Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯ ದಿನಾಚರಣೆ ಜವಾಬ್ದಾರಿ ಹೆಚ್ಚಿಸುತ್ತದೆ: ಆಶಾ ಕಾಮತ್

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.15: ಸ್ವಾತಂತ್ರ್ಯ ದಿನಾಚರಣೆಯು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದು ಅಮೆರಿಕಾದ ಅಡೋಬಿಯ ಪ್ರಿನ್ಸಿಪಾಲ್ ಪ್ರೋಗ್ರಾಮ್ ಮ್ಯಾನೇಜರ್ ಆಶಾ ಕಾಮತ್ ಅವರು ಹೇಳಿದರು.

ಅವರು ಮಂಗಳೂರು ಎಕ್ಸ್‌ಪರ್ಟ್‌ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಶ್ರೀ ಭಗವತಿ ದೇವಸ್ಥಾನದ ಆವರಣದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಗುಲಾಮಗಿರಿಯ ಸಂಕೋಲೆಯನ್ನು ಮುರಿಯಲು ನಮಗೆ ನೂರಾರು ವರ್ಷಗಳು ಸಂದವು. ನಾವೆಲ್ಲರೂ ಪ್ರಜಾಪ್ರಭುತ್ವವನ್ನು ಆ ಮೂಲಕ ಎತ್ತಿಹಿಡಿಯಬೇಕಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ದೊರಕಿರುವ ಮೌಲ್ಯಗಳನ್ನು ದೇಶಕ್ಕಾಗಿ ಸಮರ್ಪಣೆ ಮಾಡಬೇಕು ಎಂದು ಹೇಳಿದರು.

ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರು ಮಾತನಾಡಿ, ನಾವೆಲ್ಲರೂ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳುತ್ತ ನಮ್ಮೆಲ್ಲರ ಕರ್ತವ್ಯ ಪ್ರಜ್ಞೆಯನ್ನು ನಿಷ್ಠೆಯಿಂದ ನಿರ್ವಹಿಸುವ ಮೂಲಕ ದೇಶ ಸೇವೆಯನ್ನು ಮಾಡಬೇಕುಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅವರು ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಮಾತನಾಡಿ, ನಾವು ಭಾರತೀಯರು ಎನ್ನುವ ಬಗ್ಗೆ ನಮಗೆ ಹೆಮ್ಮೆ ಇರಬೇಕು. ರಾಷ್ಟ್ರೀಯತೆಯ ಮನೋಭಾವವನ್ನು ಅರ್ಥ ಮಾಡಿಕೊಳ್ಳುವ ಮೂಲಕ ರಾಷ್ಟ್ರಕ್ಕಾಗಿ ಜೀವನ ತ್ಯಾಗ ಮಾಡಿದ ಮಹಾನ್ ನಾಯಕರುಗಳ ಜೀವನಗಾಥೆಯು ನಮಗೆ ಸ್ಫೂರ್ತಿ ಆಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮುಂಬೈನ ವಿವಿದ್ ಆರ್ಟ್ಸ್‌ ಮತ್ತು ಎಂಟಟೈನ್ಮೆಂಟ್ ನಿರ್ದೇಶಕ ಬಿ.ನರಹರಿ, ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತುಶಿಲ್ಪ ತಜ್ಞೆ ದೀಪಿಕಾ ಎ. ನಾಯಕ್, ಯೋಗಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಪ್ರಾಂಶುಪಾಲ

ಪ್ರೊ.ರಾಮಚಂದ್ರ ಭಟ್ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ