Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್ಸಾರ್ಟಿಸಿ ಸಿಬ್ಬಂದಿಗೆ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ


ಸುದ್ದಿಮೂಲ ವಾರ್ತೆ




ಬೆಂಗಳೂರು ನ. 2 :ಕೆಎಸ್‌ ಅರ್‌ ಟಿ ಸಿಯ ಎಲ್ಲಾ ಸಿಬ್ಬಂದಿಗೆ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ.



ನಿಗಮವು “ಆರೋಗ್ಯವಂತ ನೌಕರರೇ ಸಂಸ್ಥೆಯ ಆಸ್ತಿ” ಎಂದು ಪರಿಗಣಿಸಿದೆ. ನಿಗಮದಲ್ಲಿ ಒಟ್ಟು 34000 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಆ ಪೈಕಿ 24686 ಚಾಲಕ ಮತ್ತು ನಿರ್ವಾಹಕರಿದ್ದಾರೆ. ನಿಗಮದ ನೌಕರರ ಕಾರ್ಯಸ್ವರೂಪ, ಜೀವನಶೈಲಿ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿದೆ.  ಅದರಲ್ಲೂ, 40 ವರ್ಷ ಮೇಲ್ಪಟ್ಟ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.


ಈ ಸಂದರ್ಭದಲ್ಲಿ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ , ಬಿಎಂಟಿಸಿಯಲ್ಲಿಯೂ ಈ ಯೋಜನೆಯಿದ್ದು, ಅಲ್ಲಿ 45 ವರುಷ ಮೇಲ್ಪಟ್ಟ ಸಿಬ್ಬಂದಿಗಳು ಈ ಯೋಜನೆಗೆ ಒಳಪಡುತ್ತಾರೆ. ಆದರೆ ಕೆ ಎಸ್‌ ಆರ್‌ ಟಿ ಸಿಯಲ್ಲಿ 40 ವರುಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಈ ಯೋಜನೆ ಅನುಷ್ಠಾನ ಮಾಡಿರುವುದು ಒಳ್ಳೆಯದು. ಏಕೆಂದರೆ ಈಗ 40 ರ ಆಸುಪಾಸಿನಲ್ಲಿಯೇ ಹೃದಯ ಸಂಬಂಧಿ ತೊಂದರೆಗಳು ಹೆಚ್ಚು ವರದಿಯಾಗುತ್ತಿವೆ ಎಂದರು.


ನಿಗಮವು ಜಯದೇವ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಇನ್ನು ಮುಂದೆ ಸಿಬ್ಬಂದಿಗಳ ಹೃದಯ ಸಂಬಂಧಿ ಕಾಯಿಲೆಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡುವ ಜವಾಬ್ದಾರಿ ನಮ್ಮ ಸಂಸ್ಥೆಯ ಮೇಲಿದ್ದು ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.  ಹಾಗೆಯೇ ನಮ್ಮ ಸಂಸ್ಥೆಯ ಮೈಸೂರಿನ ಕೇಂದ್ರದಲ್ಲಿಯೂ ಸಹ ಅಲ್ಲಿಗೆ ಸಮೀಪವಿರುವ ವಿಭಾಗಗಳ ಸಿಬ್ಬಂದಿಗಳಿಗೆ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.


ಈ ವಿಶೇಷ ವಿಮಾ ಯೋಜನೆಯ ಬಗ್ಗೆ ಡಾ.ಸಿ.ಎನ್ ಮಂಜುನಾಥ್ ಸಂತಸ ವ್ಯಕ್ತಪಡಿಸಿ, ದೇಶದ ಯಾವುದೇ ಸಂಸ್ಥೆಗಳಲ್ಲಿ ಈ ಮಾದರಿಯ 1 ಕೋಟಿ ರೂ. ವಿಮಾ ಮೊತ್ತ ಪಾವತಿಸುವ ಯೋಜನೆ ಜಾರಿಯಾಗಿಲ್ಲ. ನಿಗಮವು ಎರಡು ಮೂರು ದಿನಗಳ ಹಿಂದೆಯಷ್ಟೇ ರೂ 10 ಲಕ್ಷಕ್ಕೆ ಏರಿಕೆ ಮಾಡಿದ ಕುಟುಂಬ ಕಲ್ಯಾಣ ಪರಿಹಾರ ಯೋಜನೆ ಅಭಿನಂದನೀಯ ಎಂದರು.


ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ,  ಈ ಒಡಂಬಡಿಕೆಯ ಮೂಲಕ ಡಾ. ಮಂಜುನಾಥ್‌ ರವರು ಕಡಿಮೆ ದರದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.


 ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ ಅನ್ಬುಕುಮಾರ್, ಈಗಾಗಲೇ ನಿಗಮದ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬದ ಹಿತ ದೃಷ್ಟಿಯಿಂದ ಹಲವು ಕಾಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ನಿಗಮವು ಜಾರಿಗೆ ತಂದಿದ್ದು, ಮುಂದುವರೆದ ಭಾಗವಾಗಿ ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವುದರಿಂದ 40 ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಈ ಯೋಜನೆಯು ಉಪಯೋಗವಾಗಲಿದ್ದು, ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು 1200 ರೂ. ಗಳನ್ನು ಅಂದರೆ ವಾರ್ಷಿಕ 2.55 ಕೋಟಿಯನ್ನು ಜಯದೇವ ಆಸ್ಪತ್ರೆಗೆ ಪಾವತಿ ಮಾಡುತ್ತದೆ. ಈ ಯೋಜನೆಯು ಅಂದಾಜು ಶೇ.62ರಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.


ಚೆಕ್‌ ವಿತರಣೆ

 ಇದೇ ಸಂದರ್ಭದಲ್ಲಿ ನಿಗಮದಲ್ಲಿ ಸೇವೆಯಲ್ಲಿ ಇರುವಾಗ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆ ಅಡಿಯಲ್ಲಿ ಒಂದು ಕೋಟಿ ಗಳ ಪರಿಹಾರ ಮೊತ್ತವನ್ನು ವಿತರಿಸಲಾಯಿತು.


ಒಂದು ಕೋಟಿ ರೂ. ಚೆಕ್ಕನ್ನು  ಸಹಾಯಕ ಸಂಚಾರ ನಿರೀಕ್ಷಕರು ಧರ್ಮಸ್ಥಳ ಘಟಕ ಪುತ್ತೂರು ವಿಭಾಗ ಮಂಜುನಾಥ ಟಿ ಅವರು ದ್ವಿಚಕ್ರದ ವಾಹನದಲ್ಲಿ ಹೋಗುವಾಗ ವಾಹನದಿಂದ ಬಿದ್ದು ಮೃತಪಟ್ಟಿದ್ದಾರೆ. ನಿಗಮದಲ್ಲಿ 34 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಾರೆ.   ಶ್ರೀನಾಥ್ ಟಿ.ಬಿ ಚಾಲಕ- ನಿರ್ವಾಹಕರಾಗಿದ್ದ ಇವರು  ಘಟಕ 5ರ ಬೆಂಗಳೂರು ಕೇಂದ್ರ ವಿಭಾಗ ನಿಗಮದಲ್ಲಿ 24 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬೊಲೆರೋ ವಾಹನದೊಂದಿಗೆ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ, ಅವರ   ಕುಟುಂದವರಿಗೆ ಚೆಕ್‌ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಡಾ. ನಂದಿನಿ ದೇವಿ. ಕೆ, ಭಾ.ಆ.ಸೇ, ನಿರ್ದೇಶಕರು, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ