Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವಕಾಶ ವಂಚಿತರ ಕಾಳಜಿ ಮಾಡಿದವರು ಇಂದಿರಾಗಾಂಧಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.19: ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಅವಕಾಶ ವಂಚಿತರ ಬಗ್ಗೆ ಕಾಳಜಿ, ಉಗ್ರವಾದವನ್ನು ತೀವ್ರವಾಗಿ ಹತ್ತಿಕ್ಕುವ ಕೆಲಸ ಮಾಡಿದರು. ಅದಕ್ಕಾಗಿಯೇ ಪ್ರಾಣ ಕಳೆದುಕೊಂಡರು. ದೇಶಕ್ಕಾಗಿ ಪ್ರಾಣ ತೆತ್ತ ಧೀಮಂತ ಮಹಿಳೆ ಅವರು. ಅವರ ಮಾರ್ಗದರ್ಶನದಲ್ಲಿ ನಡೆಯುವುದೇ ಅವರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಇಂದಿರಾ ಗಾಂಧಿಯವರು ಸುಮಾರು ಹದಿನಾರು ವರ್ಷಗಳ ಕಾಲ ಈ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರ ತಂದೆ ದಿವಂಗತ ಜವಾಹರ್ ಲಾಲ್ ನೆಹರೂ ರವರು ಸಕ್ರಿಯ ರಾಜಕಾಣದಲ್ಲಿ ತೊಡಗಿದ್ದವರು. ಮಹಾತ್ಮ ಗಾಂಧೀಜಿಯವರು ಸೇರಿದಂತೆ ದೇಶದ ಹಿರಿಯ ನಾಯಕರ ಒಡನಾಟವನ್ನು ಅವರ ಕುಟುಂಬ ಹೊಂದಿತ್ತು. ದೇಶದ ಸ್ವಾತಂತ್ರ್ಯ ಇಂದಿರಾ ಗಾಂಧಿಯವರ ಮೇಲೆ ಗಾಢವಾದ ಪರಿಣಾಮ ಬೀರಿತ್ತು. ಜನಪರ ನಿಲುವು ಹೊಂದಿದ್ದ ಇಂದಿರಾಗಾಂಧಿಯವರು ತಮ್ಮ ಇಡೀ ಜೀವನವನ್ನು ದೇಶ ಸೇವೆಗೆ ಮುಪಾಗಿಟ್ಟಿದ್ದರು. ಲಾಲ್ ಬಹಾದ್ದೂರ್ ಶಾಸ್ತ್ರಿಯವರ ನಂತರ ಪ್ರಧಾನಿಯಾದ ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗಿದೆ. ದೇಶದ ಪರ ತೀರ್ಮಾನಗಳನ್ನು ಬಹಳ ದೃಢವಾಗಿ ತೆಗೆದುಕೊಳ್ಳುತ್ತಿದ್ದರು ಎಂದು ಸಿದ್ದರಾಮಯ್ಯ ಅವರು ಸ್ಮರಿಸಿದರು.

ದೇಶದ ಸ್ವಾತಂತ್ರಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದವರಲ್ಲಿ ಕಾಂಗ್ರೆಸ್ ನಾಯಕರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಇಂದು ಅಧಿಕಾರದಲ್ಲಿರುವ ಬಿಜೆಪಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಯಾವ ತ್ಯಾಗ ಬಲಿದಾನಗಳನ್ನು ಮಾಡಿಲ್ಲ. ಜಾತ್ಯತೀತ ತತ್ವ, ಸಾಮಾಜಿಕ ನ್ಯಾಯ, ಬಡವರ ಕಾಳಜಿ, ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಜವಾಹರ್ ಲಾಲ್ ನೆಹರೂರವರು ಪ್ರಧ್ಹಾನಿಯಾಗಿದ್ದಾಗ ದೇಶದ ರಾಜಕೀಯ, ಆರ್ಥಿಕ, ಸಾಮಾಜಿಕ ಪರಿಸ್ಥಿತಿ ದುಸ್ಥಿತಿಯಲ್ಲಿತ್ತು. ಇಂಥ ಸಂದರ್ಭದಲ್ಲಿ ದೇಶವನ್ನು ಕಟ್ಟುವ ಕೆಲಸವನ್ನು ಮಾಡಿದರು.

ಇಂದಿರಾಗಾಂಧಿಯವರು ದೇಶವನ್ನು ಬಲಪಡಿಸುವ ಹಾಗೂ ಬಡವರಿಗೆ ಶಕ್ತಿ ತುಂಬಿದರು. ವಿರೋಧ ಪಕ್ಷದವರು ಇಂದಿರಾಗಾಂಧಿ ಹಠಾವೋ ಎಂಬ ಟೀಕೆಗೆ, ಗರೀಬಿ ಹಠಾವೋ ಎಂದು ಪ್ರತ್ಯುತ್ತರ ನೀಡುತ್ತಿದ್ದರು. ದೇಶದಲ್ಲಿ ಆಹಾರ ಸಮಸ್ಯೆ ತಲೆದೋರಿದ ಸಂದರ್ಭದಲ್ಲಿ ಬಾಬು ಜಗಜೀವನರಾಂ ರವರ ಸಹಕಾರದೊಂದಿಗೆ ಹಸಿರು ಕ್ರಾಂತಿಯನ್ನು ತಂದು ಅಹಾರ ಸ್ವಾವಲಂಬನೆಯನ್ನು ತಂದರು. ದೇಶದ ಜನಸಂಖ್ಯೆ ಹೆಚ್ಚಿದ್ದು, ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೇವೆ. ನಿರಂತರ ಹಸಿರುಕ್ರಾಂತಿ ನಡೆಯಬೇಕಿದೆ. ಪ್ರಧಾನಿಯಾಗಿ ಇಂದಿರಾ ಗಾಂಧಿಯವರು ಬಲಿಷ್ಠ ರಾಷ್ಟ್ರವನ್ನು ನಿರ್ಮಿಸಿದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ದುರ್ಗೆ ಎಂದು ಕರೆದಿದ್ದರು:

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ದೇಶದ ಉಕ್ಕಿನ ಮಹಿಳೆಯನ್ನು ಸ್ಮರಿಸುವ ದಿನ ಇದು. ಸಂಸತ್ ಭವನದಲ್ಲಿ ಇಂದಿರಾಗಾಂಧಿಯವರನ್ನು ದುರ್ಗೆ ಎಂದು ಕರೆದರು. ಇಂದಿರಾಗಾಂಧಿವರಂತೆ ಇಡೀ ಜಗತ್ತಿನಲ್ಲಿ ಯಾವ ನಾಯಕರೂ ಕೊಡುಗೆ ನೀಡಿಲ್ಲ. ಅವರು ದೇಶಕ್ಕಾಗಿ ಆಸ್ತಿ, ಪ್ರಾಣ ತ್ಯಾಗ ಮಾಡಿದ್ದಾರೆ. ಅವರು ಈ ದೇಶಕ್ಕೆ ಕೊಡುಗೆ ಸ್ಮರಿಸಿಕೊಳ್ಳಬೇಕು. ದೇಶಕ್ಕೆ ದಿಕ್ಸೂಚಿ ನೀಡಿದ್ದರು ಎಂದು ಹೇಳಿದರು.

ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಹಾಗೂ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ