Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ 

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ. 14 : ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ ಬೀಳಲಿದೆ.. ಆಗಸ್ಟ್ 4ರಿಂದ 214ನೇ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಆಗಸ್ಟ್ 15ರಂದು ಫಲಪುಷ್ಪ ಪ್ರದರ್ಶನ ಮುಕ್ತಾಯವಾಗಲಿದೆ.

ಇದುವರೆಗೂ ಈ ಫಲಪುಷ್ಪ ಪ್ರದರ್ಶನವನ್ನು 4 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಟಿಕೆಟ್ ಮಾರಾಟದಿಂದಲೆ ತೋಟಗಾರಿಕಾ ಇಲಾಖೆ 1.8 ಕೋಟಿ ರೂಪಾಯಿ ಸಂಗ್ರಹಿಸಿದೆ. ಲಾಲ್ ಬಾಗ್ ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಹಿರಿಯರಿಗೆ 70 ರೂ., ಮಕ್ಕಳಿಗೆ 30 ರೂ. ನಿಗದಿ ಮಾಡಲಾಗಿದೆ.

ಈ ಬಾರಿ ಕರ್ನಾಟಕದ ಎರಡನೇ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರಿಗೆ ಅರ್ಪಿಸಲಾಗಿದೆ. ವಿಧಾನಸೌಧದ 18 ಅಡಿ ಪ್ರತಿಕೃತಿ, 14 ಅಡಿಯ ಕೆಂಗಲ್ ಹನುಮಂತಯ್ಯ ಪ್ರತಿಮೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಆಕರ್ಷಣೆಯಾಗಿದೆ. 10 ಲಕ್ಷ ಹೂವುಗಳನ್ನು ಬಳಸಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿ ನಿರ್ಮಾಣ ಮಾಡಲಾಗಿದೆ.

ಇಂದು ಒಂದೇ ದಿನ ಲಕ್ಷಾಂತರ ಮಂದಿ ಫಲಪುಷ್ಪ ವೀಕ್ಷಣೆಗೆ ಆಗಮಿಸುವ ನಿರೀಕ್ಷೆ ಮಾಡಲಾಗಿದೆ. ಇದಕ್ಕಾಗಿಯೇ ಬೆಳಗ್ಗೆ 7 ಗಂಟೆಯಿಂದಲೇ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇನ್ನು ಸಂಚಾರ ದಟ್ಟಣೆ ತಪ್ಪಿಸುವ ದೃಷ್ಟಿಯಿಂದ ಫಲಪುಷ್ಪ ವೀಕ್ಷಣೆಗೆ ಬರುವವರು ಸಾರ್ವಜನಿಕರ ಸಾರಿಗೆ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ