Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಜಯಚಾಮರಾಜೇಂದ್ರ ಒಡೆಯರ್‌ ಜಯಂತಿ 

ಸುದ್ದಿಮೂಲ ವಾರ್ತೆ

ಮೈಸೂರು, ಜು.18 : ಮೈಸೂರಿನ ರಾಜ ಜಯಚಾಮರಾಜೇಂದ್ರ ಒಡೆಯರ್ ಅವರ 104ನೇ ಜನ್ಮ ಜಯಂತಿಯನ್ನು ಮಂಗಳವಾರ ನಗರದಲ್ಲಿ ಆಚರಿಸಲಾಯಿತು.

ಹಿರಿಯ ಸಮಾಜಸೇವಕ ಡಾ.ಕೆ ರಘುರಾಮ್ ವಾಜಪೇಯಿ ಅವರು ಒಡೆಯರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಯದುವಂಶದ ಕೊನೆಯ ಅರಸರಾಗಿದ್ದ ಜಯ ಚಾಮರಾಜೇಂದ್ರ ಒಡೆಯರ್ ಅವರು ಅತ್ಯಂತ ಸಂಭಾವಿತ ಪ್ರಜಾವಾತ್ಸಲ್ಯ ಪ್ರಜಾ ಸೂಕ್ಷ್ಮಗಳನ್ನು ಅರಿತ ಮಹಾರಾಜರಾಗಿದ್ದರು. ಕಲೆ, ಸಂಸ್ಕೃತಿ, ಶಿಕ್ಷಣ ಪ್ರೇಮಿಗಳಾಗಿದ್ದರು. ನಾಡಿನ ಅಭಿವೃದ್ದಿಗೆ ಸಂಕಲ್ಪ ತೊಟ್ಟಿದ್ದರು ಎಂದರು.

ಡಾ. ವೈ ಡಿ ರಾಜಣ್ಣ ಮಾತನಾಡಿ, ಗ್ರಾಮೀಣ ಬದುಕಿನ ಜನಜೀವನ ಹಸನಾಗಬೇಕೆಂಬ ಹಂಬಲವೊಂದಿದ್ದ ಒಡೆಯರ್ ರವರು ಸ್ವಾತಂತ್ರ್ಯ ಪೂರ್ವದಲ್ಲಿ ಪಂಚವಾರ್ಷಿಕ ಯೋಜನೆಯ ಕಲ್ಪನೆಯ ಮೂಲಕ ಸಂಸ್ಥಾನದ ಅಭಿವೃದ್ಧಿಗೆ ಸಂಕಲ್ಪ ತೊಟ್ಟರು ಸ್ವತಹ ಸಂಗೀತ ಪ್ರೇಮಿಗಳಾಗಿದ್ದ ಅವರು ಆಸ್ಥಾನದಲ್ಲಿ ಸಾಹಿತ್ಯ ಸಂಗೀತ ಕ್ಷೇತ್ರದ ವಿದ್ವಾಂಸರಿಗೆ ಆಶ್ರಯದಾತರಾಗಿದ್ದರು ಆ ಮೂಲಕ ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಸಾಂಸ್ಕೃತಿಕ ವ್ಯಕ್ತಿತ್ವದ ಅಭಿವೃದ್ಧಿಯ ರೂವಾರಿಗಳು ಎಂದು ಹೇಳಿದರು.

ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಬೆಟ್ಟೇಗೌಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಮುಡಾ ಮಾಜಿ ಸದಸ್ಯರಾದ ಲಕ್ಷ್ಷೀದೇವಿ .ಕೆ, ಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್‌, ಮಹಾಸಭಾ ಪದಾಧಿಕಾರಿಗಳಾದ ಚಂದ್ರಶೇಖರ್.ಕೆ ಬಿ‌ ಲಿಂಗರಾಜು, ಯುವ ಮುಖಂಡ ಅಜಯ್ ಶಾಸ್ತ್ರೀ, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಮಾ ವೆಂಕಟೇಶ್ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ