Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕ ಬಳಕೆ ಪ್ಲಾಸ್ಟಿಕ್ ವಸ್ತು ಬಳಕೆ ನಿಲ್ಲಲಿ: ಜಯರಾಮ್ ರಾಯಪುರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.22: ಮದುವೆ ಸಹಿತ ಯಾವುದೇ ಸಮಾರಂಭಗಳು ಏಕ ಬಳಿಕೆಯ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತ ಆಗಬೇಕು ಎಂದು ದಕ್ಷಿಣ ವಲಯ ಆಯುಕ್ತರು ಹಾಗೂ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಸಲುವಾಗಿ ಬಿ.ಎಂ.ಎಸ್ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಎಸ್.ಡಬ್ಲ್ಯೂಎಂ.ಆರ್‌ಟಿ ರವರ ಸಹಯೋಗದೊಂದಿಗೆ "ತ್ಯಾಜ್ಯ ರಹಿತ ಸಮಾರಂಭಗಳ" ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಳೆದ ವರ್ಷದಿಂದ ಬೆಂಗಳೂರು ನಗರದಲ್ಲಿ ಸುಮಾರು ನಾಲ್ಕು ಸಾವಿರ ಟನ್‌ನಷ್ಟು ತ್ಯಾಜ್ಯ ಶೇಖರಣೆ ಯಾಗುತ್ತಿದ್ದು, ಅದರಲ್ಲಿ ಬಹುತೇಕ ಪ್ಲಾಸ್ಟಿಕ್ ತ್ಯಾಜ್ಯಗಳು ಆಗಿರುತ್ತದೆ. ಪ್ಲಾಸ್ಟಿಕ್ ತ್ಯಾಜ್ಯಗಳಿಂದ ವಾಯು ಮಾಲಿನ್ಯ ಉಂಟಾಗಲಿದ್ದು, ನಾಗರೀಕರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಆದ್ದರಿಂದ ನಗರದಲ್ಲಿ ದಿನನಿತ್ಯ ನಡೆಯುವ ವಿವಿಧ ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಕ್ಷಿಣ ವಲಯ ವ್ಯಾಪ್ತಿಯ ಕಲ್ಯಾಣಮಂಟಪ, ಪಾರ್ಟಿಹಾಲ್, ಕ್ಯಾಟರಿಂಗ್ ಉದ್ದಿಮೆಗಳ ಮಾಲೀಕರಿಗೆ ವಲಯ ಆಯುಕ್ತರು ಸೂಚಿಸಿದರು.

ಏಕಬಳಕೆ ಪ್ಲಾಸ್ಟಿಕ್‌ಗಳನ್ನು, ಕಲ್ಯಾಣ ಮಂಟಪ ಹಾಗೂ ಕ್ಯಾಟರಿಂಗ್ ಗಳಲ್ಲಿ ಉಪಯೋಗಿಸುವುದನ್ನು

ಸಂಪೂರ್ಣವಾಗಿ ನಿಷೇಧಿಸಿ ಅದರ ಬದಲಾಗಿ ಅಡಿಕೆ ಪಟ್ಟೆ, ಬಾಳೆ ಎಲೆ ಹಾಗೂ ಮರುಬಳಸಬಹುದಾದ ಉಕ್ಕಿನ ವಸ್ತುಗಳನ್ನು ಉಪಯೋಗಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಮನವರಿಕೆ ಮಾಡಲಾಯಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರ /ಬಯೋ ಗ್ಯಾಸ್ ಪ್ಲಾಂಟ್ಸ್/ ಥರ್ಮಕೋಲ್ ರಿಸೈಕ್ಲಿಂಗ್ ಕೇಂದ್ರಗಳನ್ನು ತೆರೆಯಲಾಗಿದ್ದು, ಮುಂದಿನ ದಿನಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುವುದೆಂದು ತಿಳಿಸುತ್ತಾ, ಸಭೆಗೆ ಆಗಮಿಸಿರುವ ಎಲ್ಲಾ ಪ್ರತಿನಿಧಿಗಳನ್ನು ಉದ್ದೇಶಿಸಿ, ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳದಲ್ಲಿಯೇ ಬೇರ್ಪಡಿಸಿ, ವಿಲೇವಾರಿಗೆ ಕ್ರಮವಹಿಸಬೇಕೆಂದು ತಿಳಿಸಿದರು.

ಸದರಿ ಜಾಗೃತಿ ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಫೌಂಡೇಷನ್ ಅಧ್ಯಕ್ಷರಾದ ಡಾ.ತೇಜಸ್ವಿನಿ ಅನಂತಕುಮಾರ್, ಸ್ತ್ರೀ ರೋಗ ತಜ್ಞ ಡಾ.ಮೀನಾಕ್ಷಿ ಭರತ್, ಜಂಟಿ ಆಯುಕ್ತರು (ದಕ್ಷಿಣ) ಡಾ. ಕೆ.ಜಗದೀಶ್ ನಾಯಕ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ