Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆ.ವೆಂಕಟಾಪುರ ಗ್ರಾ.ಪಂ.ಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಆ.3: ತಾಲೂಕಿನ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಎಂ.ನಾಗೇಶ್, ಉಪಾಧ್ಯಕ್ಷರಾಗಿ ಇಂದಿರಾ ಶಿವಶಂಕರ್ ಅವಿರೋಧ ಆಯ್ಕೆಯಾಗಿದ್ದಾರೆ. ಈ ಮೂಲಕ ಜೆ.ವೆಂಕಟಾಪುರ ಗ್ರಾ,ಪಂಯಲ್ಲಿ ಕಾಂಗ್ರೆಸ್‍ ಆಡಳಿತ ಮುಂದುವರೆದಿದೆ.

ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡ(ಮಹಿಳೆ) ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಎಂ.ನಾಗೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಇಂದಿರಾ ಶಿವಶಂಕರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಈ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಘೋಷಿಸಿದರು.

ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ಇರುವ ಅನುದಾನವನ್ನು ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೋರಲಾಗುವುದು. ಇದಕ್ಕೆ ಕ್ಷೇತ್ರದಲ್ಲಿನ ಹೆಚ್ಚಿನ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬರಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನರಾಜೀವ್‍ಗೌಡ, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಶಾಂತಮ್ಮ ದೇವರಾಜ್, ಮಾಜಿ ಉಪಾಧ್ಯಕ್ಷೆ ಶಶಿಕಲಾ, ಅಮರೇಶ್, ಪರಮೇಶ್, ಸುಗಟೂರು ಶಂಕರ್, ಮಿಥನಹಳ್ಳಿ ಹರೀಶ್, ಎ.ಸತೀಶ್ ಕುಮಾರ್, ಹಿರೇಬಲ್ಲ ರವಿಕುಮಾರ್, ಕೃಷ್ಣಪ್ಪ, ಬಸವಾಪಟ್ಟಣ ಬೈರೇಗೌಡ, ನಾಗಮಂಗಲ ತಮಣ್ಣ, ಅಪ್ಪೇಗೌಡನಹಳ್ಳಿ ಮಂಜುನಾಥ್, ಆನೂರು ರವಿ, ಡಿಸಿ ಮುನಿರಾಜು, ಪಿಡಿಓ ಕೃಷ್ಣಪ್ಪ, ಕಾತ್ಯಾಯಿನಿ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ