Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರು ಪೋಲಾಗದಂತೆ ತಡೆಯುವುದು ಅಗತ್ಯ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಅ. 19 : ಇರುವುದೊಂದೆ ಭೂಮಿ. ಇಲ್ಲಿ ನೆಲ, ಜಲ, ಗಾಳಿ ಎಲ್ಲವೂ ಇದೆ. ಮುಂದಿನ ಪೀಳಿಗೆಗೆ ಉಳಿಸಿಕೊಡುವ ಮೂಲಕ ಪ್ರತಿಯೊಂದು ಜೀವ ಸಂಕುಲವು ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ ರಾಮದಾಯಳ ಮೀನಾ ಹೇಳಿದರು.

ಹೊಸಕೋಟೆ ತಾಲೂಕಿನ ಇಟ್ಟಸಂದ್ರ, ಅನುಪಳ್ಳಿ, ನಂದಗುಡಿ, ಕೊಂಡ್ರಹಳ್ಳಿ, ಕಸಬಾ ಹೋಬಳಿಯ ಚೊಕ್ಕಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧಗ್ರಾಮಗಳಿಗೆ ಬುಧವಾರ ಭೇಟಿ ನೀಡಿ ಜಲಶಕ್ತಿ ಅಭಿಯಾನದ ಕಾಮಗಾರಿಗಳನ್ನು ವೀಕ್ಷಿಸಿಮಾತನಾಡಿದರು.

ಕೆರೆ, ಕುಂಟೆ, ಬಾವಿಗಳು ಬತ್ತಿ ಹೋಗಿದೆ. ಮೊದಲು ಕೆರೆ ಕುಂಟೆಯಲ್ಲಿನ ನೀರನ್ನೇ ಕುಡಿಯುತ್ತಿದ್ದರು. ನಂತರ ಅಂತರ್ಜಲ ಪಾತಾಳ ಸೇರುತ್ತಿದ್ದಂತೆ ಬಾವಿಗಳನ್ನು ಬಳಸಿದರು. ಮುಂದೆ ಸಾಗಿ ಕೈ

ಪಂಪ್‌ಗಳ ಬಳಕೆ ಹೆಚ್ಚಾಯಿತು. ಆದರೆ, ಇದೀಗ ಕೊಳವೆ ಬಾವಿಗಳನ್ನು ಹಾಕಿ ನೀರನ್ನುಭೂಮಿಯಿಂದ ತೆಗೆದು ಕುಡಿಯಲು ಬಳಸುವ ಸ್ಥಿತಿ ಎದುರಾಗಿದೆ ಎಂದರು.

ಕೆರೆ, ಕುಂಟೆ, ಬಾವಿಗಳನ್ನು ಉಳಿಸುವುದು ಎಲ್ಲರ ಕೆಲಸವಾಗಬೇಕು. ನೀರು ಪೋಲಾಗುವುದನ್ನು ತಡೆಗಟ್ಟುವ ಕಡೆ ಗಮನ ಹರಿಸಬೇಕು. ದೇಶಾದ್ಯಂತ ಜಲಶಕ್ತಿ ಅಭಿಯಾನದಡಿ ನೀರಿನ ಸಮಸ್ಯೆಎದುರಿಸುತ್ತಿರುವ ಜಿಲ್ಲೆಗಳನ್ನು ಜಲಶಕ್ತಿ ಅಭಿಯಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಾ.ಪಂನ ಇಒ ಚಂದ್ರಶೇಖರ್ ಮಾತನಾಡಿ, ಜಿಲ್ಲೆಯು ಸತತ ಬರಗಾಲದಿಂದ ಆವರಿಸಿದೆ.

ಅಂತರ್ಜಲ ಮಟ್ಟವು ಸಂಪೂರ್ಣ ಕುಸಿದಿದೆ. 1500 ಅಡಿ ಕೊರೆದರೂ ನೀರು ದೊರೆಯುತ್ತಿಲ್ಲ.ಕೆರೆ, ಕುಂಟೆ, ಬಾವಿಗಳನ್ನು ಉಳಿಸುವುದು ಎಲ್ಲರ ಕೆಲಸವಾಗಬೇಕು. ನೀರು ಪೋಲಾಗುವುದನ್ನು ತಡೆಗಟ್ಟುವ ಕಡೆ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಅಭಿಯಾನದ ತಾಂತ್ರಿಕ ಅಧಿಕಾರಿ ಪರ್ವೇಜ್ಅಹಮದ್, ಕಾರ್ಯಪಾಲಕ ಅಭಿಯಂತರರು, ಕೃಷಿ, ಸಣ್ಣ ನೀರಾವರಿ ಅಧಿಕಾರಿ, ಅಟಲ್ ಭೂಜಲ್ಯೋಜನಾಧಿಕಾರಿ, ಪಂಚಾಯ್ತಿ ಪಿಡಿಒಗಳು, ನರೇಗಾ ಯೋಜನೆತಾಂತ್ರಿಕ ಅಭಿಯಂತರರು, ಹಾಗೂ ರೈತರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ