Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಗಂಗಾವತಿ ಕೈ ಟಿಕೆಟ್ ವಂಚಿತ ಹೆಚ್. ಆರ್. ಶ್ರೀನಾಥ್ ನಿವಾಸಕ್ಕೆ ಜನಾರ್ಧನ ರೆಡ್ಡಿ ಬೇಟಿ

ಸುದ್ದಿಮೂಲವಾರ್ತೆ

ಗಂಗಾವತಿ,ಏ.೯- ಗಂಗಾವತಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮ್ಮ ಕೈ ತಪ್ಪುತ್ತಿರುವುದಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್. ಆರ್. ಶ್ರೀನಾಥ್ ಇದೆ. ೧೯ರ ನಂತರ ತಮ್ಮ ಮುಂದಿನ ರಾಜಕೀಯ ನಡೆ ಪ್ರಕಟಿಸುವುದಾಗಿ ಹೇಳಿಕೆ ನೀಡಿದ್ದರ ಹಿನ್ನೆಲೆ ಕಳೆದ ಶನಿವಾರ ಗಂಗಾವತಿ ಬಿಜೆಪಿ ಹಾಲಿ ಶಾಸಕ ಪರಣ್ಣ ಮುನವಳ್ಳಿ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಪ್ರತ್ಯೇಕವಾಗಿ ಶ್ರೀನಾಥ್‌ರ ನವಾಸಕ್ಕೆ ಭೇಟಿ ನೀಡಿ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಮತ್ತು ಚುನಾವಣೆಯಲ್ಲಿ ತಮಗೆ ಬೆಂಬಲಿಸುವಂತೆ ಕೋರಿದ್ದಾರೆಂದು ತಿಳಿದಿದೆ.

ಪ್ರಸಕ್ತ ಚುನಾವಣೆ ರಾಜಕೀಯ ವಿದ್ಯಮಾನ ಕುರಿತು ಶಾಸಕ ಪರಣ್ಣ ಮುನವಳ್ಳಿ ಶ್ರೀನಾಥರೊಂದಿಗೆ ಸುಮಾರು ಒಂದು ಗಂಟೆವರೆಗೆ ರಹಸ್ಯವಾಗಿ ಸುರ್ಧೀರ್ಘ ಮಾತುಕತೆ ನಡೆಸಿ ಬಿಜೆಪಿ ಪಕ್ಷಕ್ಕೆ ಸೇರಲು ಆಹ್ವಾನಿಸಿದ್ದಾರೆ. ಒಂದು ವೇಳೆ ಪಕ್ಷಕ್ಕೆ ಸೇರದಿದ್ದರೂ ಚುನಾವಣೆಯಲ್ಲಿ ತಮಗೆ ಬೆಂಬಲಿಸುವಂತೆಯೂ ಮನವಿ ಮಾಡಿದ್ದಾರೆಂದು ಗೊತ್ತಾಗಿದೆ.

ಗಾಲಿ ಜನಾರ್ಧನರೆಡ್ಡಿ ಕೂಡ ಶ್ರೀನಾಥ್ರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಸಂಸದ ಎಚ್. ಜಿ. ರಾಮುಲು ಅವರ ಆರೋಗ್ಯ ವಿಚಾರಿಸಿ ಬಳಿಕ ಹೆಚ್.ಆರ್. ಶ್ರೀನಾಥ್ ಜ್ಯೊತೆ ಗುತ್ತವಾಗಿ ಮಾತುಕತೆ ನಡೆಸಿ ತಮ್ಮ ಪಕ್ಷಕ್ಕೆ ಸೇರುವಂತೆ ಇಲ್ಲವೇ ಈ ಚುನಾವಣೆಯಲ್ಲಿ ತಮಗೆ ಬೆಂಬಲಿಸು ಕೋರಿದ್ದಾರೆಂದು ತಿಳಿದು ಬಂದಿದೆ.
ಶ್ರೀನಾಥ್ ಮಾತ್ರ ಈ ಇಬ್ಬರೂ ನಾಯಕರಿಗೆ ಸಕರಾತ್ಮಕವಾಗಿ ಸ್ಪಂದಿಸಿ ಈಗೇನು ನನ್ನ ಅಚಲ ನಿರ್ಧಾರ ತಿಳಿಸಲಾರೆ ಈ ತಿಂಗಳ ೨೦ರ ನಂತರ ಮುಂದಿನ ನನ್ನ ರಾಜಕೀಯ ನಡೆ ತಿಳಿಸುವೆ ಎಂದು ಶ್ರೀನಾಥ್ ತಿಳಿಸಿದ್ದಾರೆಂದು ಗೊತ್ತಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ದ್ವಿತೀಯ ಪಟ್ಟಿಯಲ್ಲಿ ಗಂಗಾವತಿ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರು ಘೋಷಿಸಿದ್ದ ದಿನವೇ ಹೆಚ್.ಆರ್. ಶ್ರೀನಾಥ್ ಈ ಪಕ್ಷದ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು, ಮಾಜಿ ಸಿಎಂ ಸಿದ್ಧರಾಮಯ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇದನ್ನು ಗಮನಿಸಿದ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನರೆಡ್ಡಿ ಈ ಮೂವರೂ ಒಂದೇ ದಿನ ಪ್ರತ್ಯೇಕವಾಗಿ ಶ್ರೀನಾಥ್ ಮನೆ ಭೇಟಿ ನೀಡಿ ಮುಂದೆ ರಾಜಕೀಯವಾಗಿ ಇವರ ಬೆಂಬಲ ಪಡೆಯಲು ಮುಂದಾಗಿದ್ದು, ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ