Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

15ನೇ ಹಣಕಾಸು ಆಯೋಗದದಲ್ಲಿ ಕರ್ನಾಟಕಕ್ಕೆ ಅನ್ಯಾಯ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.6: ಕರ್ನಾಟಕ ರಾಜ್ಯಕ್ಕೆ 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕ ಅನ್ಯಾಯ ಆಗಿದ್ದು, 16ನೇ ಹಣಕಾಸು ಆಯೋಗದಲ್ಲಿ ಅದನ್ನು ಸರಿದೂಗಿಸಲು ಮತ್ತು ಮುಂದೆ ಅನ್ಯಾಯ ಆಗದಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಷತ್ತಿನಲ್ಲಿ ಜೆಡಿಎಸ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸದ ಮುಖ್ಯಮಂತ್ರಿಗಳು. 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ, 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗಿದೆ. ಬೆಲೆ ಏರಿಕೆಗಳ ಮಧ್ಯೆ ಕರ್ನಾಟಕಕ್ಕೆ ಎಷ್ಟು ಹಂಚಿಕೆ ಆಗಬೇಕಿತ್ತೋ ಅಷ್ಟು ಆಗಿಲ್ಲ. 14ನೇ ಆಯೋಗದಲ್ಲಿ ಕರ್ನಾಟಕದ ಪಾಲು ಶೇ.4.71ರಷ್ಟಿದ್ದರೆ, 15ನೇ ಹಣಕಾಸು ಆಯೋಗದಲ್ಲಿ ಅದು ಶೇ 3.65ಕ್ಕೆ ಇಳಿಕೆ ಮಾಡಲಾಗಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಶಿಫಾರಸು ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರೇ ಕೇಂದ್ರ ಹಣಕಾಸು ಸಚಿವೆ ಆಗಿದ್ದರೂ ಕರ್ನಾಟಕ್ಕೆ ಅನ್ಯಾಯ ಮಾಡಲಾಯಿತು. ಈ ಹಿಂದಿನ ಸರ್ಕಾರಕ್ಕೆ ಇದನ್ನು ಹೇಳಿ ರಾಜ್ಯದ ಪಾಲು ಪಡೆಯಿರಿ ಎಂದು ಒತ್ತಾಯ ಮಾಡಿದರೂ ಸಹ ಅವರು ಆಸಕ್ತಿ ವಹಿಸಲಿಲ್ಲ ಎಂದರು.

ಜನಸಂಖ್ಯೆ ಆಧಾರದ ಮೇಲೆ ಉತ್ತರಪ್ರದೇಶ, ಬಿಹಾರಕ್ಕೆ ಹೆಚ್ಚಿನ ಪಾಲು ನೀಡಿ, ಆರ್ಥಿಕವಾಗಿ ಸಬಲೀಕರಣವಾಗಿ ಹೆಚ್ಚಿನ ತೆರಿಗೆ ಕಟ್ಟುವಂತಹ ಕರ್ನಾಟಕಕ್ಕೆ ಅನ್ಯಾಯ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಇದಲ್ಲದೆ, ನೇರ ತೆರಿಗೆ ಹಾಕಿದರೆ ರಾಜ್ಯಕ್ಕೂ ಪಾಲು ಕೊಡಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಕೆಲವು ಸೆಸ್ ಚಾರ್ಜ್‌ಗಳನ್ನು ಹಾಕಿ ಸಹ ಅನ್ಯಾಯ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರ.

16ನೇ ಹಣಕಾಸು ಆಯೋಗ ರಚನೆಗೆ ರಾಷ್ಟ್ರಪತಿಗಳು ಸೂಚಿಸಿದ್ದಾರೆ. ನೂತನ ಆಯೋಗದ ವಿಚಾರಣೆ ನಿಬಂಧನೆಗಳ ಬಗ್ಗೆ ರಾಜ್ಯ ಸರ್ಕಾರವು ಪ್ರಸ್ತಾವನೆಯನ್ನು ಸಿದ್ದಪಡಿಸುತ್ತಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದೆ. ರಾಜ್ಯದ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಪಾಲನ್ನು ಪಡೆಯಲು ಪಕ್ಷಾತೀತವಾಗಿ ರಾಜ್ಯದ ಪರವಾಗಿ ಹೋರಾಟ ಮಾಡಬೇಕು. ಆಯೋಗದ ಮುಂದೆ ಸರ್ಕಾರ ಸಹ ಸಮರ್ಥವಾಗಿ ತನ್ನ ವಾದ ಮಂಡಿಸುವ ಮೂಲಕ ರಾಜ್ಯಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ