Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಾರ್ದನ ರೆಡ್ಡಿ ಪ್ರತ್ಯೇಕ ಪಕ್ಷ: ಕಂಗಾಲಾದ ರೆಡ್ಡಿ ಸಹೋದರರು, ಶ್ರೀರಾಮುಲು

ಬೆಂಗಳೂರು: ಜನಾರ್ದನ ರೆಡ್ಡಿ ಕೃಪಾಕಟಾಕ್ಷ ಇಲ್ಲದೆ ಗೆಲುವು ಸುಲಭವಲ್ಲ ಎಂಬುದು ರೆಡ್ಡಿ ಸಹೋದರರು ಮತ್ತು ಆಪ್ತ ಸ್ನೇಹಿತ ಶ್ರೀರಾಮುಲು ಸಹಿತ ಕಲ್ಯಾಣ ಕರ್ನಾಟಕ ಹಲವು ಕ್ಷೇತ್ರಗಳಲ್ಲಿ ಸಾಬೀತಾಗುತ್ತಿದೆ.

ಬಿಜೆಪಿಯಿಂದ ಅವಮಾನ ಅನುಭವಿಸಿ ಕರ್ನಾಟಕ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಎಂಬ ಪಕ್ಷ ಸ್ಥಾಪಿಸಿರುವ ಜನಾರ್ದನ ರೆಡ್ಡಿ ಒಂಟಿಯಾಗಿಯೇ ರಾಜಕೀಯ ಚದುರಂಗದಾಟ ಆರಂಭಿಸಿದ್ದರು. ಅವರ ಪತ್ನಿ ಅರುಣಾ ಜನಾರ್ದನ ರೆಡ್ಡಿ ಅವರನ್ನು ಹೊರತುಪಡಿಸಿದರೆ 2008ರಿಂದ ಐದು ವರ್ಷಗಳ ಕಾಲ ಬಳ್ಳಾರಿಯನ್ನು ಆಳಿದಂತಹ ಅವರ ಬಂಟರ ಪಡೆಗಳೆಲ್ಲಾ ಕೈಕೊಟ್ಟಿದ್ದರು. ಒಬ್ಬರೇ ರಾಜಕೀಯದ ಚದುರಂದಾಟಕ್ಕೆ ರೆಡ್ಡಿ ಮುಂದಾಗಿದ್ದರು.

ಗಂಗಾವತಿಯಲ್ಲಿ ಜನಾರ್ದರೆಡ್ಡಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ಪರಣ್ಣ ಮುನವಳ್ಳಿ ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಬಳ್ಳಾರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ನಾರಾ ಭರತರೆಡ್ಡಿ ಮುಂದೆ ಇದ್ದರೆ ಎರಡನೇ ಸ್ಥಾನದಲ್ಲಿ ಜನಾರ್ದನ ರೆಡ್ಡಿ ಪತ್ನಿ ಅರುಣಾ ಜನಾರ್ದನ ರೆಡ್ಡಿ ಇದ್ದಾರೆ. ಮೂರನೇ ಸ್ಥಾನಕ್ಕೆ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ಕುಸಿದಿದ್ದಾರೆ.

ಮತ್ತೊಂದೆಡೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿರುವ ಸಚಿವ, ಜನಾರ್ದನ ರೆಡ್ಡಿ ಆಪ್ತ ಸ್ನೇಹಿತ ಶ್ರೀರಾಮುಲು ಸತತ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಬಿ. ನಾಗೇಂದ್ರ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡೇ ಬರುತ್ತಿದ್ದಾರೆ. ರೆಡ್ಡಿ ಪಕ್ಷಕ್ಕೆ ಶ್ರೀರಾಮುಲು ಸೇರ್ಪಡೆ ಆಗಲಿಲ್ಲ, ಮತ್ತೊಂದೆಡೆ ಶ್ರೀರಾಮುಲು ಅವರಿಗೆ ರೆಡ್ಡಿ ಸಹಾಯವನ್ನೂ ಮಾಡಲಿಲ್ಲ ಎಂಬುದು ವಿಶೇಷ.

ಮತ್ತೊಂದೆಡೆ ಹರಪನಹಳ್ಳಿಯಲ್ಲಿ ಜನಾರ್ದನ ರೆಡ್ಡಿ ಮತ್ತೊಬ್ಬ ಸಹೋದರ ಕರುಣಾಕರ ರೆಡ್ಡಿ ಅವರೂ ಸಹ ಹಿನ್ನಡೆ ಅನುಭವಿಸುತ್ತಿದ್ದಾರೆ.

ಹೀಗೆ ರೆಡ್ಡಿ ಸಹೋದರರು ಮತ್ತು ಆಪ್ತ ಸ್ನೇಹಿತ ರೆಡ್ಡಿ ಸಹಾಯವಿಲ್ಲದೆ ಕಣಕ್ಕೆ ಇಳಿದವರು ಈಬಾರಿ ಹಿನ್ನಡೆ ಅನುಭವಿಸುತ್ತಿರುವುದು ನೋಡಿದರೆ ರೆಡ್ಡಿ ಇನ್ನೂ ತನ್ನ ಪ್ರಭಾವ ರಾಜಕೀಯದಲ್ಲಿ ಉಳಿಸಿಕೊಂಡಿದ್ದಾರೆ ಎಂಬುದರಲ್ಲಿ ಅನುಮಾನ ಕಾಡುತ್ತಿಲ್ಲ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ