Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆಲಂಗಾಣದಲ್ಲಿ ಬದಲಾವಣೆ ಗಾಳಿ: ಜಮೀರ್ ಅಹಮದ್ ಖಾನ್

ಅದಿಲಾಬಾದ್, ನ.18: ತೆಲಂಗಾಣದಲ್ಲಿ ಹತ್ತು ವರ್ಷಗಳ ಕೆಸಿಆರ್ ಆಡಳಿತದಿಂದ ಜನತೆ ಆಕ್ರೋಶ ಗೊಂಡಿದ್ದು, ಬದಲಾವಣೆ ಗಾಳಿ ಬೀಸುತ್ತಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ತೆಲಂಗಾಣದ ಅದಿಲಾಬಾದ್ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಂದಿ ಶ್ರೀನಿವಾಸ ರೆಡ್ಡಿ ಪರ ಖ್ಯಾತ ನಟ ಅಕ್ಬರ್ ಬಿನ್ ತಬರ್ ಜತೆಗೂಡಿ ಸುಂದರಿಯಾ ನಗರದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಅವರು, ತೆಲಂಗಾಣ ದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

ರಾಜ್ಯದಲ್ಲಿ ಹತ್ತು ವರ್ಷ ಆಡಳಿತ ನಡೆಸಿದ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷ ಜನರ ನಿರೀಕ್ಷೆ ಹುಸಿ ಗೊಳಿಸಿದೆ. ಕೊಟ್ಟ ಮಾತು ತಪ್ಪಿದೆ, ಜನ ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಐದು ಭರವಸೆ ಈಡೇರಿಸಿದ್ದು ಅದೇ ರೀತಿ ತೆಲಂಗಾಣ ದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಗ್ಯಾರಂಟಿ ಜಾರಿ ಗೊಳಿಸಿಯೇ ತೀರಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿ ಆರ್ ಎಸ್ ಮುಖಂಡ ಮಹಮದ್ ರಫಿ ಹಾಗೂ ಬೆಂಬಲಿಗರು ಜಮೀರ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು. ನಂತರ ದ್ವಾರಕಾ ನಗರದಲ್ಲಿ ಬಹಿರಂಗ ಸಭೆ ನಡೆಸಿ ಮತಾಯಾಚನೆ ಮಾಡಿದರು.

ಮಹಾರಾಷ್ಟ್ರ ಮಾಜಿ ಸಚಿವ ಅನಿಸ್ ಅಹಮದ್, ಲೋಕಸಭೆ ಕ್ಷೇತ್ರದ ಉಸ್ತುವಾರಿ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎಂಐಎಂ ಪಾಲಿಕೆ ಸದಸ್ಯ ರಶೀದ್ ಭಾಯ್ ಹಾಗೂ ಬಿಆರ್‌ಎಸ್‌, ಎಎಪಿಯ ಹಲವಾರು ಮುಖಂಡರು ಜಮೀರ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.

ಸಂಜೆ ಅಸೀಫಾಬಾದ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜ್ಮಿರಾ ಶ್ಯಾಮ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ