Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸ್ಕೃತಿ ಉಳಿಸಲು ವಚನ ಸಾಹಿತ್ಯ ಸಹಕಾರಿ: ಈಶ್ವರ ಖಂಡ್ರೆ

ಸುದ್ದಿಮೂಲ ವಾರ್ತೆ

ಮೈಸೂರು, ಅ.7: ಮಾತೆಯರು ತಮ್ಮ ಮಕ್ಕಳಿಗೆ ವಚನ ಸಾಹಿತ್ಯ ಬೋಧಿಸಿದರೆ, ಅವರು ಸಂಸ್ಕಾರವಂತರಾಗಿ ನಮ್ಮ ಸಂಸ್ಕೃತಿ ಉಳಿಯುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.

ಮೈಸೂರಿನ ಕಲಾ ಮಂದಿರದಲ್ಲಿಂದು ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯುವಜನತೆ ಮಾದಕ ವಸ್ತುಗಳಿಗೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ದಾಸರಾಗುತ್ತಿದ್ದು, ಮಕ್ಕಳಲ್ಲಿ ಸದ್ಗುಣ ಬೆಳೆಯಲು ಅವರಿಗೆ ಬಾಲ್ಯದಿಂದಲೇ ವಚನ ಸಾಹಿತ್ಯ ಕಲಿಸಬೇಕು ಎಂದು ಸಲಹೆ ನೀಡಿದರು.

ಬಸವಾದಿ ಪ್ರಮಥರು ಈ ಜಗತ್ತಿಗೆ ನೀಡಿರುವ ಕೊಡುಗೆ ಅನುಪಮವಾಗಿದೆ. ಕಾರ್ಲ್ ಮಾರ್ಕ್ಸ್ ನ ದಾಸ್ ಕ್ಯಾಪಿಟಲ್ ಬರುವ ಮೊದಲೆ ದುಡಿಮೆಗೆ ಬೆಲೆ ನೀಡಿ, ಜಾತ್ಯತೀತ ಸಮ ಸಮಾಜದ ಕಲ್ಪನೆಯನ್ನು ನೀಡಿದವರು ಬಸವಾದಿ ಪ್ರಮಥರು ಎಂದು ಹೇಳಿದರು.

ಕಾಯಕವೇ ಕೈಲಾಸ, ಇವ ನಮ್ಮವ ಎಂದು ಸಾರಿದ ಬಸವಣ್ಣನವರು ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಕಟ್ಟಿ ಕೊಟ್ಟಮೊದಲಿಗರು. ಅನುಭವ ಮಂಟಪ ಇದಕ್ಕೆ ಇಂದಿಗೂ ಸಾಕ್ಷಿಯಾಗಿದೆ ಎಂದರು.

ಜಾತಿರಹಿತ ಸಮಾಜದ ಕಲ್ಪನೆಯನ್ನು ಬಸವಣ್ಣನವರು ಹೊಂದಿದ್ದರು. ಆದರೆ ಇಂದಿಗೂ ಅದು ಸಾಕಾರವಾಗಿಲ್ಲ ಎಂದು ಹೇಳಿದರು.

ಈ ಸಮಾಜಕ್ಕೆ ವೀರಶೈವ ಲಿಂಗಾಯತ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದ್ದು, ಎಲ್ಲ ಜಾತಿ, ಜನಾಂಗ, ಧರ್ಮದವರಿಗೆ ಯಾವುದೇ ಭೇದವಿಲ್ಲದೆ, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮಾಡುತ್ತಿರುವ ನಮ್ಮ ಮಠಗಳು ಜಗತ್ತಿಗೆ ಆದರ್ಶಪ್ರಾಯವಾಗಿವೆ ಎಂದರು.

ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವ, ಬುದ್ಧರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದಾರೆ. ಬಡ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ರೂಪಿಸಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ನೀಡಿ ಯಶಸ್ವಿ 5 ವರ್ಷ ಅಧಿಕಾರ ನಡೆಸಿದ ಸಿದ್ದರಾಮಯ್ಯನವರು ಈಗ ಮತ್ತೆ ಮುಖ್ಯಮಂತ್ರಿಗಳಾಗಿ ಬಡವರ ಕಲ್ಯಾಣಕ್ಕಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದಾರೆ ಎಂದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಗಣೇಶ್ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ