕೆ ಕೈಗೊಂಡಿರುವ ಕ್ರಮಗಳು: ಯಲಹಂಕ ಸಂಯೋಜಿತ ಸೈಕಲ್ ಸ್ಥಾವರಕ್ಕೆ (ವೈಸಿಸಿಪಿ) ಅಗತ್ಯ ಗ್ಯಾಸ್ ಪೂರೈಸಿ, 6 ತಿಂಗಳೊಳಗೆ ಕಾರ್ಯಗತಗೊಳಿಸಲು ಸರ್ಕಾರದಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (SECI) ದಿಂದ 1100 ಮೆ.ವ್ಯಾ. ಹೈಬ್ರಿಡ್ (ಪವನ, ಸೌರ ಮತ್ತು ಸಂಗ್ರಹಣಾ) ಇಂಧನ ಪಡೆಯಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಜರಿದ್ದರು.

ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಬಾಕಿ ಮನ್ನಾ

ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯ 2.64 ಲಕ್ಷ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಶುಲ್ಕ 389.66 ಕೋಟಿ ರೂ. ಮನ್ನಾ ಮಾಡಿ, ಗೃಹ ಜ್ಯೋತಿ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. ಜುಲೈ ತಿಂಗಳಿನಿಂದ ಅನ್ವಯವಾಗುವಂತೆ ಜಾರಿಗೊಳಿಸಿರುವ 'ಗೃಹ ಜ್ಯೋತಿ'ಯ ಲಾಭ ಪಡೆಯಲು ಇದ್ದ ತೊಡಕನ್ನು ನಿವಾರಿಸಿ, 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ಬಳಸಲು ಈ ಮೂಲಕ ಅನುಕೂಲ ಮಾಡಿಕೊಡಲಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ಸಾಮರ್ಥ್ಯದ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್‌ ಬಿಲ್‌ ಅಸಲು 47.7 ಕೋಟಿ ರೂ. ಮತ್ತು ಬಡ್ಡಿ 16.47 ಕೋಟಿ ರೂ. ಸೇರಿ ಒಟ್ಟು 64.24 ಕೋಟಿ ರೂ. 2023ರ ಸೆಪ್ಟೆಂಬರ್‌ 30 ರವರೆಗೆ ಬಾಕಿ ಉಳಿದಿದೆ. ರೈತರು ಅಸಲು ಮೊತ್ತ ಪಾವತಿಸಿದ ನಂತರ ಸಂಚಿತ ಬಡ್ಡಿಯನ್ನು ಮನ್ನಾ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ