Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮನಗರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ

ಸುದ್ದಿಮೂಲ ವಾರ್ತೆ

ರಾಮನಗರ, ಜೂ.25: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವ ಕಾರ್ಯಕ್ರಮನ್ನು ಇದೇ 27ರ ಮಂಗಳವಾರದಂದು ಹಳೇ ಬಸ್ಸು ನಿಲ್ದಾಣದ ಬಳಿಯ ಕೆಂಗಲ್ ಹನುಮಂತ್ಯಯ್ಯ ವೃತ್ತದಲ್ಲಿ ಆಯೋಜಿಸಲಾಗಿದೆ ಎಂದು ಕೆಂಪೇಗೌಡ ಜಯುಂತ್ಯೋತ್ಸವ ಸಮಿತಿ ಅಧ್ಯಕ್ಷ ಕೆ.ಚಂದ್ರಯ್ಯ ತಿಳಿಸಿದರು.

ನಗರದಲ್ಲಿರುವ ಒಕ್ಕಲಿಗರ ಸಂಘದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿ ಕೆಂಪೇಗೌಡರ ಜಯಂತಿಯನ್ನು ಕೆಂಪೇಗೌಡ ಜಯಂತ್ಯೋತ್ಸವ ಸಮಿತಿ ಮತ್ತು ತಾಲ್ಲೂಕು ಒಕ್ಕಲಿಗರ ಸಂಘ ಸಂಯುಕ್ತವಾಗಿ ಹಮ್ಮಿಕೊಂಡಿದೆ. ಜಾತಿ, ಧರ್ಮ ಬೇಧ ಮಾಡದೆ ಸಮಾಜದ ಎಲ್ಲ ನಾಗರೀಕರು ಭಾಗವಹಿಸಲು ಅವರು ಮನವಿ ಮಾಡಿದರು.

ಆದಿ ಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥಸ್ವಾಮೀಜಿ, ಅರ್ಚಕರಹಳ್ಳಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಕುಣಿಗಲ್ ಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಭಾಗವಹಿಸಲಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸುವ ಕಾರ್ಯ ಕ್ರಮದಲ್ಲಿ ಶಾಸಕ ಎಚ್.ಸಿ.ಬಾಲಕೃಷ್ಣ, ಎಂಎಲ್‌ಸಿ ಎಸ್.ರವಿ, ಅ.ದೇವೇಗೌಡ, ಮಾಜಿ ಎಂಎಲ್‌ಸಿ ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಕೆ.ರಾಜು, ಎ.ಮಂಜುನಾಥ್, ಅನಿತಾಕುಮಾರಸ್ವಾಮಿ, ಸಿ.ಪಿ.ಯೋಗೇ ಶ್ವರ್, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು ಸೇರಿದಂತೆ ಹಲವು ಗಣ್ಯರು, ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾಹಿತಿ ಎಚ್.ಎಂ.ಬೋರಯ್ಯ ಉಪನ್ಯಾಸ ನೀಡಲಿದ್ದಾರೆ. ಕಡಬಗೆರೆ ಮುನಿರಾಜು ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಬಿ.ಚೇತನ್‌ಕುಮಾರ್, ಉಪಾಧ್ಯಕ್ಷ ಎಂ.ತಮ್ಮಯ್ಯ, ಸಹ ಕಾರ್ಯದರ್ಶಿ ಬೈರೇಗೌಡ, ನಿರ್ದೇಶಕ ಲೋಹಿತ್ ಕುಮಾರ್(ಬಾಬು), ಕೆಂಪೇಗೌಡ ಜಯುಂತ್ಯೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿ, ಕಾರ್ಯಾಧ್ಯಕ್ಷ ಜಿ.ಟಿ.ಕೃಷ್ಣ, ಉಪಾಧ್ಯಕ್ಷರಾದ ಸಿದ್ದರಾಮೇಗೌಡ, ಗೋಪಾಲಕೃಷ್ಣ ಜಂಟಿ ಕಾರ್ಯದರ್ಶಿ ಬಿಳಗುಂಬ ಪ್ರಸಾದ್, ಕಾಂಗ್ರೆಸ್ ಯುವ ಮುಖಂಡ ಗುರುಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ