Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಶ್ರೀರಾಮುಲು, ಮಾಜಿ ಶಾಸಕ ಸುರೇಶ್‌ ಬಾಬು ಆಪ್ತರ ಮನೆಗಳ ಮೇಲೆ ಐಟಿ ದಾಳಿ

ಬಳ್ಳಾರಿ : ಸಚಿವ ಬಿ. ಶ್ರೀರಾಮುಲು ಹಾಗೂ ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಆಪ್ತರ‌ ಮೇಲೆ‌‌ ಆದಾಯ ತೆರಿಗೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಬಿ. ಶ್ರೀರಾಮುಲು ಮತ್ತು ಟಿ.ಎಚ್‌. ಸುರೇಶ್ ಬಾಬು‌ ಮಾಲೀಕತ್ಚದ ಫ್ಯಾಕ್ಟರಿಯನ್ನು ಗುತ್ತಿಗೆ ಆಧಾರದಲ್ಲಿ ನಡೆಸುತ್ತಿದ್ದ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಮತ್ತು ಇವರ ಪಾಲುದಾರಿಕೆಯ ಕಂಪನಿಗಳ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರು, ಚೆನೈ ಮೂಲದ ಹದಿನೈದು ಅಧಿಕಾರಿಗಳು ಬೆಂಗಳೂರು, ಬಳ್ಳಾರಿ, ಕೊಪ್ಪಳದಲ್ಲಿ ದಾಳಿ ಕಳೆದ ಎರಡು ದಿನಗಳಿಂದ ನಿಯೋಜಿತ ಸ್ಥಳಗಳಲ್ಲಿ ತಂಗಿ,‌ ದಾಳಿಯನ್ನು ನಡೆಸುತ್ತಿದ್ದಾರೆ ‌ಎನ್ನಲಾಗಿದೆ.

ಬಳ್ಳಾರಿಯ ವಿದ್ಯಾನಗರದ ರಾಗಾಸ್  ಅಪಾರ್ಟ್ಮೆಂಟ್ ನ ಫ್ಲಾಟ್  ನಂಬರ್ 310 ಮತ್ತು 510ಪ್ಲಾಟ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ದಾಖಲೆಗಳ  ಪರಿಶೀಲನೆಯಲ್ಲಿ  ಐಟಿ ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ಸಿಕ್ಕಿವೆ ಎಂದು ಹೇಳಲಾಗಿದೆ.

ಹರಿ ಇಸ್ಪಾತ್ ಫ್ಯಾಕ್ಟರಿಯನ್ನು ಸಚಿವ ಬಿ. ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್  ಕರೀದಿಸಿದ್ದು, ಈ ಹಣದ ಮೂಲವನ್ನು ಅಧಿಕಾರಿಗಳು‌ ಕೆದಕುತ್ತಿದ್ದಾರೆ ಎನ್ನಲಾಗಿದೆ.



ಅಲ್ಲದೆ, ಬೆಳಗಲ್ಲು ಗ್ರಾಮದ‌ ವ್ಯಾಪ್ತಿಯ ಮಹಾಮಾನವ‌ ಅದಿರು ವಾಷಿಂಗ್ ಪ್ಲಾಂಟ್, ಕೊಪ್ಪಳದ ಸಿಮ್ಲಾ ಡಾಬ ಬಳಿಯ ಅದಿರು ವಾಷಿಂಗ್ ಪ್ಲಾಂಟ್, ಬಳ್ಳಾರಿಯ ವೆಂಕಟೇಶ್ವರ,

ಶ್ರೀಹರಿ ಮತ್ತು ಪಿಜಿಎಂ ಪ್ಲಾಂಟ್ ಗೆ ಸೇರಿದ ದಾಖಲೆಗಳಿ ಅಧಿಕಾರಿಗಳ ಪರಿಶೀಲನೆ ಸಂದರ್ಭದಲ್ಲಿ ಸಿಕ್ಕಿವೆ ಎಂದು ಹೇಳಲಾಗುತ್ತದೆ.

ಸಚಿವ ಬಿ. ಶ್ರೀರಾಮುಲು‌, ನನ್ನದು ಯಾವುದೇ ಕೈಗಾರಿಕೆಗಳು ಇಲ್ಲ. ಕೈಗಾರಿಕೆಗಳಲ್ಲಿ ನನ್ನ  ಪಾಲುದಾರಿಕೆಯೂ ಇಲ್ಲ. ಗಣಿಗಾರಿಕೆ ನಡೆಯುವಾಗಲೂ ನನ್ನಲ್ಲಿ ಗಣಿ ಅಥವಾ ಕೈಗಾರಿಕೆ ಇರಲಿಲ್ಲ. ಕಾನೂನಿನ ಪ್ರಕಾರ ಐಟಿ ದಾಳಿಗಳು ನಡೆದಿವೆ ಎಂದು ಸುದ್ದಿಗಾರರಿಗರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ