Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. 15 ನಂತರ ಎಲ್ಲಾ ತಾಲೂಕುಗಳಲ್ಲೂ ಜನತಾ ದರ್ಶನ

ಸುದ್ದಿಮೂಲ ವಾರ್ತೆ

ಮೈಸೂರು,ನ.29 : ಜಿಲ್ಲಾಡಳಿತದ ವತಿಯಿಂದ ಬುಧವಾರ ಟಿ.ನರಸೀಪುರ ಪಟ್ಟಣದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ.ಮಹದೇವಪ್ಪನವರು ನಡೆಸಿದ ಜನದರ್ಶನದಲ್ಲಿ ಸರ್ಕಾರಿ ಕಚೇರಿಗಳ ವಿಳಂಬ ನೀತಿ ಸೇರಿದಂತೆ ಅಪಾರ ಸಮಸ್ಯೆಗಳ ದರ್ಶನವಾಯಿತು.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಚಿವರು, ಸಮಸ್ಯೆ ಬಗೆಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನತಾ ದರ್ಶನ ಹಿನ್ನೆಲೆ ತಾಲ್ಲೂಕಿನಲ್ಲಿ ಹೋಬಳಿವಾರು ಅರ್ಜಿ ಕರೆದಿದ್ದು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 167 ಅರ್ಜಿದಾರರ ಅಹವಾಲನ್ನು ಸ್ವೀಕರಿಸಿ, ಸಮಸ್ಯೆ ಆಲಿಸಿದರು. ಅದಲ್ಲದೆ, ಅರ್ಜಿ ಸಲ್ಲಿಸದೆ ಇದ್ದಂತಹ ಜನರನ್ನೂ ಕರೆದು ಅವರ ಕುಂದು ಕೊರತೆಗಳನ್ನು ವಿಚಾರಿಸಲಾಯಿತು.

ಆಡಳಿತ ಚುರುಕುಗೊಳಿಸಿ, ಜನಪರವಾದ ಆಡಳಿತದ ವಾತಾವರಣ ಸೃಷ್ಟಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಸಂಕಷ್ಟದಲ್ಲಿರುವ ಜನರು ನೇರವಾಗಿ ಬಂದು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ತಾಲೂಕುಗಳಲ್ಲೂ ಜನತಾ ದರ್ಶನ : ವಿಧಾನಸಭೆಯ ಅಧಿವೇಶನ ಮುಗಿದ ಬಳಿಕ ಡಿ. 15 ನಂತರ ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಿ ಜ‌ನರ ಸಮಸ್ಯೆಗಳನ್ನು ಆಲಿಸಲಾಗುವುದು. ಜಿಲ್ಲಾಡಳಿತ, ತಾಲ್ಲೂಕು ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರು ತಿಂಗಳುಗಟ್ಟಲೆ ತಮ್ಮ ಸಮಸ್ಯೆಗಳ ಅರ್ಜಿ ಹಿಡಿದು ಸರ್ಕಾರಿ ಕಚೇರಿಗೆ ಅಲೆದಾಡಬಾರದು ಎಂಬುದು ಮೂಲ ಉದ್ದೇಶವಾಗಿದೆ ಎಂದರು.

ಕಚೇರಿಯಲ್ಲಿ ಅಧಿಕಾರಿಗಳು ಸಿಗಲ್ಲ

ಈ ಸಂದರ್ಭದಲ್ಲಿ ರಾಜು ಎಂಬುವರು ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಗೆ ದೊರಕುವುದಿಲ್ಲ. ಇದರಿಂದ ಜನರು ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಲು ತೊಂದರೆ ಉಂಟಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೆಲವೊಮ್ಮೆ ಅಧಿಕಾರಿಗಳಿಗೆ ಸಭೆ ಸೇರಿದಂತೆ ಇನ್ನಿತರ ಕ್ಷೇತ್ರಭೇಟಿ ಇರುತ್ತದೆ. ಆದರೆ ಸುಳ್ಳು ಹೇಳಿ ಕಚೇರಿಗೆ ಹಾಜರಾಗದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಹೇಳಿದರು.

ಸಾಗುವಳಿ ಪತ್ರ ನೀಡಲ್ಲ : ಹಳೇಕೆಂಪಯ್ಯನ ಹುಂಡಿ ಗ್ರಾಮದ ರಾಚಯ್ಯ ಅವರು ಸಾಗುವಳಿ ಹಕ್ಕುಪತ್ರ ನೀಡುತ್ತಿಲ್ಲ. ಕಚೇರಿಗೆ ಅಲೆದಾಡಿ ಸಾಕಾಗಿದೆ. ದಯವಿಟ್ಟು ಸಾಗುವಳಿ ಚೀಟಿ ಕೊಡಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಜಿಲ್ಲಾಧಿಕಾರಿ ಮಾತಾನಾಡಿ, ನೀವು ಅರ್ಹರಿದ್ದರೆ ಖಂಡಿತ ಹಕ್ಕುಪತ್ರ ದೊರಕಿಸಿಕೊಡಲಾಗುವುದು. ಈ ಸಂಬಂಧ ಮತ್ತೊಮ್ಮೆ ಅರ್ಜಿ ಪರಿಶೀಲಿಸಲಾಗುವುದು ಎಂದರು.

ಕಬ್ಬಿನ ಬಾಕಿ ಹಣ

ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಮಾತನಾಡಿ, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರಿಗೆ ಬಾಕಿ ಹಣ ನೀಡಿಲ್ಲ. ಸರ್ಕಾರದ ವತಿಯಿಂದ 150 ರೂ. ಹೆಚ್ಚುವರಿ ಹಣವನ್ನೂ ನೀಡಿಲ್ಲ‌. ಬರಗಾಲದಲ್ಲಿ ರೈತರ ಬೆಳೆ ನಾಶವಾಗಿದ್ದು, ಕನಿಷ್ಠ 25 ಸಾವಿರ ಬರ ಪರಿಹಾರ ‌ನೀಡಬೇಕು. ವಿದ್ಯುತ್ ಸರಿಯಾಗಿ ಒದಗಿಸಬೇಕು ಎಂದು ಮ‌ನವಿ ಮಾಡಿದರು.

ಬಸ್ ಸಂಚಾರಕ್ಕೆ ಕ್ರಮ

ತಾಲ್ಲೂಕಿನ ಕೆಲವು ಗ್ರಾಮಗಳಿಗೆ ಕೆಎಸ್ಆರ್‌ಟಿಸಿ ಬಸ್ ಸೌಲಭ್ಯವಿಲ್ಲ ಎಂಬ ಸಮಸ್ಯೆ ಕುರಿತು ಮಾತನಾಡಿದ ಸಚಿವರು, ತಾಲ್ಲೂಕಿನ ಹಳ್ಳಿಗಳಲ್ಲಿ ಬಸ್ ಸಂಚಾರಕ್ಕೆ ಈಗಾಗಲೇ ಕ್ರಮವಹಿಸಲಾಗಿದೆ. ಬಸ್ ಸಂಚಾರ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಕೆಲವೇ ದಿನಗಳಲ್ಲಿ ಬಸ್‌ಗಳ ನಿಗಧಿತ ಸಮಯಕ್ಕೆ ಸಂಚರಿಸಲಿದ್ದು, ಶಾಲಾ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಕೆರೆಗಳಿಗೆ ನೀರು ತುಂಬಿಸಲು ಸೂಚನೆ

ತಾಲ್ಲೂಕಿನಲ್ಲಿ ಬರ ಆವರಿಸಿದ್ದು, ಜಾನವಾರುಗಳಿಗೆ ಕುಡಿಯಲು ನೀರಿನ ಕೊರತೆ ಉಂಟಾಗಬಾರದು ಎಂಬ ಉದ್ದೇಶದಿಂದ ಎಲ್ಲಾ ಕೆರೆಗಳನ್ನು ತುಂಬಿಸುವಂತೆ ನೀರಾವರಿ ಇಲಾಖೆಯ ಎಂಜಿನಿಯರ್‌ಗೆ ಈ ಮೊದಲೇ ಸೂಚಿಸಲಾಗಿತ್ತು. ಅದರಂತೆ ಬಹುತೇಕ ಕೆರೆಗಳಿಗೆ ನೀರು ತುಂಬಿಸಿದ್ದು, ಬಾಕಿ ಉಳಿದಿರುವ ಕೆರೆಗಳಿಗೆ ಕೂಡಲೇ ನೀರು ತುಂಬಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಪಂ ಸಿಇಓಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ನಂದಿನಿ, ತಹಶಿಲ್ದಾರ್ ಸುರೇಶಾಚಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ