Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಪಟೂರಿನಲ್ಲಿ ಸ್ವಾತಂತ್ರ್ಯೋತ್ಸವ

ಸುದ್ದಿಮೂಲ ವಾರ್ತೆ

ತಿಪಟೂರು, ಆ. 15 : ತಾಲೂಕು ಕಿಬ್ಬನಹಳ್ಳಿ ಹೋಬಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವತಿಯಿಂದ ಕರಡಾಳು ಸಂತೆ ಮೈದಾನ ಶಾಲೆಯಲ್ಲಿ ಇಂದು 77ನೇ ವೈಭವದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೆ.ಎಲ್.ಗೋಪಿ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಭಾರತ ದೇಶವನ್ನ ಸ್ವತಂತ್ರಗೊಳಿಸಲು ಹಲವಾರು ಮಹಾನ್ ನಾಯಕರುಗಳ ತ್ಯಾಗ ಬಲಿದಾನಗಳನ್ನ ನಾವು ಸದಾ ಸ್ಮರಿಸಬೇಕು. ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ನಮ್ಮ ದೇಶ ಸ್ವತಂತ್ರಗೊಳ್ಳಲು ಹಲವಾರು ನೇತಾರರು ಶ್ರಮಿಸಿದ್ದಾರೆ. ಅವರ ಜೀವನದ ಕಥೆಗಳನ್ನು ಓದಿ ಆ ಮಹಾನ್ ನಾಯಕರುಗಳ ಮಾರ್ಗದರ್ಶನದಂತೆ ನೀವು ಸಹ ದೇಶಭಕ್ತರಾಗಿ ದೇಶಕ್ಕಾಗಿ ದುಡಿಯುವ ಯುವಶಕ್ತಿ ಆಗಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಲೆಗೆ ನೂತನವಾಗಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಪ್ರತಿ ಮಗುವಿಗೆ ಪಠ್ಯ ಸಾಮಾಗ್ರಿಗಳುಳ್ಳ ಕಿಟ್‌ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ಕೆ. ಪಟ್ಟಾಭಿರಾಮು, ಸಹಶಿಕ್ಷಕಿ ಛಾಯ.ಎನ್. ಎಸ್ ಡಿ ಎಂ ಸಿ ಸದಸ್ಯರಾದ ನರಸಿಂಹಮೂರ್ತಿ, ಸ್ವರೂಪ್, ಮಂಜುನಾಥ್, ರಾಣಿ, ಭಾಗ್ಯ, ಸರಸ್ವತಿ, ದಿವ್ಯ ರಾಣಿ ಗ್ರಾಮಸ್ಥರಾದ ಶಿವನಂಜಪ್ಪ, ಟೈಲರ್ ಶಿವಶಂಕರಣ್ಣ ರಘು, ಹಿರಿಯ ವಿದ್ಯಾರ್ಥಿಗಳಾದ ಪೃಥ್ವಿ ಬಿಂದುರಾಣಿ ಶಾಲಾ ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ