Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೀವ್ರವಾಗಿ ಕ್ಷೀಣಿಸಿದ ಜಲಾಶಯಗಳ ಒಳ ಹರಿವು

 

ಸುದ್ದಿಮೂಲ ವಾರ್ತೆ

ಮೈಸೂರು,ಅ.31:ಮಳೆ ಇಲ್ಲದೇ ಕಾವೇರಿ ಕೊಳ್ಳದ ಜಲಾಶಯಗಳ ಒಳಹರಿವು ತೀವ್ರತರವಾಗಿ ಕ್ಷೀಣಿಸುತ್ತಿರುವ ನಡುವೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡುತ್ತಿರುವುದನ್ನು ಖಂಡಿಸಿ ಮೈಸೂರು, ಮಂಢ್ಯ, ಚಾಮರಾಜನಗರದಲ್ಲಿ ಕಾವೇರಿ ಹೋರಾಟಗಾರರ ಆಕ್ರೋಶ ಭುಗಿಲೆದ್ದಿದೆ.

ಅಲ್ಲಲ್ಲಿ ಧರಣಿ, ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದರಲ್ಲೂ ಮಂಡ್ಯದಲ್ಲಿ ಕಳೆದ 56 ದಿನಗಳಿಂದ ಧರಣಿ ನಡೆಸುತ್ತಿರುವ ರೈತ ಸಂಘದ ಪದಾಧಿಕಾರಿಗಳ ಮತ್ತೆ 15 ದಿನಗಳವರೆಗೆ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ರಸ್ತೆತಡೆ, ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೂಡಲೆ ರಾಜ್ಯದ ರೈತರ ಹಿತಕಾಯಬೇಕು ಎಂದು ಆಗ್ರಹಿಸಿದರು.

ಸರ್ ಎಂ.ವಿ ಪ್ರತಿಮೆ ಎದುರು ನಿರಂತರ ಧರಣಿಯಲ್ಲಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮುಖಂಡರ ಜೊತೆಗೂಡಿದ ಮದ್ದೂರು ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರು ಮಾಜಿ ಸಚಿವ ಡಿ.ಸಿ ತಮ್ಮಣ್ಣ ನೇತೃತ್ವದಲ್ಲಿ ಭಾಗಿಯಾದರು. ಅದೇ ರೀತಿ ಮಂಡ್ಯ ನಗರದ ವಾಯು ವಿಹಾರಿ ಬಳಗದ ಸದಸ್ಯರು ಕಾವೇರಿ ಹೋರಾಟ ಬೆಂಬಲಿಸಿದರು. ಬೆಂಗಳೂರು – ಮೈಸೂರು ಹೆದ್ದಾರಿ ತಡೆ ಮಾಡಿದ ಪ್ರತಿಭಟನಾ ನಿರತರು ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣರಾಜಸಾಗರದಿಂದ ನೆರೆ ರಾಜ್ಯಕ್ಕೆ ನಿರಂತರವಾಗಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈ ಕೂಡಲೇ ನೀರು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯ ಪಡೆಯಲು ಸರ್ಕಾರ ಸಲಹಾ ಸಮಿತಿಯನ್ನು ರಚಿಸಬೇಕು ಇದರಲ್ಲಿ ತಜ್ಞರನ್ನು ನೇಮಿಸಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳ ಬಗ್ಗೆ ವರದಿ ನೀಡಿದರೆ ಪರಿಹಾರ ರೂಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಅಸ್ತಿತ್ವಕ್ಕೆ ಬಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂದೆ ಆಗಿದ್ದ ಎಲ್ಲಾ ಒಪ್ಪಂದಗಳು ರದ್ದು ಆಗಿದೆ,ಆದರೆ ಕಾವೇರಿ ಒಪ್ಪಂದ ಮಾತ್ರ ಹೇಗೆ ಮುಂದುವರೆಯಿತು. ಬ್ರಿಟಿಷರ ಕಾಲದ ಒಪ್ಪಂದ ಈಗಲೂ ಚಾಲ್ತಿಯಲ್ಲಿದೆ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಮಾತನಾಡಿ, ಕಾವೇರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿರುವುದಕ್ಕೆ ಸಮರ್ಥ ನೀರಾವರಿ ತಜ್ಞರ ತಂಡ ಇಲ್ಲಇರುವುದೇ ಕಾರಣವಾಗಿದೆ, ನೀರಾವರಿ ತಜ್ಞರು ಸಮಗ್ರ ಮಾಹಿತಿಯನ್ನು ಕಾನೂನು ತಂಡಕ್ಕೆ ಒದಗಿಸಿ ಕೊಟ್ಟರೆ ಸಮರ್ಥವಾದ ಮಾಡಲು ಸಾಧ್ಯ ಆದರೆ ಅಂತ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲವಾಗಿದೆ ಎಂದು ಹೇಳಿದರು.

ಕಾವೇರಿ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳು ಅಸಡ್ಡೆ ತೋರಿದ್ದಾರೆ, ಹೋರಾಟಗಾರರ ಜೊತೆ ಕನಿಷ್ಠ ಮಾತುಕತೆಯನ್ನು ನಡೆಸಿಲ್ಲ, ಬೀದಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದರು ಸ್ಪಂದಿಸದೆ ಇರುವುದು ನಾಗರಿಕ ಸರ್ಕಾರದ ಲಕ್ಷಣವಲ್ಲ,ಮುಖ್ಯಮಂತ್ರಿಗಳ ನಡೆ ನಾಚಿಕೆಗೇಡು, ನೀರು ಬಿಡುವುದಿಲ್ಲ ಎಂಬ ನಿರ್ಣಯ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದ್ದು, ಕಾನೂನು ಹೋರಾಟಕ್ಕೆ ಮುಂದಾಗ ಬೇಕಾಗಿದೆ ಎಂದು ಹೇಳಿದರು.

ಜಾ.ದಳ ಜಿಲ್ಲಾಧ್ಯಕ್ಷ ಡಿ.ರಮೇಶ್,ಮದ್ದೂರು ತಾಲೂಕು ಘಟಕದ ಚಿಕ್ಕ ತಿಮ್ಮೇಗೌಡ, ಬಸವರಾಜ್, ಆದಿಲ್, ಮಾದನಾಯಕನಹಳ್ಳಿ ರಾಜಣ್ಣ, ಆತಗೂರುವೆಂಕಟಚಲುವಯ್ಯ ,ರತ್ನಮ್ಮ,ಪ್ರಮೀಳಾ,ಆತ್ಮನಂದ,ಅರವಿಂದ, ಪ್ರವೀಣ್, ಸ್ವಾಮಿ ನೇತೃತ್ವವಹಿಸಿದ್ದರು.

ಜಿಲ್ಲಾ ರೈತ ರಕ್ಷಣಾ ಸಮಿತಿಯ ಸುನಂದ ಜಯರಾಂ.ಎಂ.ಎಸ್ ಆತ್ಮಾನಂದ,ಕೆ. ಬೋರಯ್ಯ, ಅಂಬುಜಮ್ಮ,ರೈತ ಸಂಘದ ಇಂಡು ವಾಳು ಚಂದ್ರಶೇಖರ್, ಮುದ್ದೇಗೌಡ, ಕನ್ನಡ ಸೇನೆ ಮಂಜುನಾಥ್, ದಸಂಸ ಎಂವಿ ಕೃಷ್ಣ, ನಾರಾಯಣ್,ವಾಯು ವಿಹಾರಿ ಬಳಗದ ಎಸ್. ಡಿ.ನಾಗರಾಜ್.ಕೃಷ್ಣಪ್ಪ,ಮಂಚೇಗೌಡ ನೇತೃತ್ವ ವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ