ಬಿಜೆಪಿ ಸೇರಿದ ಜೆಡಿಎಸ್, ಆಪ್ ಮುಖಂಡರು
ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.10: ಜೆಡಿಎಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎಎಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ರೆಡ್ಡಿ, ಮುಖಂಡರಾದ ಅಶೋಕ್ ಹಾಗೂ ಹಲವು ಬೆಂಬಲಿಗರು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಸ್ವಾಗತಿಸಿ ಶುಭ ಕೋರಿದರು.
ಬಿಜೆಪಿ ಸೇರಿದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ನಿಶ್ಚಿತವಾಗಿ ಬಿಜೆಪಿ ಅಭ್ಯರ್ಥಿಗಳಿಗೆ ವಿಜಯಮಾಲೆ ತೊಡಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಘೋಷಣೆಯಾದ ನಂತರವೂ ಬಿಜೆಪಿ ಸೇರುವವರ ಸಂಖ್ಯೆ ವೃದ್ಧಿಸುತ್ತಲೇ ಇದ್ದು, ಜನರ ನಡುವೆ ವಿಶ್ವಾಸಾರ್ಹ ಪಕ್ಷವಾಗಿ ಗುರುತಿಸಿಕೊಂಡಿರುವ ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.