Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಮನೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ

ಸುದ್ದಿಮೂಲ ವಾರ್ತೆ

ಮೈಸೂರು,ಜೂ.21:ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಗೊಳ್ಳುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.



ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2015 ರಲ್ಲಿ ಪ್ರಧಾನ ಮಂತ್ರಿಗಳು ಜೂನ್ 21 ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡಬೇಕು ಎಂದು ವಿಶ್ವ ಸಂಸ್ಥೆಯಲ್ಲಿ ಮಂಡಿಸಿದರು. ಅಂದು ಬಹುತೇಕ ರಾಷ್ಟ್ರಗಳು ಒಪ್ಪಿಗೆ ಸೂಚಿಸಿದವು. ಅಂದಿನಿಂದ ವಿಶ್ವ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಮೈಸೂರನ್ನು ಸಿಟಿ ಆಫ್ ಯೋಗ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದರು.

ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಮಾತನಾಡಿ, ನಾವು ಚಿಕ್ಕವರಿದ್ದಾಗ ಡಾ. ರಾಜಕುಮಾರ್ ಅವರ ಯೋಗವನ್ನು ನೋಡುತ್ತಿದ್ದೆ. ಯೋಗ ಮಾಡುವುದರಿಂದ ದೇಹಕ್ಕೆ ತೇಜಸ್ಸನ್ನು ನೀಡುತ್ತದೆ. ಯೋಗ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಮಾತನಾಡಿ, ಮೈಸೂರು ಯೋಗಕ್ಕೆ ಪ್ರಸಿದ್ದಿ ಪಡೆದಿದೆ. ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಿತ್ತು. ಎಲ್ಲಾ ಯೋಗ ಸಂಘ ಸಂಸ್ಥೆಗಳು ಯೋಗ ಬೆಳೆಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಶ್ರೀ ಸೋಮೇಶ್ವರ ಸ್ವಾಮೀಜಿ, ಶಾಸಕ ಶ್ರೀವತ್ಸ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮುಖಂಡರಾದ ತನ್ವೀರ್ ಪಾಷಾ ಸೇರಿದಂತೆ ನಾನಾ ಧರ್ಮಗುರುಗಳು ಹಾಗೂ ಯೋಗಪಟುಗಳು ಭಾಗವಹಿಸಿದ್ದರು.

 

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ