Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಡಿನ್‌ಯುಕ್ತ ಉಪ್ಪನ್ನೇ ಬಳಸುವಂತೆ ಸಲಹೆ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಅ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡಿ.ಡಿ.ಯು.ಜಿ.ಕೆ.ವೈ ಟಯೊ ವಿದ್ಯಾಸಂಸ್ಥೆಯಲ್ಲಿ ವಿಶ್ವ ಅಯೋಡಿನ್ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ ಮಹೇಶ್ ಕುಮಾರ್ ಎಸ್. ಎಸ್. ಮಾತನಾಡಿ, ದಿನನಿತ್ಯದ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪನ್ನು ಬಳಸುವುದರಿಂದ ಅಯೋಡಿನ್ ಕೊರತೆಗಳ ನಿಯಂತ್ರಣ ಸಾಧ್ಯ, ಸೂಕ್ಷ್ಮ ಪೋಷಕಾಂಶ ಹೊಂದಿದ್ದು, ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯಕ. ಅಯೋಡಿನ್ ಕೊರತೆಯಿಂದ ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ವಿಕಲತೆ, ಕುಂಠಿತ ಬೆಳವಣಿಗೆ ಮಕ್ಕಳಲ್ಲಿ ಬುದ್ದಿಮಾಂದ್ಯತೆ, ಕಲಿಕೆಯಲ್ಲಿ ಹಿಂದುಳಿಯುವಿಕೆ ಶಕ್ತಿಯ ನಷ್ಟ, ಮೆಳ್ಳೆಗಣ್ಣು ಸ್ನಾಯುಗಳ ಮರಗಟ್ಟುವಿಕೆ, ಕುಬ್ಜತನ, ನಡಿಗೆಯಲ್ಲಿ ಲೋಪದೋಷಗಳು ಮೂಕತನ, ಗರ್ಭಿಣಿಯರಲ್ಲಿ ಪದೇ ಪದೇ ಗರ್ಭಪಾತ, ಮಕ್ಕಳು ಸತ್ತು ಹುಟ್ಟುವ ಸಾಧ್ಯತೆ, ವಯಸ್ಕರಲ್ಲಿ ಕಾರ್ಯನಿರ್ವಹಣೆಯ ವೈಫಲ್ಯ, ಗಳಗಂಡ ರೋಗ ಬರುತ್ತದೆ ಎಂದು ತಿಳಿಸಿದರು.

ಪ್ರತಿದಿನ ಬೇಕಾಗುವ ಅಯೋಡಿನ್ ಅಂಶ ಪ್ರಮಾಣ ಸಾಮಾನ್ಯವಾಗಿ ಒಬ್ಬ ಮನುಷ್ಯನಿಗೆ ಒಂದು ದಿನಕ್ಕೆ 150 ರಿಂದ 300 ಮೈಕ್ರೋ ಗ್ರಾಂ ನಷ್ಟು ಬೇಕಾಗುತ್ತದೆ ಸಮುದ್ರದ ಆಹಾರಗಳಾದ ಮೀನು ಸೀಗಡಿ ಹಾಗೂ ಸಮುದ್ರ ವೀಡ್ಸ್ಗಳಲ್ಲಿ ಅಯೋಡಿನ್ ಹೆಚ್ಚಾಗಿರುತ್ತದೆ.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್ ಮಾನತಾಡಿ, ಸಾಂಕ್ರಾಮಿಕ ರೋಗಗಳು, ಉತ್ತಮ ಆರೋಗ್ಯ ಶೈಲಿ, ಉಪ್ಪಿನಲ್ಲಿ ಅಯೋಡಿನ್ ಪರೀಕ್ಷಿಸುವ ವಿಧಾನಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಡಿ.ಎಸ್.ಒ ಡಾ. ಕೃಷ್ಣ ಪ್ರಸಾದ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಮಂಜುಳಾ, ಉಪ ಆರೋಗ್ಯ ಶಿಕ್ಷಣಾಧಿಕಾರಿ ಸುಧಾ, ಟಯೊ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ನಿತೀನ್ ಹಾಗೂ ತರಬೇತಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ